Monday, January 26, 2026

ಮೂವರು ಅಪರಿಚಿತರಿಂದ ಯುವಕನ ಮೇಲೆ ಹಲ್ಲೆ : ದೂರು ದಾಖಲು

ಉಳ್ಳಾಲ: ಮಂಜೇಶ್ವರ ಮೂಲದ ಯುವಕನೊಬ್ಬ ಕುತ್ತಾರ್‌‌ನಲ್ಲಿರುವ ಅಜ್ಜಿ ಮನೆಗೆಂದು ಬರುತ್ತಿದ್ದಾಗ ದ್ವಿಚಕ್ರ ವಾಹನವನ್ನು ತಡೆದು ನಿಲ್ಲಿಸಿದ್ದ ಮೂವರು ಅಪರಿಚಿತರು ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿ ವಾಹನವನ್ನು ಕಿತ್ತುಕೊಂಡು ಪರಾರಿಯಾದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಅಂಬಿಕಾರೋಡ್ ಬಳಿ ನಡೆದಿದೆ

ಮಂಜೇಶ್ವರ ಮೂಲದ ಪ್ರಪುಲ್‍ರಾಜ್ ಹಲ್ಲೆಗೊಳಗಾದ ಯುವಕ ಎಂದು ತಿಳಿದು ಬಂದಿದೆ.

ಪ್ರಪುಲ್‍ರಾಜ್ ಅವರು ಕುತ್ತಾರ್‌‌ನಲ್ಲಿರುವ ಅಜ್ಜಿ ಮನೆಗೆಂದು ಮಂಜೇಶ್ವರದಿಂದ ದ್ವಿಚಕ್ರ ವಾಹನದಲ್ಲಿ ಹೊರಟಿದ್ದು, ರಾತ್ರಿ ವೇಳೆ ಅಂಬಿಕಾರೋಡ್ ತಲುಪಿದಾಗ 3 ಜನ ಅಪರಿಚಿತರು ವಾಹನ ನಿಲ್ಲಿಸಿ ಬಳಿಕ ಪ್ರಪುಲ್‍ರಾಜ್‍ಗೆ ಅವಾಚ್ಯ ಶಬ್ದಳಿಂದ ಬೈದು ಹಲ್ಲೆ ನಡೆಸಿ ವಾಹನವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಇನ್ನು ಗಾಯಗೊಂಡ ಪ್ರಫುಲ್ ರಾಜ್ ಅವರನ್ನು ತೊಕ್ಕೊಟು ಖಾಸಗಿ ಚಿಕಿತ್ಸೆಗೆ ದಾಖಲಾಗಿದ್ದಾರೆ. ಈ ಬಗ್ಗೆ ಉಳ್ಳಾಲ ಪೊಲೀಸ್‌ ಠಾಣೆಗೆ ದೂರು ನೀಡಲಾಗಿದೆ.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...