Saturday, January 31, 2026

ಜಕ್ರಿಬೆಟ್ಟು ಜಾಕ್ವೆಲ್‌ಗೆ ಸಂಸದ ನಳಿನ್ ಕುಮಾರ್ ಭೇಟಿ- ವೀಕ್ಷಣೆ

ಬಂಟ್ವಾಳ : ಹೂಳು ತೆರವಿನಿಂದ ನೇತ್ರಾವತಿಯಲ್ಲಿ ನೀರು ಹರಿದ ಹಿನ್ನೆಲೆಯಲ್ಲಿ ಶನಿವಾರ ಸಂಸದ ನಳಿನ್ ಕುಮಾರ್ ಕಟೀಲು ಅವರು ಜಕ್ರಿಬೆಟ್ಟುವಿನ ಜಾಕ್‌ವೆಲ್‌ಗೆ ಭೇಟಿ ನೀಡಿ, ಪಂಪಿಂಗ್ ವ್ಯವಸ್ಥೆಯನ್ನು ವೀಕ್ಷಣೆ ಮಾಡಿದರು.
ಬಳಿಕ ನೇತ್ರಾವತಿ ನದಿಯಲ್ಲಿರುವ ಇಂಟೆಕ್‌ವೆಲ್‌ಗೆ ತೆರಳಿ ನೀರಿನ ಮಟ್ಟವನ್ನು ಪರಿಶೀಲನೆ ಮಾಡಿದರು.
ಇದೀಗ ಜಕ್ರಿಬೆಟ್ಟುವಿನಲ್ಲಿ ನೀರಿನ ಮಟ್ಟ ಮತ್ತಷ್ಟು ಹೆಚ್ಚಾಗಿದೆ. ತುಂಬೆಯಲ್ಲಿ ಶುಕ್ರವಾರ ಸಂಜೆಯಿಂದ ನಿರಂತರ ಪಂಪಿಂಗ್ ನಡೆಯುತ್ತಿರುವುದರಿಂದ 2.34 ಮೀ.ನಷ್ಟಿದ್ದ ನೀರು, ಶನಿವಾರ 2.27 ಮೀ.ನಲ್ಲಿ ನೀರು ಇದೆ. ಜಕ್ರಿಬೆಟ್ಟುವಿನ ಇಂಟೆಕ್‌ವೆಲ್‌ನಿಂದ ನೀರಿನ ಹರಿವಿನ ಪ್ರಮಾಣದಲ್ಲಿ ಇನ್ನಷ್ಟು ಹೆಚ್ಚಾದರಿಂದ ಇಂಟೆಕ್‌ವೆಲ್‌ನ ಸ್ಟೈನರ್ ಸಂಪೂರ್ಣವಾಗಿ ಮುಳುಗಿದೆ. ಇದರಿಂದ ಜಾಕ್‌ವೆಲ್‌ಗೆ ಸರಾಗವಾಗಿ ನೀರು ಪಂಪಿಂಗ್ ಕಾರ್ಯ ನಡೆಯುತ್ತಿದೆ ಎಂದು ಶಾಸಕ ರಾಜೇಶ್ ನಾಯ್ಕ್ ಅವರು ಸಂಸದರಿಗೆ ಪೂರಕ ಮಾಹಿತಿ ನೀಡಿದರು.

ನೆಕ್ಕಿಲಾಡಿ ಡ್ಯಾಂನಿಂದ ಹೆಚ್ಚುವರಿ ನೀರು ಹರಿದುಬಂದು ಎಂಆರ್‌ಪಿಎಲ್ ಡ್ಯಾಂನ ಅಲ್ಲಲ್ಲಿ ಶೇಖರಣೆಯಾಗಿತ್ತು. ಕಳೆದ 2 ದಿನಗಳಿಂದ ಶಾಸಕ ರಾಜೆಶ್ ನಾಯ್ಕ್ ನೇತೃತ್ವದಲ್ಲಿ ಪುರಸಭಾ ಸದಸ್ಯ ಗೋವಿಂದ ಪ್ರಭು ಅವರು ಮುತುವರ್ಜಿ ವಹಿಸಿ, ಡ್ಯಾಂನ ಗೇಟ್ ಮತ್ತು ಪರಿಸರದಲ್ಲಿ ತುಂಬಿದ್ದ ಹೂಳನ್ನು ತೆರವುಗೊಳಿಸಿದ ಪರಿಣಾಮ ನೀರು ಕೊಂಚ ಹರಿಯಲಾರಂಭಿಸಿ ಶುಕ್ರವಾರ ಜಕ್ರಿಬೆಟ್ಟುವಿನಲ್ಲಿರುವ ಇಂಟೆಕ್‌ವೆಲ್‌ನಲ್ಲಿ ನೀರು ಶೇಖರಣೆಯಾಗಿತ್ತು. ಶುಕ್ರವಾರ ಸಂಜೆ ನೀರಿನ ಒಳ ಹರಿವು ಹೆಚ್ಚಾದರಿಂದ ಈ ಮೊದಲು ಇಂಟೆಕ್‌ವೆಲ್ ಸಮೀಪ ಕಟ್ಟಿದ್ದ ಕಟ್ಟವನ್ನು ತೆರವು ಮಾಡಿ ಹೆಚ್ಚುವರಿ ನೀರನ್ನು ತುಂಬೆ ಡ್ಯಾಂನತ್ತ ಹರಿಯಬಿಡಲಾಗಿದೆ.
ಈ ಸಂದರ್ಭದಲ್ಲಿ ಪುರಸಭಾ ಸದಸ್ಯ ಗೋವಿಂದಪ್ರಭು, ಮಾಜಿ ಸದಸ್ಯ ದೇವದಾಸ ಶೆಟ್ಟಿ, ಬಿಜೆಪಿ ಮುಖಂಡರಾದ ಸುಲೋಚನಾ ಜಿ.ಕೆ.ಭಟ್, ಹರಿಕೃಷ್ಣ ಬಂಟ್ವಾಳ, ಪುರುಷೋತ್ತಮ ಶೆಟ್ಟಿ ವಾಮದಪದವು,ರಮಾನಾಥ ರಾಯಿ ಮೊದಲಾದವರಿದ್ದರು.

More from the blog

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...