Monday, January 26, 2026

ಸಿಡಿಲಿಗೆ ಗ್ರಾ.ಪಂ.ಮಾಜಿ ಅಧ್ಯಕ್ಷರ ಮನೆ ಸಂಪೂರ್ಣ ಹಾನಿ : ಅಪಾಯದಿಂದ ಕುಟುಂಬ ಪಾರು

ಬಂಟ್ವಾಳ: ಬಂಟ್ವಾಳ ರಾಯಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹರೀಶ ಆಚಾರ್ಯ ಎಂಬವರ ಮನೆಗೆ ಸಿಡಿಲು ಬಡಿದು ಮನೆ ಸಂಪೂರ್ಣ ಹಾನಿಗೀಡಾದ ಘಟನೆ ಶನಿವಾರ ಬೆಳಕಿಗೆ ಬಂದಿದೆ.

ಹರೀಶ ಆಚಾರ್ಯ ಅವರ ಪುಟ್ಟ ಮಗು ಸಹಿತ ವಯೋವೃದ್ಧ ತಂದೆ ಕಾಷ್ಠಶಿಲ್ಪಿ ಅಪ್ಪು ಆಚಾರ್ಯ ದಂಪತಿ ಇನ್ನೂ ಆಘಾತದಿಂದ ಹೊರ ಬಂದಿಲ್ಲ.

ಶುಕ್ರವಾರ ರಾತ್ರಿ ದಿಢೀರನೆ ಸುರಿದ ಮಳೆಗೆ ಮೊದಲು ಭಾರೀ ಶಬ್ಧ ಸಹಿತ ಇವರ ಮನೆ ಹಿಂಬದಿ ಮರವೊಂದಕ್ಕೆ ಸಿಡಿಲು ಬಡಿದಿದೆ. ಇದೇ ವೇಳೆ ಇವರ ಮನೆ ಮತ್ತು ಸ್ನಾನಗೃಹದ ಗೋಡೆ ಹಾನಿಯಾಗಿದ್ದು, ಮನೆಯೊಳಗೆ ವಿದ್ಯುತ್ ಪರಿಕರವೆಲ್ಲಾ ಸುಟ್ಟು ಕರಕಲಾಗಿದೆ. ಸ್ವತಃ ಕಣ್ಣೆದುರೇ ಫ್ಯಾನ್ ಮತ್ತಿತರ ವಿದ್ಯುತ್ ಸಾಮಾಗ್ರಿ ಸುಟ್ಟು ಪುಡಿಯಾಗಿರುವ ದೃಶ್ಯ ಕಂಡು ಮನೆಯವರು ಆಘಾತಗೊಂಡಿದ್ದಾರೆ. ಮನೆ ಗೋಡೆ ಮತ್ತು ಹೆಂಚಿನ ಮಾಡು ಸಂಪೂರ್ಣ ಬಿರುಕು ಕಾಣಿಸಿಕೊಂಡು ಕುಸಿತದ ಭೀತಿ ಉಂಟು ಮಾಡಿದೆ.

ಗ್ರಾಮ ಕರಣಿಕ ಪರೀಕ್ಷಿತ್ ಶೆಟ್ಟಿ ಸ್ಥಳ ಪರಿಶೀಲನೆ ನಡೆಸಿದ್ದು, ದಿನವಿಡೀ ಅಪಾರ ಮಂದಿ ಬಂದು ಕುತೂಹಲದಿಂದ ಹಾನಿ ವೀಕ್ಷಿಸಿ ಮನೆ ಮಂದಿಗೆ ಧೈರ್ಯ ತುಂಬುತ್ತಿರುವ ದೃಶ್ಯ ಕಂಡು ಬಂದಿದೆ. ಕಳೆದ 20 ವರ್ಷಗಳಲ್ಲಿ ಬಿಜೆಪಿ ಸಕ್ರಿಯ ಕಾರ್ಯಕರ್ತರಾಗಿ ಇವರು ಇತರರ ಸಂಕಷ್ಷಗಳಿಗೆ ಸ್ಪಂದಿಸುವ ಮೂಲಕ ಗಮನ ಸೆಳೆದಿದ್ದರು.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...