Sunday, February 1, 2026

ಮಂಗಳೂರು : 35ನೇ ಪತ್ರಕರ್ತರ ರಾಜ್ಯ ಸಮ್ಮೇಳನ

ಮಂಗಳೂರು: ಜಾಗತೀಕರಣದಿಂದ ಹಣಕ್ಕೆ ಹೆಚ್ಚಿನ ಮಹತ್ವ ಸಿಗುತ್ತಿದೆ. ಇಂತಹ ವ್ಯವಸ್ಥೆಯಲ್ಲಿ ಪತ್ರಕರ್ತರು ವೃತ್ತಿಪರ ಮೌಲ್ಯವನ್ನು ಕಾಪಾಡಿಕೊಂಡು ವಿಶ್ವಾರ್ಹತೆಯೊಂದಿಗೆ ಕಾರ್ಯ ನಿರ್ವಹಿಸುವುದು ಸವಾಲಿನ ಕಾರ್ಯ. ಪತ್ರಕರ್ತರು ರಾಜಕೀಯ ಸುದ್ದಿಗಳಿಗೆ ಹೆಚ್ಚಿನ ಅದ್ಯತೆ ನೀಡಬಾರದು. ಅದರಿಂದ ಜನಸಾಮಾನ್ಯರಿಗೆ ಯಾವುದೇ ಪ್ರಯೋಜನವಾಗುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಾ. ಅಶ್ವಥ ನಾರಾಯಣ ಹೇಳಿದರು. ಅವರು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆತಿಥ್ಯದಲ್ಲಿ ನಡೆಯುತ್ತಿರುವ 35ನೇ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.

ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಪತ್ರಿಕೋದ್ಯಮ ಪರಿಣಾಮಕಾರಿಯಾದದ್ದು. ಇಂತಹ ಪತ್ರಕರ್ತರ ಸಂಘ ಟ್ರಸ್ಟ್ ಕಾಯ್ದೆಗೊಳಪಟ್ಟರೆ ನೈತಿಕ ಸ್ಥೈರ್ಯವನ್ನು ಇನ್ನಷ್ಟು ಬಲಗೊಳಿಸಬಹು ಎಂದವರು ಅಭಿಪ್ರಾಯಿಸಿದರು.

ಕುದ್ಮುಲ್ ರಂಗರಾವ್ ಪುರಭವನದಲ್ಲಿ ದಿ. ವಡ್ಡರ್ಸೆ ರಘರಾಮ ಶೆಟ್ಟಿ ವೇದಿಕೆಯಲ್ಲಿ ಆಯೋಜನೆಗೊಂಡಿರುವ ಎರಡು ದಿನಗಳ ಸಮ್ಮೇಳನ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಸಾನ್ನಿಧ್ಯದಲ್ಲಿ ನಡೆಯುತ್ತಿದೆ. ತರಂಗ ವಾರಪತ್ರಿಕೆಯ ಸಂಪಾದಕಿ ಸಂಧ್ಯಾ ಪೈ ಸ್ಮರಣ ಸಂಚಿಕೆ ಬಿಡುಗಡೆ ಮಾಡಿ, ಸಮ್ಮೇಳನದ ಆಶಯ ಭಾಷಣ ಮಾಡಿದರು.

ಉಪ ಮುಖ್ಯಮಂತ್ರಿ ಅಶ್ವತ್ಥ ನಾರಾಯಣ ವ್ಯಂಗ್ಯ ಚಿತ್ರ ಪ್ರದರ್ಶನವನ್ನು ಉದ್ಘಾಟಿಸಿದರು. ಜಿಲ್ಲಾ ಉಸ್ತುವಾರಿ ಸಚಿ ಕೋಟ ಶ್ರೀನಿವಾಸ ಪೂಜಾರಿ ಪೋಟೋ ಪ್ರದರ್ಶನ ಮತ್ತು ವಸ್ತುಪ್ರ ದರ್ಶನವನ್ನು ಉದ್ಘಾಟಿಸಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆ ವಹಿಸಿದ್ದರು. ಜಿಲ್ಲೆಯ ಶಾಸಕರುಗಳಾದ ಡಿ.ವೇದವ್ಯಾಸ ಕಾಮತ್, ಡಾ. ವೈ.ಭರತ್ ಶೆಟ್ಟಿ, ಯು.ಟಿ.ಖಾದರ್, ವಿಧಾನ ಪರಿಷತ್ ಸದಸ್ಯ ಕೆ.ಹರೀಶ್ ಕುಮಾರ್, ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ದ.ಕ‌.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್, ಅದಾನಿ ಗ್ರೂಪ್ ನ ಮುಖ್ಯಸ್ಥ ಕಿಶೋರ್ ಆಳ್ವ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಅಧ್ಯಕ್ಷ ಬಿ.ವಿ‌.ಮಲ್ಲಿಕಾರ್ಜುನಯ್ಯ, ಖ್ಯಾತ ಸಂಗೀತ ನಿರ್ದೇಶಕ ಗುರು ಕಿರಣ್, ಏಷ್ಯಾ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಸಂಚಾಲಕ ಎಚ್.ಬಿ.ಮದನಗೌಡ, ಮಂಗಳೂರು ಮಹಾನಗರ ಪಾಲಿಕೆ ಮೇಯರ್ ದಿವಾಕರ ಪಾಂಡೇಶ್ವರ, ಉಪಮೇಯರ್ ವೇದಾವತಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಸಿ‌.ಲೋಕೇಶ್, ದ.ಕ‌.ಜಿಲ್ಲಾಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ, ಪ್ರೆಸ್ ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಆನಂದ ಶೆಟ್ಟಿ, ಸಮ್ಮೇಳನ ಸಂಚಾಲಕ ಬಾಳ ಜಗನ್ನಾಥ ಶೆಟ್ಟಿ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಹಿರಿಯ ಪತ್ರಕರ್ತರಾದ ಮನೋಹರ ಪ್ರಸಾದ್ ಹಾಗೂ ರವೀಂದ್ರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

 

More from the blog

ಇಂದು ಕೇಂದ್ರ ಬಜೆಟ್ ಮಂಡನೆ..

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2026-27ರ ಹಣಕಾಸು ವರ್ಷದ ಕೇಂದ್ರ ಬಜೆಟ್ ಅನ್ನು ಇಂದು ಮಂಡಿಸಲಿದ್ದಾರೆ.ಸದನದಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ಬಜೆಟ್‌ ಮಂಡನೆ ಆರಂಭವಾಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್...

ಫೆ.3 ಮತ್ತು 17ರಂದು ಪಣೋಲಿಬೈಲು ಕ್ಷೇತ್ರದಲ್ಲಿ ಅಗೇಲು ಸೇವೆ ಇಲ್ಲ 

ಬಂಟ್ವಾಳ : ತಾಲೂಕಿನ ಸಜೀಪಮೂಡ ಗ್ರಾಮದ ಕಾರಣಿಕ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಫೆಬ್ರವರಿ ತಿಂಗಳಿನಲ್ಲಿ ತಾ03 ಮತ್ತು17ರಂದು ಅಗೆಲು ಸೇವೆ ಇರುವುದಿಲ್ಲ ಉಳಿದ ಆದಿತ್ಯವಾರ ಮಂಗಳವಾರ ಶುಕ್ರವಾರ ಅಗೇಲು ಸೇವೆ...

ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ : ಮಹಾಸಭೆ, ನೂತನ ಪದಾಧಿಕಾರಿಗಳ ಆಯ್ಕೆ 

ಬಂಟ್ವಾಳ : ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ ಇದರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಬಿ.ಸಿ.ರೋಡ್ ಸರಕಾರಿ ನೌಕರರ ಭವನದಲ್ಲಿ ಸಂಘದ ಕಾರ್ಯಕಾರಿ ಸಮಿತಿ ಅಧ್ಯಕ್ಷ ಪಿ .ಲೋಕನಾಥ ಶೆಟ್ಟಿ ಇವರ...

ಬಿ.ವಿ. ಕಾರಂತ ನೆನಪಿನ ಮಂಚಿ ನಾಟಕೋತ್ಸವ..

ಬಂಟ್ವಾಳ : ಬಿ ವಿ ಕಾರಂತ ರಂಗ ಭೂಮಿಕಾ ಟ್ರಸ್ಟ್ ವತಿಯಿಂದ ಬಿ.ವಿ. ಕಾರಂತ ನೆನಪಿನ ಮಂಚಿ ನಾಟಕೋತ್ಸವ ಮಂಚಿ ಕುಕ್ಕಾಜೆಯ ಸಿದ್ಧಿ ವಿನಾಯಕ ಭಜನಾ ಮಂದಿರದ ಸಭಾಂಗಣದಲ್ಲಿ ನಡೆಯಿತು. ಎರಡು ದಿವಸಗಳ ಈ...