Thursday, July 10, 2025

35ನೇ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನಕ್ಕೆ ಚಾಲನೆ

ಮಂಗಳೂರು: ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನ ಅಭಿನವ ಮಂಗಳೂರು ಲೋಕೇಶ್ ಸಂಪಿಗೆ ಬಳಗದ ವಾದ್ಯವೈವಿಧ್ಯದೊಂದಿಗೆ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಆರಂಭಗೊಂಡಿದೆ. 2 ದಿನಗಳ ಕಾಲ ನಡೆಯಲಿರುವ ಕಾರ್ಯಕ್ರಮಕ್ಕೆ ರಾಜ್ಯದ ವಿವಿಧ ಜಿಲ್ಲೆಗಳಿಂದ 1800 ಕ್ಕೂ ಅಧಿಕ ಮಂದಿ ನೋಂದಾಯಿಸಿಕೊಂಡಿದ್ದಾರೆ. ಇಲ್ಲಿನ ಮಿನಿ ವಿಧಾನಸೌಧದ ಬಳಿಯ ತಾಲೂಕು ಪಂಚಾಯತ್‌ನ ನೂತನ ಕಟ್ಟಡದಲ್ಲಿ ಪತ್ರಕರ್ತರ ನೋಂದಣಿ ನಡೆಯುತ್ತಿದೆ. ಪತ್ರಕರ್ತರ ರಾಜ್ಯ ಸಮ್ಮೇಳನ ಉದ್ಘಾಟನೆಗೆ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ಈಗಾಗಲೇ ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಸಮ್ಮೇಳನವು ಪುರಭವನದ ದಿ. ವಡ್ಜಸೆರ್ ರಘುರಾಮ ಶೆಟ್ಟಿ ವೇದಿಕೆಯಲ್ಲಿ ನಡೆಯುತ್ತಿದೆ.

More from the blog

ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ – ದಿನೇಶ್ ಗುಂಡೂರಾವ್.. 

ಮಂಗಳೂರು : ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ ಕೈ ಗೊಳ್ಳಲಾಗುವುದುಎಂದು ಅರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಅವರು...

ಕಾರ್ಮಿಕರ ಅಖಿಲ ಭಾರತ ಮುಷ್ಕರದ ಅಂಗವಾಗಿ ಕಾರ್ಮಿಕರ ಪ್ರತಿಭಟನೆ..

ಬಂಟ್ವಾಳ : ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಹಾಗೂ ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳಿಂದ ಅಖಿಲ ಭಾರತ ಮುಷ್ಕರದ ದ ಅಂಗವಾಗಿ ಜೆ.ಸಿ.ಟಿ.ಯು ಮತ್ತು ಸಂಯುಕ್ತ ಹೋರಾಟ...

ಭಾರೀ ಮಳೆ ಮುನ್ಸೂಚನೆ : ಒಂದು ವಾರ ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್..

ಮಂಗಳೂರು : ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 14ರವರೆಗೆ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು,...

ಕುಡ್ತಮುಗೇರು: ಬಸ್ಸಿನಿಂದ ರಸ್ತೆಗೆ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು 

ವಿಟ್ಲ: ಖಾಸಗಿ ಬಸ್ಸಿನಿಂದ ಬಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂಧಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕುಡ್ತಮುಗೇರು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಕೊಡಂಗೆ ನಿವಾಸಿ ಚಿದಾನಂದ ರೈ (43 ವ.) ಮೃತಪಟ್ಟವರು. ಜು.7ರಂದು ಬೆಳಗ್ಗೆ...