ಬಂಟ್ವಾಳ : ಜೆಡಿಎಸ್ ಕಾರ್ಯಕರ್ತರ ಸಮಾಲೋಚನಾ ಸಭೆಯು ಬಿ.ಸಿ.ರೋಡ್ ರಿಕ್ಷಾಭವನದಲ್ಲಿ ಕ್ಷೇತ್ರ ಅಧ್ಯಕ್ಷ ಬಿ.ಮೋಹನ್ ರವರ ಅಧ್ಯಕ್ಷತೆಯಲ್ಲಿ ಜರಗಿತು. ಸಭೆಯಲ್ಲಿ ಮಾತನಾಡಿದ ಮಾಜಿ ಸಚಿವ ಅಮರನಾಥ ಶೆಟ್ಟಿ ಈ ಚುಣಾವಣೆಯಲ್ಲಿ ದ.ಕ.ಜಿಲ್ಲೆಯಲ್ಲಿ ಕಾಂಗ್ರೆಸ್ ಜತೆ ಹೊಂದಾಣಿಕೆ ಮಾಡಿಕೊಂಡಿದ್ದು ಮೈತ್ರಿ ಧರ್ಮ ಪಾಲಿಸುವಂತೆ ಕಾರ್ಯಕರ್ತರಿಗೆ ಕರೆ ನೀಡಿದರು. ರಾಜ್ಯ ಉಪಾಧ್ಯಕ್ಷ ಎಂ.ಬಿ.ಸದಾಶಿವ ಕೇಂದ್ರ ಸರಕಾರದ ವೈಫಲ್ಯ ಹಾಗೂ ರಾಜ್ಯ ಸರಕಾರದ ಸಾಧನೆಯ ಬಗ್ಗೆ ವಿವರಣೆ ನೀಡಿದರು.
ರಾಜ್ಯ ಕಾರ್ಯದರ್ಶಿ ಮಹಮ್ಮದ್ ಶಫಿ ಮಾತನಾಡಿ ಪಕ್ಷ ಸಂಘಟನೆಗೆ ಜಿಲ್ಲಾ ನಾಯಕರು ಕ್ಷೇತ್ರದಲ್ಲಿ ನಿರಂತರ ವಾಗಿ ಸಂಪರ್ಕದಲ್ಲಿರುವಂತೆ ಹಾಗೂ ಪಕ್ಷದ ಕಛೇರಿ ತಕ್ಷಣ ತೆರೆಯಲು ಸಲಹೆ ನೀಡಿದರು.
ಕಾಂಗ್ರೆಸ್ ನಾಯಕರು ಚುನಾವಣಾ ಸಮಯದಲ್ಲಿ ನಮ್ಮ ಪಕ್ಷವನ್ನು ಹಾಗೂ ಕಾರ್ಯಕರ್ತರನ್ನು ಗೌರವಯುತವಾಗಿ ನಡೆಸಿಕೊಂಡು ಹೋಗುವಂತೆ ನೋಡಿಕೊಳ್ಳಬೇಕೆಂದು ಜಿಲ್ಲಾ ಅಲ್ಪಸಂಖ್ಯಾತ ಪ್ರಧಾನ ಕಾರ್ಯದರ್ಶಿ ಹಾರೂನ್ ರ ಶೀದ್ ಜಿಲ್ಲೆಯ ನಾಯಕರಲ್ಲಿ ಮನವಿ ಮಾಡಿದರು.
ವೇದಿಕೆಯಲ್ಲಿ ಜಿಲ್ಲಾಧ್ಯಕ್ಷ ಮಹಮ್ಮದ್ ಕುಂಞಿ, ಯುವ ಜಿಲ್ಲಾ ಅಧ್ಯಕ್ಷ ಅಕ್ಷಿತ್ ಸುವರ್ಣ, ಮಹಿಳಾ ಜಿಲ್ಲಾಧ್ಯಕ್ಷ ಸುಮತಿ ಹೆಗಡೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರವೀರ್ಣ ಚಂದ್ರ ಜೈನ್, ಹಿರಿಯ ಮುಖಂಡರಾದ ಪಿ.ಎ.ರಹೀಂ , ಮಹಮ್ಮದ್ ಸುವಾಜ್ , ರ ಫೀಕ್ ಕೊಚ್ಚಿ , ಮಹಮ್ಮದ್ ಶಫಿಕ್, ಸುಲೈಮಾನ್ ಅಕ್ಕರಂಗಡಿ, ಹರೀಶ್ ಕೊಟ್ಟಾರಿ, ಇಸಾಕ್ ಕಲ್ಲಡ್ಕ, ಮಹಿಳಾ ಮುಖಂಡರಾದ ಕುಶಲ ಶೆಟ್ಟಿ, ಕೈರುನ್ನಿಸ ಉಪಸ್ಥಿತರಿದ್ದರು. ಜಿಲ್ಲಾ ಅಲ್ಪಸಂಖ್ಯಾತ ಪ್ರಧಾನ ಕಾರ್ಯದರ್ಶಿ ಹಾರೂನ್ ರಶೀದ್ ಸ್ವಾಗತಿಸಿದರು. ಅಮಾನುಲ್ಲಾ ವಂದಿಸಿ ಕಾರ್ಯಕ್ರಮ ನಿರೂಪಿಸಿದರು.
