Monday, January 26, 2026

ಜಕ್ರಿಬೆಟ್ಟು: ಶ್ರೀ ಗಣೇಶನ ವಿಗ್ರಹದ ವೈಭವದ ಶೋಭಾಯಾತ್ರೆಯೊಂದಿಗೆ ಸಂಪನ್ನ

ಬಂಟ್ವಾಳ: ಜಕ್ರಿಬೆಟ್ಟು ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣಾ ಸಮಿತಿಯ ವತಿಯಿಂದ ೫ ದಿನಗಳ ಕಾಲ ನಡೆದ ೧೯ನೇ ವರ್ಷದ ಶ್ರೀ ಗಣೇಶೋತ್ಸವವು ಶ್ರೀ ಗಣೇಶನ ವಿಗ್ರಹದ ವೈಭವದ ಶೋಭಾಯಾತ್ರೆಯೊಂದಿಗೆ ಸಂಪನ್ನಗೊಂಡಿತು.

ರವಿವಾರ ಸಂಜೆ ಸಂಧ್ಯಾಪೂಜೆ, ವಿಸರ್ಜನಾ ಪೂಜೆ ನಡೆದು ಬಳಿಕ ಬೆÊಪಾಸ್ ರಸ್ತೆ, ಭಂಡಾರಿಬೆಟ್ಟು ನೆರೆ ವಿಮೋಚನಾ ರಸ್ತೆಯ ಮೂಲಕ ಬಂಟ್ವಾಳ ಪೇಟೆಯ ಮುಖ್ಯರಸ್ತೆಯಲ್ಲಿ ಸಾಗಿ ಶ್ರೀ ವೆಂಕಟರಮಣ ದೇವಸ್ಥಾನದ ಬಳಿ ನೇತ್ರಾವತಿ ನದಿಗೆ ವಿಗ್ರಹವನ್ನು ಜಲಸ್ತಂಭನ ಮಾಡಲಾಯಿತು. ವಿವಿಧ ಸ್ತಬ್ದ ಚಿತ್ರಗಳು ಶೋಭಾಯಾತ್ರೆಗೆ ಮೆರುಗು ನೀಡಿದರು.

ಗೌರವಾಧ್ಯಕ್ಷ, ಮಾಜಿ ಸಚಿವ ಬಿ.ರಮಾನಾಥ ರೈ, ಸಮಿತಿಯ ಅಧ್ಯಕ್ಷ ಬಿ.ಪದ್ಮಶೇಖರ್ ಜೈನ್, ಪದಾಽಕಾರಿಗಳು, ವಿವಿಧ ಕ್ಷೇತ್ರದ ಗಣ್ಯರು ಪಾಲ್ಗೊಂಡಿದ್ದರು.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...