Sunday, January 25, 2026

ಕಲ್ಲಡ್ಕ ಶ್ರೀ ರಾಮ ವಿದ್ಯಾಕೇಂದ್ರದಲ್ಲಿ ರಕ್ತದಾನ ಶಿಬಿರ

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರ ವತಿಯಿಂದ ಶ್ರೀರಾಮ ಪದವಿ ಕಾಲೇಜಿನ ರೆಡ್ ಕ್ರಾಸ್ ಘಟಕ ಹಾಗೂ ಕೆ.ಎಸ್.ಹೆಗ್ಡೆ ವೈದ್ಯಕೀಯ ಕಾಲೇಜು ಸಂಯುಕ್ತ ಆಶ್ರಯದಲ್ಲಿ ರಕ್ತದಾನ ಶಿಬಿರ ಸರ್ಕಾರದ ಕೋವಿಡ್ ಮಾರ್ಗಸೂಚಿಯನ್ನು ಪಾಲಿಸಿಕೊಂಡು ಶುಕ್ರವಾರ ನಡೆಯಿತು.

ಸುಮಾರು 130ಕ್ಕೂ ಅಧಿಕ ಮಂದಿ ರಕ್ತದಾನ ಮಾಡಿದರು. ಬೆಳಗ್ಗೆ 9.30ಕ್ಕೆ ಆರಂಭಗೊಂಡ ಶಿಬಿರ ಮಧ್ಯಾಹ್ನ 1 ಗಂಟೆವರೆಗೆ ನಡೆಯಿತು. ಶಿಬಿರಕ್ಕೆ ಅಗತ್ಯವಿದ್ದ ಸಂಖ್ಯೆಗಿಂತ ಅಧಿಕ ಮಂದಿ ಆಗಮಿಸಿದ ಹಿನ್ನೆಲೆಯಲ್ಲಿ ಉಳಿದ ಶಿಬಿರಾರ್ಥಿಗಳನ್ನು ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿಕೊಡಲಾಯಿತು.

ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಉದ್ಘಾಟಿಸಿ ರಕ್ತದಾನ ಶಿಬಿರದ ಅಗತ್ಯವನ್ನು ಹೇಳಿ, ಮೇ 1ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೆ ಲಸಿಕೆ ಹಾಕಿಸಿ ಕೊಳ್ಳಬೇಕಾಗಿರುವುದರಿಂದ ನಂತರದ ಎರಡರಿಂದ ಮೂರು ತಿಂಗಳು ರಕ್ತದಾನಕ್ಕೆ ಅವಕಾಶವಿರುವುದಿಲ್ಲ, ಈ ಹಿನ್ನಲೆಯಲ್ಲಿ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿರುವುದಾಗಿ ತಿಳಿಸಿದರು.

ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕ ವಸಂತ ಮಾಧವ, ಆಡಳಿತ ಮಂಡಳಿಯ ಸದಸ್ಯೆ ಲಕ್ಷ್ಮೀ ರಘುರಾಜ್, ಆಡಳಿತ ಮಂಡಳಿ, ಅಧ್ಯಾಪಕ ವೃಂದ, ವಿದ್ಯಾರ್ಥಿಗಳು, ಹಿರಿಯ ವಿದ್ಯಾರ್ಥಿಗಳು, ಕಲ್ಲಡ್ಕ ಪರಿಸರದ ವಿವಿಧ ಸಂಘಸಂಸ್ಥೆಗಳ ಸದಸ್ಯರು ಉಪಸ್ಥಿತರಿದ್ದು, ಪ್ರಕ್ರಿಯೆಯಲ್ಲಿ ಪಾಲ್ಗೊಂಡರು.

More from the blog

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...

ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ – ಅಶೋಕ ಕುಮಾರ್ ರಾಜ್ಯ ಮಟ್ಟಕ್ಕೆ ಆಯ್ಕೆ..

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಆಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ಸರಕಾರಿ ನೌಕರ ಸಂಘ, ದಕ್ಷಿಣ...

ಜಿಲ್ಲಾ ಸರ್ಕಾರಿ ನೌಕರರ ಕ್ರೀಡಾಕೂಟ – ಕೆ.ಪಿ.ಎಸ್ ಪ್ರೌಢಶಾಲೆ ದೈಹಿಕ ಶಿಕ್ಷಣ ಶಿಕ್ಷಕಿ ರಾಜ್ಯ ಮಟ್ಟಕ್ಕೆ ಆಯ್ಕೆ..

ಬಂಟ್ವಾಳ :ದಕ್ಷಿಣ ಕನ್ನಡ ಜಿಲ್ಲಾ ಆಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ಸರಕಾರಿ ನೌಕರ ಸಂಘ ದಕ್ಷಿಣ ಕನ್ನಡ...

ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ..

ಬಂಟ್ವಾಳ: ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವವು ಶತರುದ್ರಾಭಿಷೇಕ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ತಂತ್ರಿಗಳಾದ ದಿನೇಶ್‌ಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪ್ರಾರ್ಥನೆ, ಪುಣ್ಯಾಹ, ಗಣಹೋಮ, ಶತರುದ್ರಾಭಿಷೇಕ, ನವಕ ಕಲಶಾಭಿಷೇಕ, ವೀರಾಂಜನೇಯ...