Monday, January 26, 2026

ಸತತ ಮೂರನೇ ಬಾರಿಗೆ ಬಂಟ್ವಾಳ ಗ್ಯಾರೇಜು ಮಾಲಕರ ಸಂಘಕ್ಕೆ ಪ್ರಶಸ್ತಿ

ಮಂಗಳೂರು; ದ.ಕ,  ಉಡುಪಿ ಜಿಲ್ಲಾ ಗ್ಯಾರೇಜು ಮಾಲಕರ ಸಂಘ ಮಂಗಳೂರು ಇದರ ವತಿಯಿಂದ ನಡೆದ ಸಂಘದ ಮಹಾಸಭೆಯಲ್ಲಿ ಗ್ಯಾರೇಜು ಮಾಲಕರ ಸಂಘ ಬಂಟ್ವಾಳ ವಯಕ್ಕೆ ಶ್ರೇಷ್ಠ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಕಳೆದ ಎರಡು ವರ್ಷಗಳಲ್ಲಿ ಬಂಟ್ವಾಳ ವಲಯವು ಹಲವಾರು ಜನಪರ ಸೇವೆ, ವೃತ್ತಿಭಾಂದವರಿಗೆ ಸಹಾಯ ಹಸ್ತ, ಸಾಧಕರಿಗೆ ಗೌರವ, ಆರ್ಥಿಕವಾಗಿ ಸಂಘದ ಸಾಧನೆಯನ್ನು ಗಮನಿಸಿ ಬಂಟ್ವಾಳ ವಲಯಕ್ಕೆ ಚಟುವಟಿಕೆಗಳಲ್ಲಿ ಶ್ರೇಷ್ಠ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಕಳೆದ ಆರು ವರ್ಷಗಳಲ್ಲಿ ಮೂರು ಬಾರಿ ನೀಡಿದ ಪ್ರಶಸ್ತಿಯಲ್ಲಿ ಪ್ರಥಮ ಸ್ಥಾನ ಬಂಟ್ವಾಳಕ್ಕೆ ಬಂದಿರುವುದು ವಿಶೇಷವಾಗಿದೆ.

ಈ ಸಂದರ್ಭದಲ್ಲಿ ಜಿಲ್ಲಾ ಸಂಘದ ಚೇರ್ಮೆನ್ ಪುಂಡಲೀಕ ಸುವರ್ಣ, ಅಧ್ಯಕ್ಷರಾದ ದಿನೇಶ್ ಕುಮಾರ್, ಗ್ಯಾರೇಜು ಮಾಲಕರ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾದ ಜನಾರ್ದನ್ ಅತ್ತಾವರ ಹಾಗು ಜಿಲ್ಲಾ ಸಂಘದ ಪ್ರಮುಖರು ಉಪಸ್ಥಿತರಿದ್ದರು.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...