ಕಡಬ: ವಾಹನ ಡಿಕ್ಕಿ ಹೊಡೆದು ಕಡವೆ ಗಾಯಗೊಂಡು ರಸ್ತೆ ಬದಿ ಬಿದ್ದ ಘಟನೆ ಕಡಬದ ಕುಂಟಿಕಾನ ಡಂಬಲ್ಲಿ ಇಂದು ಬೆಳಿಗ್ಗೆ ನಡೆದಿದೆ.
ಉಪ್ಪಿನಂಗಡಿಯ ಕಡಬ ರಾಜ್ಯ ಹೆದ್ದಾರಿಯ ಕುಂತೂರು ಪದವು ಬಲ್ಯ ನಡುವಿನ ಕುಂಟಿಕಾನ ಎಂಬಲ್ಲಿ ರಸ್ತೆ ಬದಿ ಬಿದ್ದಿದ್ದ ಕಡವೆಯನ್ನು ಗಮನಿಸಿದ ಸ್ಥಳೀಯರು ಕಡಬ ಪೊಲೀಸರಿಗೆ ಮಾಹಿತಿ ನೀಡಿದರು.
ಕಡಬ ಪೊಲೀಸರಿಗೆ ಈ ಬಗ್ಗೆ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ವಲಯ ಅರಣ್ಯಾಧಿಕಾರಿ ಗಿರೀಶ್. ಆರ್., ಉಪ ವಲಯ ಅರಣ್ಯಾಧಿಕಾರಿ ರವಿ ಪ್ರಕಾಶ್, ಅರಣ್ಯ ರಕ್ಷಕರಾದ ರವಿ ಕುಮಾರ್, ರವಿಚಂದ್ರ, ಸುಬ್ರಹ್ಮಣ್ಯರವರು ಕಡವೆಗೆ ಪ್ರಥಮ ಚಿಕಿತ್ಸೆ ನೀಡಲು ಕಡಬದ ಪಶು ವೈದ್ಯಕೀಯ ಕೇಂದ್ರಕ್ಕೆ ಕರೆತರಲಾಗಿದೆ. ಪ್ರಾಥಮಿಕ ಚಿಕಿತ್ಸೆ ನೀಡಿದ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಕಡವೆಯನ್ನು ಮಂಗಳೂರಿನ ಪಿಲಿಕುಳ ನಿಸರ್ಗಧಾಮಕ್ಕೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.


