Wednesday, January 28, 2026

ಹಿರಿಯ ನಟಿ ಜಯಂತಿ ಇನ್ನಿಲ್ಲ

ಅನಾರೋಗ್ಯದಿಂದ ಬಳಲುತ್ತಿದ್ದ, ಅಭಿನಯ ಶಾರದೆ ಎಂದು ಪ್ರೀತಿಯಿಂದ ಅಭಿಮಾನಿಗಳಿಂದ ಕರೆಸಿಕೊಳ್ಳುತ್ತಿದ್ದ ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸಿದ್ದ ಹಿರಿಯ ನಟಿ ಜಯಂತಿ  (76) ಇಂದು ಬೆಂಗಳೂರಿನ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.

ಜಯಂತಿ ಅವರು ಒಟ್ಟು ಆರು ಭಾಷೆಗಳಲ್ಲಿ 500 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ವರನಟ ಡಾ. ರಾಜ್ ಕುಮಾರ್ ಜೊತೆಗೆ ಸುಮಾರು 45 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದರು. ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಭಾಷೆಗಳಲ್ಲಿ ಜಯಂತಿ ನಟಿಸಿದ್ದರು.

1968 ರಲ್ಲಿ ತೆರೆ ಕಂಡ ವೈ,ಅರ್,ಸ್ವಾಮಿ ನಿರ್ದೇಶನದ ‘ಜೇನು ಗೂಡು ‘ ಚಿತ್ರದ ಮೂಲಕ ಚಿತ್ರ ರಂಗ ಪ್ರವೇಶಿಸಿದ ಜಯಂತಿಯವರ ಮೂಲ ಹೆಸರು’ಕಮಲ ಕುಮಾರಿ.ಅದಕ್ಕಿಂತ ಮುನ್ನ ‘ಜಗದೇಕ ವೀರನ ಕಥೆ ‘ಚಿತ್ರದಲ್ಲಿ ಸಣ್ಣ ಪಾತ್ರ ವೊಂದರಲ್ಲಿ ಅಭಿನಯಿಸಿದ್ದಾರೆ.ಒಟ್ಟು ಆರು ಭಾಷೆಯ ಚಿತ್ರಗಳಲ್ಲಿ ಅಭಿನಯಿಸಿರುವ ಜಯಂತಿ ಕನ್ನಡದ 190 ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.ನಿರ್ಮಾಪಕಿಯೂ ನಿರ್ದೇಶಕಿಯೂ ಆಗಿರುವ ಇವರು 1965 ‘ಮಿಸ್ ಲೀಲಾವತಿ’ ಚಿತ್ರದ ಅಭಿನಯಕ್ಕಾಗಿ ರಾಷ್ಟ್ರ ಪ್ರಶಸ್ತಿ ಬಂದಿದೆ.’ಎರಡು ಮುಖ'(1969),ಮನಸ್ಸಿನಂತೆ ಮಾಂಗಲ್ಯ'(1976),’ಧರ್ಮ ದಾರಿ ತಪ್ಪಿತು'(1981),ಮಸಣದ ಹೂವು (1985),’ಆನಂದ್ ‘(1989) ಚಿತ್ರಗಳ ಅಭಿನಯಕ್ಕಾಗಿ ಐದು ಬಾರಿ ರಾಜ್ಯ ಪ್ರಶಸ್ತಿ ಗಳಿಸಿದ್ದಾರೆ.ಎಡಕಲ್ಲು ಗುಡ್ಡದ ಮೇಲೆ ಚಿತ್ರದಲ್ಲಿ ಜಯಂತಿಯವರು ಕಾಮತೃಷೆಯಿಂದ ಬಳಲುವ ಹೆಣ್ಣಾಗಿ ಮೊದಲ ಭಾರಿಗೆ ವಿಶಿಷ್ಟ ಅಭಿನಯ ನೀಡಿದ್ದಾರೆ.

More from the blog

ಒಡಿಯೂರಿನಲ್ಲಿ ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಭಾರತ ವಿಶ್ವದ ಉಸಿರಾಗಿದ್ದು, ಯಾವ ಸೆಳೆತಕ್ಕೂ ಒಳಗಾಗಿಲ್ಲ. ವಂದೇ ಮಾತರಂ ಗೀತೆಗೆ ರಾಷ್ಟ್ರಭಕ್ತಿ ಉದ್ದೀಪಿಸುವ ಶಕ್ತಿಯಿದೆ. ಭಾಷೆ ಸಂಸ್ಕೃತಿ ಬಹಳ ದೊಡ್ಡದಾಗಿದ್ದು, ಇದರ ಉಳಿವಿಗೆ ಒಗ್ಗಟ್ಟಾಗುವ ಅಗತ್ಯವಿದೆ. ವಿಶ್ವ ವಿದ್ಯಾಲಯಗಳಲ್ಲಿ ತುಳು...

ವಿದ್ಯಾರ್ಜನೆ ಪಡೆದ ಸಂಸ್ಥೆಗೆ ನೀಡುವ ಸಹಾಯಸ್ತ ದೇವತಾ ಕಾರ್ಯಕ್ಕೆ ಸಮಾನ : ಪ್ರಭಾಕರ ಪ್ರಭು

ಬಂಟ್ವಾಳ : ಬಾಲ್ಯದಲ್ಲಿ ಬಾಹ್ಯ ಪ್ರಪಂಚದಲ್ಲಿನ ಆಗುಹೋಗುಗಳ ಬಗ್ಗೆ ಪರಿಚಯಿಸಿ ಪ್ರಾಥಮಿಕ ಶಾಲಾ ಪೂರ್ವ ಶಿಕ್ಷನವನ್ನು ನೀಡುತ್ತಿರುವ ಅಂಗನವಾಡಿಗಳ ಮೂಲಭೂತ ಸೌಕರ್ಯಗಳಿಗೆ ನೀಡುವ ಸಹಾಯಸ್ತಾವು ದೇವತಾ ಕಾರ್ಯಕ್ಕೆ ಸಮಾನವಾಗಿರುತ್ತದೆ ಎಂದೂ ಸಿದ್ದಕಟ್ಟೆ ಪ್ರಾಥಮಿಕ...

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...