Saturday, January 31, 2026

ಇಂಡಿಯನ್ ಸೀನಿಯರ್ ಛೇಂಬರ್ ಮಡಂತ್ಯಾರು ಘಟಕದ ಉದ್ಘಾಟನೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಮಡಂತ್ಯಾರು: ಇಂಡಿಯನ್ ಸೀನಿಯರ್ ಛೇಂಬರ್ ಮಡಂತ್ಯಾರು ಘಟಕದ ಉದ್ಘಾಟನೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಬಳ್ಳಮಂಜ ಶ್ರೀ ಅನಂತೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಇಂಡಿಯನ್ ಸೀನಿಯರ್ ಛೇಂಬರ್ ಮಂಗಳೂರು ಇವರು ಆಯೋಜಿಸಿದ ಕಾರ್ಯಕ್ರಮವನ್ನು ಜೆಸಿಐ ನ ಪೂರ್ವರಾ‌ಷ್ಟ್ರೀಯ ಉಪಾಧ್ಯಕ್ಷ ಜೇಸಿ ಪುರಂದರ ರೈ ಉದ್ಘಾಟಿಸಿದರು.
ಸ್ಥಾಪಕಾಧ್ಯಕ್ಷರಾಗಿ ಡಾ. ಹರ್ಷ ಸಂಪಿಗೆತ್ತಾಯ ಪ್ರಮಾಣವಚನ ಸ್ವೀಕರಿಸಿದರು. ಕಾರ್ಯದರ್ಶಿ ಪ್ರವೀಣ್ ಕುಮಾರ್, ಕೋಶಾಧಿಕಾರಿ ತುಳಸೀದಾಸ್ ಪೈ ಹಾಗೂ ಎಲ್ಲಾ ಪದಾಧಿಕಾರಿಗಳಿಗೆ ರಾಷ್ಟ್ರೀಯ ಅಧಿಕಾರಿಗಳು ಪ್ರಮಾಣವಚನ ಭೋದಿಸಿದರು.


ಅತಿಥಿಗಳಾಗಿ ರಾಷ್ಟ್ರೀಯ ನಿರ್ದೇಶಕರಾದ ಅರವಿಂದ ರಾವ್, ಚಿತ್ರ ಕುಮಾರ್ ಮತ್ತು ಸ್ಥಳೀಯ ವಿದ್ಯಾ ಸಾಗರ್ ವಿದ್ಯಾ ಸಂಸ್ಥೆಯ ವೆಂಕಟ್ ರೆಡ್ಡಿ, ಮಂಗಳೂರು ಲೀಜಿಯೊನ್ ನ ಕೋಶಾಧಿಕಾರಿ ಅನಿಲ್ ಕುಮಾರ್, ನಿರ್ದೇಶಕ ಹೀರಾಚಂದ್ ಮತ್ತಿತರರು ಉಪಸ್ಥಿತರಿದ್ದು, ಸಂಸ್ಥೆಗೆ ಶುಭ ಹಾರೈಸಿದರು. ಮಂಗಳೂರು ಲೀಜಿಯೊನ್ ನ ಅಧ್ಯಕ್ಷ ಪೀಟರ್ ಪಿಂಟೋ ಅವರು ಕಾರ್ಯಕ್ರಮದ ಪ್ರಥಮಾರ್ಧದ ಅಧ್ಯಕ್ಷತೆ ವಹಿಸಿ ಎಲ್ಲರನ್ನು ಸ್ವಾಗತಿಸಿದರು. ದ್ವಿತೀಯಾರ್ಧದ ಅಧ್ಯಕ್ಷತೆಯನ್ನು ಡಾ. ಹರ್ಷ ಸಂಪಿಗೆತ್ತಾಯ ವಹಿಸಿದ್ದರು. ಕಾರ್ಯದರ್ಶಿ ಪ್ರವೀಣ್ ಕುಮಾರ್ ಅವರು ವಂದಿಸಿದರು.

More from the blog

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...