Monday, January 26, 2026

ವಿದ್ಯುತ್ ತಂತಿ ತಗುಲಿ ಓರ್ವ ಮೃತ್ಯು

ಬೆಳ್ತಂಗಡಿ: ಕಲ್ಮಂಜ ಗ್ರಾಮದ ಕಂರ್ಬಿತ್ತಿಲ್ ಎಂಬಲ್ಲಿ ಮನೆಯಿಂದ ತೋಟಕ್ಕೆ ಹೋಗಿದ್ದ ವ್ಯಕ್ತಿ ವಿದ್ಯುತ್ ಅವಘಡಕ್ಕೆ ಒಳಗಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಕರಿಯನೆಲದ ಕರ್ಬಿತ್ತಿಲ್ ನಿವಾಸಿ ಶೀನಪ್ಪ ಗೌಡ ಎಂಬವರ ಪುತ್ರ ಉದಯ ಗೌಡ ಮೃತರು ಎಂದು ಗುರುತಿಸಲಾಗಿದೆ.
ಇವರು ತೋಟಕ್ಕೆಂದು ಹೋದವರು ಮನೆಗೆ ಹಿಂತಿರುಗಿ ಬಾರದ ಹಿನ್ನೆಲೆಯಲ್ಲಿ ಮನೆಮಂದಿ ಸುತ್ತಮುತ್ತ ಹುಡುಕಾಟ ನಡೆಸಿದಾಗ ಸಂಜೆಯ ವೇಳೆ ತೋಟದಲ್ಲಿ ಬಿದ್ದು ಮೃತಪಟ್ಟಿರುವುದು ಕಂಡು ಬಂದಿದೆ ಎಂದು ದೂರಲಾಗಿದೆ.
ಸ್ಥಳೀಯ ನಿವಾಸಿಯಾಗಿರುವ ಹರೀಶ ಮತ್ತು ಇತರರು ಸೇರಿ ತೋಟಕ್ಕೆ ಬರುವ ಕಾಡು ಪ್ರಾಣಿಗಳನ್ನು ಓಡಿಸಲೆಂದು ಅಕ್ರಮವಾಗಿ ತಮ್ಮ ಪಂಪ್ ಶೆಡ್ ನಿಂದ ತೋಟದ ಸುತ್ತ ತಂತಿಯ ಮೂಲಕ ವಿದ್ಯುತ್ ಹರಿಸಿದ್ದರು. ಜನ ನಡೆದಾಡುವ ದಾರಿಯ ಬದಿಯಲ್ಲಿಯೇ ಅತ್ಯಂತ ಅಪಾಯಕಾರಿಯಾಗಿ ವಿದ್ಯುತ್ ಹರಿಯಬಿಟ್ಟಿದ್ದು, ಮನೆಯಿಂದ ತೋಟಕ್ಕೆಂದು ಹೋದ ಉದಯ ಅವರ ಕಾಲಿಗೆ ವಿದ್ಯುತ್ ಹರಿಯುತ್ತಿದ್ದ ತಂತಿ ಸಿಲುಕಿ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ದೂರು ನೀಡಲಾಗಿದೆ.
ಘಟನಾ ಸ್ಥಳಕ್ಕೆ ಬೆಳ್ತಂಗಡಿ ವೃತ್ತ ನಿರೀಕ್ಷ ಶಿವಕುಮಾರ್, ಧರ್ಮಸ್ಥಳ ಠಾಣಾಧಿಕಾರಿ ಅನಿಲ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...