ಅತ್ಯಂತ ಸುಂದರವಾಗಿ ನಿರ್ಮಾಣಗೊಂಡಿರುವ ಹಿಂದೂ ರುದ್ದಭೂಮಿಗೆ ಬೇಕಾಗುವ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕೆಲಸ ಮಾಡುತ್ತೇನೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದರು.


ಅವರು ಸಾರ್ವಜನಿಕ ಹಿಂದೂ ರುದ್ರ ಭೂಮಿಯನ್ನು ಲೋಕಾರ್ಪಣೆಗೊಳಿಸಿದ ಬಳಿಕ ನಡೆದ ಸಭಾ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು. ಅತೀ ಅಗತ್ಯವಾಗಿ ಬೇಕಾಗಿರುವ ರಸ್ತೆ ಕಾಂಕ್ರೀಟನ್ನು ಶೀಘ್ರವಾಗಿ ಮಾಡುತ್ತೇನೆ ಎಂದು ಭರವಸೆ ನೀಡಿದರು.
ಮಾಜಿ ಸಚಿವ ಬಿ.ರಮಾನಾಥ ರೈ ಕಾರ್ಯಕ್ರಮಕ್ಕೆ ಆಗಮಿಸಿ ಶುಭ ಹಾರೈಸಿದರು.












