Monday, January 26, 2026

ಸಂಸ್ಕೃತಿ, ಸಂಸ್ಕಾರ ಬೆಳೆಸಲು ಇಂತಹ ಉತ್ಸವಗಳು ಅತಿ ಅವಶ್ಯಕ : ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ

ಬಂಟ್ವಾಳ: ನಂಬಿಕೆಯಲ್ಲಿ ಬಲವಿದ್ದಾಗ ಅದು ನಮ್ಮನ್ನು ಮುನ್ನಡೆಸುತ್ತದೆ. ಸಂಸ್ಕೃತಿ, ಸಂಸ್ಕಾರ ಬೆಳೆಸಲು ಇಂತಹ ಉತ್ಸವಗಳು ಅತಿ ಅವಶ್ಯಕ ಎಂದು ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು.


ಅವರು ಜಕ್ರಿಬೆಟ್ಟು ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣಾ ಸಮಿತಿಯ ವತಿಯಿಂದ ೧೯ನೇ ವರ್ಷದ ಶ್ರೀ ಗಣೇಶೋತ್ಸವದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು. ಎಲ್ಲರಿಗೂ ವಿನಾಯಕನೇ ನಾಯಕನಾಗಿದ್ದು, ಆತನೇ ನಮ್ಮನ್ನು ಮುನ್ನಡೆಸುತ್ತಾನೆ ಎಂದರು.
ಸೋಲೂರು ಮಠದ ಪೀಠಾಽಪತಿ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಶೀರ್ವಚನ ನೀಡಿ, ಮನಸ್ಸು, ಮನಸ್ಸುಗಳು ಕೂಡಿದಾಗ ಸುಂದರ ಸಮಾಜ ನಿರ್ಮಾಣ ಸಾಧ್ಯ ಎಂದರು.
ಸಮಿತಿಯ ಗೌರವಾಧ್ಯಕ್ಷ, ಮಾಜಿ ಸಚಿವ ಬಿ.ರಮಾನಾಥ ರೈ ಅವರು ಪ್ರಸ್ತಾವನೆಗೈದು, ಇಂತಹ ಉತ್ಸವಗಳ ಮೂಲಕ ಸಮಾಜದಲ್ಲಿ ಶಾಂತಿ ನೆಲೆಸಲಿ ಎಂದರು.
ಕಲಾತರಂಗ ನಿರ್ಮಾಣದ ಮಂಗಳಮೂರ್ತಿ ಜಕ್ರಿಬೆಟ್ಟು ಗಣಪ ಆಲ್ಬಮ್ ಸಾಂಗ್ ಬಿಡುಗಡೆಗೊಳಿಸಲಾಯಿತು. ವೇದಿಕೆಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜ, ರೋಟರಿ ಜಿಲ್ಲಾ ಗವರ್ನರ್ ಎನ್.ಪ್ರಕಾಶ್ ಕಾರಂತ, ಬಂಟ್ವಾಳ ತಾಲೂಕು ಬಂಟರ ಸಂಘದ ಅಧ್ಯಕ್ಷ ಚಂದ್ರಹಾಸ ಡಿ.ಶೆಟ್ಟಿ, ಉದ್ಯಮಿ ಪ್ರಶಾಂತ್ ಸನಿಲ್, ಸಮಿತಿಯ ಅಧ್ಯಕ್ಷ ಬಿ.ಪದ್ಮಶೇಖರ್ ಜೈನ್ ಉಪಸ್ಥಿತರಿದ್ದರು.
ಸಮಿತಿ ಪ್ರಧಾನ ಕಾರ್ಯದರ್ಶಿ ರಾಜೀವ ಶೆಟ್ಟಿ ಎಡ್ತೂರು ಸ್ವಾಗತಿಸಿದರು. ಉಪಾಧ್ಯಕ್ಷ ಬೇಬಿ ಕುಂದರ್ ವಂದಿಸಿದರು. ಕಾರ್ಯದರ್ಶಿ ರಾಜೀವ ಕಕ್ಯಪದವು ಕಾರ್ಯಕ್ರಮ ನಿರ್ವಹಿಸಿದರು.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...