ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಮಂಡಳಿಯಿಂದ ನೊಂದಾಯಿತ ಕಾರ್ಮಿಕರಿಗೆ ಯು.ಟಿ.ಖಾದರ್ ರವರ ನೇತೃತ್ವದಲ್ಲಿ ಕಿಟ್ ವಿತರಣೆಯನ್ನು ಇರಾ ಗ್ರಾಮ ಪಂಚಾಯತ್ ನಲ್ಲಿ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಪಂಚಾಯತ್ ಅಧ್ಯಕ್ಷರಾದ ಆಗ್ನೇಸ್ ಡಿಸೋಜ, ತಾಲೂಕು ಪಂಚಾಯತ್ ನಿಕಟ ಪೂರ್ವ ಅಧ್ಯಕ್ಷರಾದ ಚಂದ್ರಹಾಸ ಕರ್ಕೇರಾ, ಗ್ರಾಮ ಪಂಚಾಯತ್ ಸದಸ್ಯರಾದ ಅಬ್ದುಲ್ ರಝಾಕ್ ಕುಕ್ಕಾಜೆ, ಕೆ.ಟಿ. ಸುಧಾಕರ, ಪ್ರತಾಪ್ ಚಂದ್ರ, ಯಾಕೂಬ್, ನಳಿನಾಕ್ಷಿ, ಭಾನುರೇಖಾ, ಶರ್ಮೀಳಾ, ರಮೇಶ್. ಎಸ್. ಪೂಜಾರಿ ಉಪಸ್ಥಿತರಿದ್ದರು. ಕಾರ್ಯದರ್ಶಿ ನಳಿನಿ.ಎ.ಕೆ ಸ್ವಾಗತಿಸಿ, ಅಬ್ದುಲ್ ರಝಾಕ್ ರವರು ಧನ್ಯವಾದವಿತ್ತರು.

