Wednesday, February 12, 2025

ಆ.14 ರಂದು ವಾಹನ ಜಾಥ

ಬಂಟ್ವಾಳ: ಅಖಂಡ ಭಾರತ ಸಂಕಲ್ಪ ದಿನಾಚರಣೆಯ ಅಂಗವಾಗಿ ವಿಶ್ವ ಹಿಂದು ಪರಿಷತ್, ಭಜರಂಗದಳ ಬಂಟ್ವಾಳ ಪ್ರಖಂಡದ ವತಿಯಿಂದ” ವಾಹನ ಜಾಥ” ಕಾರ್ಯಕ್ರಮವು ಆ.14 (ಬುಧವಾರ)ರಂದು ಸಂಜೆ 5 ಗಂಟೆಗೆ ನಡೆಯಲಿದೆ. ಬ್ರಹ್ಮರಕೊಟ್ಲು ಬ್ರಹ್ಮಸನ್ನಿಧಿಯ ವಠಾರದಿಂದ ಹೊರಡುವ ವಾಹನಜಾಥಕ್ಕೆ ಉದ್ಯಮಿ ಜಿತೇಂದ್ರ ಕೊಟ್ಟಾರಿ ಅವರು ಚಾಲನೆ ನೀಡುವರು. ಬಳಿಕ ಜಾಥವು ಬಿ.ಸಿ.ರೋಡ್, ಪಾಣೆಮಂಗಳೂರು, ಮೆಲ್ಕಾರ್ ಮಾರ್ಗವಾಗಿ ಪಣೋಲಿಬೈಲ್ ಕ್ಷೇತ್ರದ ದ್ವಾರದ ಬಳಿ ಸಂಪನ್ನಗೊಳ್ಳಲಿದ್ದು, ವಿ.ಹಿಂ.ಪ.ನ ಮಂಗಳೂರು ವಿಭಾಗದ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಸಮರೋಪ ಭಾಷಣ ಮಾಡಲಿದ್ದಾರೆ ಎಂದು ವಿಹಿಂಪ ಮತ್ತು ಭಜರಂಗದಳದ ಪ್ರಮುಖರಾದ ಆಶೋಕ್ ಶೆಟ್ಟಿ ಸರಪಾಡಿ, ಗುರುಪ್ರಸಾದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

More from the blog

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...

ನೇಣು ಬಿಗಿದು ಯುವಕ ಆತ್ಮಹತ್ಯೆ

ಬಂಟ್ವಾಳ: ಖಿನ್ನತೆಯಿಂದ ಅವಿವಾಹಿತ ವ್ಯಕ್ತಿಯೊರ್ವನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಮ್ಟಾಡಿ ನಿವಾಸಿ ಮೆಕ್ಸಿನ್ ತಾವ್ರೋ ಅವರ ಮಗ ಜೀವನ್  ತಾವ್ರೋ ( 37) ಆತ್ಮಹತ್ಯೆ ಮಾಡಿಕೊಂಡ ಯುವಕ. ‌‌‌ಜೀವನ್ ಅವರು ಅಗಾಗ...