Monday, February 2, 2026

ಏಪ್ರಿಲ್‌ 7ರಂದು ಕಳ್ಳಿಗೆ ಗ್ರಾಮದಲ್ಲಿ ಶ್ರೀರಾಮ ನಾಮ ತಾರಕ ಜಪಯಜ್ಞ

ಬಂಟ್ವಾಳ: ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ಪೆರಿಯೋಡಿಬೀಡು ಬಾಕಿಮಾರು ಗದ್ದೆಯಲ್ಲಿ ಏಪ್ರಿಲ್ 7, ಭಾನುವಾರದಂದು ಬೆಳಿಗ್ಗೆ 6.30ರಿಂದ ಶ್ರೀರಾಮ ನಾಮ ತಾರಕ ಜಪಯಜ್ಞ ನಡೆಯಲಿದೆ. ಮಾ.21ರಂದು ಇಂದು ಗುರುವಾರ ಪೆರಿಯೋಡಿಬೀಡು ಬಾಕಿಮಾರು ಗದ್ದೆಯಲ್ಲಿ ಚಪ್ಪರ ಮುಹೂರ್ತ ನಡೆಯಿತು.
10,000ಕ್ಕೂ ಅಧಿಕ ಸಂಖ್ಯೆಯಲ್ಲಿ ಭಕ್ತರು ಈ ಯಾಗಭೂಮಿಗೆ ಆಗಮಿಸುವ ನಿರೀಕ್ಷೆಯಿದೆ. ಇದಕ್ಕಾಗಿ ನೂರಾರು ಕಾರ್ಯಕರ್ತರ ವಿವಿಧ ಸಮಿತಿಗಳನ್ನು ರಚಿಸಲಾಗಿದೆ. ಕಳ್ಳಿಗೆ, ತುಂಬೆ, ಕೊಡ್ಮಾಣ್, ಮೇರಮಜಲು, ಪುದು ಗ್ರಾಮ ಮಾತ್ರವಲ್ಲದೆ ಜಿಲ್ಲೆಯ ವಿವಿಧೆಡೆಯಿಂದ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ಮಾಹಿತಿಯಿದೆ. ಸುಮಾರು 5 ಎಕರೆ ಜಾಗವನ್ನು ಪಾರ್ಕಿಂಗ್ ಗಾಗಿ ಆಯ್ಕೆಮಾಡಲಾಗಿದೆ. ಸುತ್ತಮುತ್ತಲಿನ 10ಕ್ಕೂ ಅಧಿಕ ಗ್ರಾಮಗಳಲ್ಲಿ ರಾಮಭಕ್ತರು ಈಗಾಗಲೇ ವೃತಾಚರಣೆಯಲ್ಲಿ ತೊಡಗಿದ್ದು, ಪ್ರತಿನಿತ್ಯ ರಾಮನಾಮದ ಮಂತ್ರ ಪಠಿಸುತ್ತಿದ್ದಾರೆ. ಒಟ್ಟು 1 ಕೋಟಿ ರಾಮಮಂತ್ರ ಜಪ ಮಾಡುವ ಸಂಕಲ್ಪ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

More from the blog

Panemangaluru : ಸ್ಕೂಟರ್ ಗೆ ಕಾರು ಡಿಕ್ಕಿ – ಸವಾರನಿಗೆ ಗಾಯ

ಬಂಟ್ವಾಳ: ಕಾರು ಡಿಕ್ಕಿಯಾಗಿ ಸ್ಕೂಟರ್ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಪಾಣೆಮಂಗಳೂರು ಸರ್ವೀಸ್ ರಸ್ತೆಯಲ್ಲಿ ನಡೆದಿದೆ. ಸ್ಕೂಟರ್ ಸವಾರ ನರಿಕೊಂಬು ನಿವಾಸಿ ಮುಸ್ತಫಾ ಗಾಯಗೊಂಡ ವ್ಯಕ್ತಿಯಾಗಿದ್ದಾನೆ. ಸ್ಕೂಟರ್ ಸವಾರ ಮುಸ್ತಫಾ ಅವರು ನರಿಕೊಂಬು ರಸ್ತೆಯಿಂದ...

ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಯಕ್ಷಗಾನ ತಾಳಮದ್ದಳೆ

ವಿಟ್ಲ: ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಯಕ್ಷಕಲಾ ಪ್ರತಿಷ್ಠಾನ ಪುಣಚ ಇವರಿಂದ ಮಾಸಿಕ 'ರಾವಣ ವಧೆ' ತಾಳಮದ್ದಳೆ ನಡೆಯಿತು. ಹಿಮ್ಮೇಳದಲ್ಲಿ ಭಾಗವತರಾಗಿ ಬಟ್ಯಮೂಲೆ ಲಕ್ಷ್ಮೀನಾರಾಯಣ ಭಟ್. ಚೆಂಡೆ ಮದ್ದಳೆಯಲ್ಲಿ ಡಾ. ಶ್ರೀ ಪ್ರಕಾಶ್ ಬಂಗಾರಡ್ಕ...

ವಿಕಸಿತ ಭಾರತಕ್ಕೆ ಭದ್ರ ತಳಹದಿ : ನಳಿನ್‌ ಕುಮಾರ್ ಕಟೀಲ್

ಮಂಗಳೂರು : ಪ್ರಧಾನಿ ಮೋದಿ ಅವರ ವಿಕಸಿತ ಭಾರತ ಸಾಕಾರಗೊಳಿಸಲು ಈ ಬಜೆಟ್ ಭದ್ರ ತಳಹದಿಯಾಗಿದೆ. ಕೃಷಿ, ಶಿಕ್ಷಣ, ಕೈಗಾರಿಕೆ, ಗ್ರಾಮೀಣಾಭಿವೃದ್ಧಿ, ಪ್ರವಾಸೋದ್ಯಮ ಸಹಿತ ಎಲ್ಲ ಕ್ಷೇತ್ರಗಳ ಅಭಿವೃದ್ಧಿಗೆ ಆದ್ಯತೆ ನೀಡಿರುವ, ದೇಶದ...

ಪ್ರಧಾನಿ ಮೋದಿ ಅವರ ವಿಕಸಿತ ಭಾರತ ಸಾಕಾರಗೊಳಿಸುವ ಯುವಶಕ್ತಿ ಆಧಾರಿತ ಬಜೆಟ್ : ಕ್ಯಾ. ಬ್ರಿಜೇಶ್ ಚೌಟ

ನವದೆಹಲಿ: ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಿರುವ ಕೇಂದ್ರ ಸರ್ಕಾರದ 2026-27ನೇ ಸಾಲಿನ ಬಜೆಟ್, ಭಾರತದ ಅಭಿವೃದ್ಧಿ ಪಥದಲ್ಲಿ ನಿರ್ಣಾಯಕ ಮೈಲಿಗಲ್ಲು ಆಗಿದ್ದು, ಇದು ಜನರ ನಿರೀಕ್ಷೆ ಹಾಗೂ ಸಾಮೂಹಿಕ ಸಹಭಾಗಿತ್ವದೊಂದಿಗೆ...