ಕೊರೊನ ಎರಡನೇ ಅಲೆ ಹೆಚ್ಚಾದ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಆದೇಶದ ಅನ್ವಯ ಶ್ರೀರಾಮ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಯುವ ರೆಡ್ ಕ್ರಾಸ್ ಘಟಕ ವತಿಯಿಂದ ಕೊರೊನ ಜಾಗೃತಿ ಜಾಥಾವನ್ನು ಕಲ್ಲಡ್ಕ ಪೇಟೆಯಲ್ಲಿ ನಡೆಸಲಾಯಿತು.


ಪದವಿ ವಿಭಾಗದ ಪ್ರಾಚಾರ್ಯರಾದ ಕೃಷ್ಣಪ್ರಸಾದ್ ಕಾಯರ್ ಕಟ್ಟೆ, ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಯತಿರಾಜ್ ಪೆರಾಜೆ, ಯುವ ರೆಡ್ ಕ್ರಾಸ್ ಘಟಕದ ನಿರ್ದೇಶಕರಾದ ಕುಮಾರಿ ಚಂದ್ರಕಲಾ ಮತ್ತು ಪದವಿಯ ಉಪನ್ಯಾಸಕರು ,ವಿದ್ಯಾರ್ಥಿಗಳು ಉಪಸ್ಥಿತರಿದ್ದರು..

