Saturday, February 8, 2025

ಜುಗಾರಿ ಅಡ್ಡೆಗೆ ದಾಳಿ: ಹತ್ತು ಜನರ ಬಂಧನ

ಬಂಟ್ವಾಳ: ಹಣ ಪಣಕ್ಕಿಟ್ಟು ಜುಗಾರಿ ಆಟ ಆಡುತ್ತಿದ್ದ ಅಡ್ಡೆಗೆ ದಾಳಿ ನಡೆಸಿದ ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ನೇತ್ರತ್ವದ ತಂಡ ಆಟದಲ್ಲಿ ನಿರತರಾಗಿದ್ದ 10 ಮಂದಿ ಆರೋಪಿಗಳನ್ನು ಹಾಗೂ ಸಾವಿರಾರು ರೂ.ನಗದು ವಶಕ್ಕೆ ಪಡೆದುಕೊಂಡ ಘಟನೆ ನಡೆದಿದೆ.

ಬಂಟ್ವಾಳ ತಾಲೂಕು ಕೊಡ್ಮಣು ಗ್ರಾಮದ ಕೆನರಾ ಪಾಯಿಂಟ್ ಕೆಂಪು ಕಲ್ಲು ಕೋರೆಯ ಬಯಲು ಜಾಗದಲ್ಲಿ ಹಣವನ್ನು ಪಣವಾಗಿಟ್ಟು ಉಲಾಯಿ- ಪಿದಾಯಿ ಜುಗಾರಿ ಆಡುತ್ತಿದ್ದ ವೇಳೆ ದಾಳಿ ನಡೆಸಲಾಗಿದೆ.
ದಾಳಿಯ ವೇಳೆ ಪವನ್ ಎಂಬಾತನ ಜೊತೆ ಇನ್ನಿಬ್ಬರು ಪರಾರಿಯಾಗಿದ್ದು,ಉಳಿದಂತೆ ಆರೋಪಿಗಳಾದ ಲ್ಯಾನ್ಸಿ ರೋಡ್ರಿಗಸ್‌, ಶಂಶುದ್ದೀನ್‌, ಜಾಫರ್‌ ಸಾಧಿಕ್‌ , ಪ್ರವೀಣ್‌,ಅರವಿಂದ, ಉಮಾಶಂಕರ, ಪ್ರವೀಣ,ಶೋಧನ್ ,ವಿಜಯ ಕುಮಾರ್‌, ಮಹಮದ್ ಕಬೀರ ರವರನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಲಾಗಿದೆ.

ಅವರ ಬಳಿ ಇದ್ದ ನಗದು ರೂ 20500 ಹಾಗೂ ರೂ 1180 ಮೌಲ್ಯದ ಜುಗಾರಿ ಆಟಕ್ಕೆ ಬಳಸಿದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ಆರೋಪಿಗಳು ತಮ್ಮ ತಮ್ಮ ಸ್ವಂತ ಲಾಭಕ್ಕಾಗಿ ಹಣವನ್ನು ಪಣವಾಗಿಟ್ಟು ಸಂಘಟಿತರಾಗಿ ಉಲಾಯಿ ಪಿದಾಯಿ ಜೂಜಾಟ ಆಡಿದ್ದಾರೆ.
ಆಪಾದಿತರ ವಿರುದ್ಧ ಕಲಂ 112 BNS ಮತ್ತು 87 ಕರ್ನಾಟಕ ಪೊಲೀಸ್‌ ಕಾಯಿದೆಯಂತೆ ಪ್ರಕರಣ ದಾಖಲಿಸಿರುವುದಾಗಿದೆ ಎಂದು ಗ್ರಾಮಾಂತರ ಪೋಲೀಸ್ ಠಾಣೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

More from the blog

ದೆಹಲಿಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ…. ಸಿದ್ದಕಟ್ಟೆ ಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ*

  ದೆಹಲಿ ವಿಧಾನ ಸಭೆಗೆ ನಡೆದ ಚುನಾವಣೆ ಯಲ್ಲಿ ಭಾರತೀಯ ಜನತಾ ಪಕ್ಷ 70 ಸ್ಥಾನ ಗಳಲ್ಲಿ ಬರೋಬ್ಬರಿ 48 ಸ್ಥಾನ ಗಳನ್ನು ಗೆಲ್ಲುವ ಮೂಲಕ ಭರ್ಜರಿ ಜಯಭೇರಿ ಗಳಿಸುವುದರೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರ...

ಮಾರ್ಬಲ್ ಲಾರಿ ಪಲ್ಟಿ

ಬಂಟ್ವಾಳ: ಮಾರ್ಬಲ್ ಲೋಡ್ ಲಾರಿಯೊಂದು ತಾಂತ್ರಿಕ ದೋಷದಿಂದ ರಸ್ತೆಯ ವಿಭಾಜಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ರಾಷ್ಟ್ರೀಯ ಮಂಗಳೂರು- ಬೆಂಗಳೂರು ರಸ್ತೆಯ ತುಂಬೆ ಸಮೀಪದ ರಾಮಲ್ ಕಟ್ಟೆ ಎಂಬಲ್ಲಿ ಪಲ್ಟಿಯಾಗಿದೆ. ಘಟನೆಯಿಂದ ಯಾವುದೇ ಅಪಾಯ...

ಗಣಿ ಇಲಾಖೆ ಅಧಿಕಾರಿ ವಿರುದ್ಧ ಕ್ರಮಕ್ಕೆ ಸೂಚನೆ

ಬಂಟ್ವಾಳ : ಬಂಟ್ವಾಳದಲ್ಲಿ ಫೆ. 5 ರಂದು ನಡೆದ ಜನತಾದರ್ಶನಕ್ಕೆ ಗೈರು ಹಾಜರಾದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್...

ನರ್ಸಿಂಗ್ ವಿದ್ಯಾರ್ಥಿಗಳಿಗೆ ಇಂಟರ್ನ್ ಶಿಪ್ ಕಡ್ಡಾಯಗೊಳಿಸಿ : ಸಂಸದ ಕ್ಯಾ. ಚೌಟ ಆಗ್ರಹ

ನವದೆಹಲಿ: ಮಂಗಳೂರಿನ ವೆನ್ಲಾಕ್ ಸೇರಿ ದೇಶದೆಲ್ಲೆಡೆ ಸರ್ಕಾರಿ ಆಸ್ಪತ್ರೆಗಳಲ್ಲಿ ಎದುರಾಗಿರುವ ನರ್ಸ್ ಗಳ ಕೊರತೆ ನೀಗಿಸಲು ಎಂಬಿಬಿಎಸ್ ಮಾದರಿ ನರ್ಸ್ಗಳಿಗೂ ಇಂಟರ್ನ್ ಶಿಪ್ ಕಡ್ಡಾಯಗೊಳಿಸಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ...