Thursday, February 13, 2025

ಹಿರಿಯ ಪತ್ರಕರ್ತ, ಸಾಹಿತಿ, ವ್ಯಕ್ತಿತ್ವ ವಿಕಸನ ತರಬೇತುದಾರ ಜಯಾನಂದ ಪೆರಾಜೆಗೆ ಕನ್ನಡ ಪಯಸ್ವಿನಿ ಗಡಿನಾಡ ಪ್ರಶಸ್ತಿ -2024

ಕನ್ನಡ ಭವನ ಮತ್ತು ಗ್ರಂಥಾಲಯ (ರಿ )ಕನ್ನಡ ಭವನ ಪ್ರಕಾಶನ ಕಾಸರಗೋಡು ಮತ್ತು ಕಥಾಬಿಂದು ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಕಥಾಬಿಂದು ಪ್ರಕಾಶನ ಮಂಗಳೂರು ಇದರ ವತಿಯಿಂದ ಪಯಸ್ವಿನಿ ಪ್ರಶಸ್ತಿ ೨೦೨೪ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಲಿದೆ.

ಕನ್ನಡ ಭವನ ಕಾಸರಗೋಡಿನಲ್ಲಿ 10.3.24 ರಂದು ಭಾನುವಾರ ೧೦ಗಂಟೆಗೆ ನಡೆಯಲಿರುವ ಕೇರಳಮತ್ತು ಕರ್ನಾಟಕ ಕನ್ನಡ ಸಂಸ್ಕೃತಿ ಗಡಿನಾಡ ಉತ್ಸವ -2024 ರಲ್ಲಿ ಕನ್ನಡ ಸಾಹಿತ್ಯ ಪರಿಷತ್ ಮಾಜಿ ರಾಜ್ಯಾಧ್ಯಕ್ಷ  ಧರ್ಮದರ್ಶಿ ಡಾ.ಹರಿಕೃಷ್ಣ ಪುನರೂರು ಇವರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿಪ್ರಧಾನ ನಡೆಯಲಿದೆ.

ಕರ್ನಾಟಕ ಹಾಗೂ ಕೇರಳದ ಗಣ್ಯರಾದ ಪಿ.ವಿ.ಪ್ರದೀಪ ಕುಮಾರ್ , ಹಿರಿಯ ಕವಿಗಳಾದ ವಿ.ಜಿ.ಕುಳಮರ್ವ, ರಾಧಾಕೃಷ್ಣ ಉಳಿಯತಡ್ಕ ಮೊದಲಾದವರ ಉಪಸ್ಥಿತಿಯಲ್ಲಿ ಕವಿಗೋಷ್ಠಿ ಹಾಗೂ ವಿವಿಧ ಕಾರ್ಯ ಕ್ರಮಗಳು ನಡೆಯಲಿವೆ ಎಂದು ಕನ್ನಡ ಭವನ ಅಧ್ಯಕ್ಷ ವಾಮನ ರಾವ್ ಬೇಕಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...