Thursday, January 29, 2026

ತಾ.ಪಂ. ಸದಸ್ಯನಿಗೆ ಲಾಠಿಯಿಂದ ಹೊಡೆದ ಆರೋಪ; ಕಲ್ಲಡ್ಕದಲ್ಲಿ ಪೊಲೀಸರ ವಿರುದ್ಧ ನಾಗರಿಕರ ಆಕ್ರೋಶ

ಬಂಟ್ವಾಳ: ತಾಲೂಕು ಪಂಚಾಯತ್ ಸದಸ್ಯರೊಬ್ಬರಿಗೆ ಎಎಸ್ಸೈ ಒಬ್ಬರು ಲಾಠಿಯಿಂದ ಹೊಡೆದ ಕಾರಣಕ್ಕಾಗಿ ಪೊಲೀಸರು ಮತ್ತು ಸಾರ್ವಜನಿಕರ ನಡುವೆ ಕೆಲವು ಹೊತ್ತು ವಾಗ್ವಾದ ನಡೆದ ಘಟನೆ ಶುಕ್ರವಾರ ಬೆಳಗ್ಗೆ ಕಲ್ಲಡ್ಕದಲ್ಲಿ ನಡೆದಿದೆ.

ಲಾಕ್ ಡೌನ್ ನಿಯಮಾವಳಿಯಂತೆ ಬೆಳಗ್ಗೆ 9 ಗಂಟೆಯ ಬಳಿಕ ಕಲ್ಲಡ್ಕದಲ್ಲಿ ಅಂಗಡಿಗಳನ್ನು ಮುಚ್ಚುವಂತೆ ಪೋಲೀಸರು ಸೂಚಿಸುತ್ತಿದ್ದರು. ಈ ವೇಳೆ ಕಾರು ನಿಲ್ಲಿಸಿ ಮೆಡಿಕಲ್ ಶಾಪ್ ಗೆ ಬರುತ್ತಿದ್ದ ಸ್ಥಳೀಯ ತಾಲೂಕು ಪಂಚಾಯತ್ ಸದಸ್ಯಗೆ ಬಂಟ್ವಾಳ ನಗರ ಠಾಣೆಯ ಎಎಸ್ಸೈ ಒಬ್ಬರು ಲಾಠಿಯಿಂದ ಹೊಡೆದಿದ್ದಾರೆ ಎನ್ನಲಾಗಿದೆ.

ಅಗತ್ಯ ಸಾಮಗ್ರಿಗಳ ಖರೀದಿಗೆ ಬಂದವರ ಮೇಲೆ ಪೊಲೀಸರು ಲಾಠಿ ಬೀಸುತ್ತಿದ್ದಾರೆ ಎಂದು ತಾಲೂಕು ಪಂಚಾಯತ್ ಸದಸ್ಯ ಹಾಗೂ ಸ್ಥಳೀಯ ನಾಗರಿಕರು ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆ ಸಾರ್ವಜನಿಕರು ಮತ್ತು ಪೊಲೀಸರ ನಡುವೆ ಕೆಲವು ಹೊತ್ತು ವಾಗ್ವಾದ ನಡೆಯಿತು.

ಬಳಿಕ ಸ್ಥಳಕ್ಕೆ ಬಂದ ಬಂಟ್ವಾಳ ನಗರ ಠಾಣಾ ಎಸ್ಸೈ ಅವಿನಾಶ್ ಬಂದು ಘಟನೆಯನ್ನು ತಿಳಿಗೊಳಿಸಿದರು.

More from the blog

ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಗ್ರಾ.ಪಂ.ಸದಸ್ಯ ಹಾಶೀರ್ ಪೆರಿಮಾರ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

ಬಂಟ್ವಾಳ: ವಿದ್ಯುತ್ ಸಮಸ್ಯೆಯಿಂದ ಬೇಸೆತ್ತ ಗ್ರಾಮಸ್ಥರ ಸಮಸ್ಯೆಗೆ ಸಕಾಲದಲ್ಲಿ ಸ್ಪಂದಿಸಿದ ಪುದು ಗ್ರಾಮಪಂಚಾಯತ್ ಸದಸ್ಯನಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. ಪುದು ಗ್ರಾಮದ ಪೇರಿಮಾರ್ ವಾರ್ಡಿನ ರಾಷ್ಟ್ರೀಯ ಹೆದ್ದಾರಿ ಬದಿಯಿಂದ ದೇವಸ್ಯ, ಜಲಾಲಿಯ ನಗರ, ಮಾರಿಪಳ್ಳ...

Bantwal : ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ – ಪದಾಧಿಕಾರಿಗಳ ಪದಾಪ್ರಧಾನ, ರಜತ ಸಂಭ್ರಮ ಸಮಾರೋಪ

ಬಂಟ್ವಾಳ :ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ರಿ, ಬಂಟ್ವಾಳ ವಲಯದ ನೂತನ ಪದಾಧಿಕಾರಿಗಳ ಪದಾಪ್ರಧಾನ ಸಮಾರಂಭ ಹಾಗು ರಜತ ಸಂಭ್ರಮದ ಸಮಾರೋಪ ಸಮಾರಂಭ ವು ಬಿಸಿ ರೋಡ್ ನ ಲಯನ್ಸ್ ಸೇವಾ...

B.C. Road : ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ ಬಿಸಿರೋಡಿನ ರಕ್ತೇಶ್ವರಿ...

ಕಟೀಲು 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.28ರ ಸೇವೆಯಾಟಗಳ ವಿವರ : ಆನಂದ ಎಂ. ಶೆಟ್ಟಿ, ಏಳಿಂಜೆ ಅಂಗಡಿಗುತ್ತು,...