Thursday, January 29, 2026

ಇರಾ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಆಗ್ನೇಸ್ ಡಿ ಸೋಜಾ, ಉಪಾಧ್ಯಕ್ಷರಾಗಿ ಮೊಯಿದು ಕುಂಞಿ ಆಯ್ಕೆ ‌

ಬಂಟ್ವಾಳ: ಇರಾ ಗ್ರಾಮ ಪಂಚಾಯತ್ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಆಗ್ನೇಸ್ ಡಿ ಸೋಜ ಹಾಗೂ ಮೊಯ್ದುಕುಂಞಿ ಆಯ್ಕೆಗೊಂಡರು.

ಕಾಂಗ್ರೆಸ್ ಬೆಂಬಲಿತ ಪಕ್ಷವು ಚುನಾವಣೆಯಲ್ಲಿ 19 ಸ್ಥಾನಗಳಲ್ಲಿ 13 ಸ್ಥಾನ ಪಡೆದು ಸ್ಪಷ್ಟ ಬಹುಮತ ಪಡೆದಿತ್ತು.

ಇಂದು ನಡೆದ ಅಧ್ಯಕ್ಷ , ಉಪಾಧ್ಯಕ್ಷ ಆಯ್ಕೆಯ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಧ್ಯಕ್ಷ , ಉಪಾಧ್ಯಕ್ಷರುಗಳಿಗೆ ತಲಾ 13 ಮತಗಳು ಬಿದ್ದು ಬಿಜೆಪಿ ಬೆಂಬಲಿತರಾಗಿ ಸ್ಪರ್ಧಿಸಿದ್ದ  ಭಾನುರೇಖಾ ಶೆಟ್ಟಿ ಹಾಗೂ ರಮೇಶ್ ಪೂಜಾರಿಯವರು ತಲಾ 6 ಮತಗಳನ್ನು ಪಡೆದರು.

ಎರಡೂ ಪಕ್ಷದಲ್ಲಿ ಯಾವುದೇ ಅಡ್ಡ ಮತದಾನ ನಡೆಯದೆ ಶಾಂತಿಯುತವಾಗಿ ಚುನಾವಣಾ ಪ್ರಕ್ರಿಯೆಯನ್ನು ಚುನಾವಣಾಧಿಕಾರಿಗಳಾದ ಮಂಚಿ ಪಶು ವೈದ್ಯಾಧಿಕಾರಿ ಕೃಷ್ಣಮೂರ್ತಿ ನಡೆಸಿಕೊಟ್ಟರು.

ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷರಾದ ಚಂದ್ರಹಾಸ ಕರ್ಕೇರ, ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪ್ರಶಾಂತ್ ಕಾಜವ, ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷರಾದ ಅಬ್ದುಲ್ ರಝಕ್ ಕುಕ್ಕಾಜೆ,ವಲಯ ಕಾಂಗ್ರೆಸ್ ಅಧ್ಯಕ್ಷರಾದ ಅನಿಲ್ ಕುಮಾರ್,ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳಾದ ಅಬ್ದುಲ್ ಜಲೀಲ್,ನಾಸಿರ್ ನಡುಪದವು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಅಭಿನಂಧಿಸಿದರು.

More from the blog

ಬೆಂಗಳೂರಿಗಿಂತ ಮಂಗಳೂರಿನಲ್ಲಿ ವಾಯು ಗುಣಮಟ್ಟ ಕಳಪೆ – ಅಚ್ಚರಿ ವರದಿ ಬಹಿರಂಗ..!

ಮಂಗಳೂರು : ರಾಜ್ಯದ ವಿವಿಧ ನಗರಗಳಲ್ಲಿ ವಾಯು ಗುಣಮಟ್ಟ (AQI) ಆತಂಕಕಾರಿ ಮಟ್ಟಕ್ಕೆ ತಲುಪಿದ್ದು, ಈ ಪೈಕಿ ರಾಜಧಾನಿ ಬೆಂಗಳೂರಿಗಿಂತ ಮಂಗಳೂರಿನಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿರುವುದು ವರದಿಯಾಗಿದೆ. ವರದಿಗಳ ಪ್ರಕಾರ, ಕರಾವಳಿ ಕರ್ನಾಟಕದ ಜಿಲ್ಲೆಗಳಾದ...

ದೈವೀಕೃಪೆಯಿಂದ ಮಾತ್ರ ಜೀವನರಥ ಎಳೆಯಬಹುದು : ಒಡಿಯೂರುಶ್ರೀ

ವಿಟ್ಲ: ಆತ್ಮರೂಪಿ ಭಗವಂತ ದೇಹದೊಳಗಿರುವಾಗಲೇ ಬದುಕಿನ ಸಾರ್ಥಕತೆ ಪಡೆಯಬೇಕು. ಧರ್ಮದ ಬಗ್ಗೆ ಮನೆಯಿಂದಲೇ ಜಾಗೃತಿ ಮೂಡಿಸುವ ಕಾರ್ಯವಾಗಬೇಕು. ಆಧ್ಯಾತ್ಮಿಕ ಬೆಳಕಿನಿಂದ ಮಾತ್ರ ರಾಷ್ಟ್ರ ಬೆಳಗಲು ಸಾಧ್ಯ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ...

ಕೊಳ್ನಾಡು: ಕಾಲುಜಾರಿ ಬಾವಿಗೆ ಬಿದ್ದು ಕೃಷಿಕ ಸಾವು

ವಿಟ್ಲ: ದಾರಿ ಬದಿಯ ಆವರಣವಿಲ್ಲದ ಬಾವಿಗೆ ಆಕಸ್ಮಿಕವಾಗಿ ಬಿದ್ದು ಕೃಷಿಕ ಕೊಳ್ನಾಡು ಗ್ರಾಮದ ಸಾಲೆತ್ತೂರು ಕೋಡಿ ನಿವಾಸಿ ಕೃಷ್ಣಪ್ಪ ಪೂಜಾರಿ(70) ಮೃತ ಪಟ್ಟಿದ್ದಾರೆ. ಮಂಗಳವಾರ ಸಂಜೆ ಎಂದಿನಂತೆ ಸಾಲೆತ್ತೂರು ಪೇಟೆಗೆ ಹೋಗಿ ಹಿಂತಿರುಗಿ ಬರುವಾಗ...

ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಗ್ರಾ.ಪಂ.ಸದಸ್ಯ ಹಾಶೀರ್ ಪೆರಿಮಾರ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

ಬಂಟ್ವಾಳ: ವಿದ್ಯುತ್ ಸಮಸ್ಯೆಯಿಂದ ಬೇಸೆತ್ತ ಗ್ರಾಮಸ್ಥರ ಸಮಸ್ಯೆಗೆ ಸಕಾಲದಲ್ಲಿ ಸ್ಪಂದಿಸಿದ ಪುದು ಗ್ರಾಮಪಂಚಾಯತ್ ಸದಸ್ಯನಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. ಪುದು ಗ್ರಾಮದ ಪೇರಿಮಾರ್ ವಾರ್ಡಿನ ರಾಷ್ಟ್ರೀಯ ಹೆದ್ದಾರಿ ಬದಿಯಿಂದ ದೇವಸ್ಯ, ಜಲಾಲಿಯ ನಗರ, ಮಾರಿಪಳ್ಳ...