Wednesday, June 25, 2025

ಶೌಚಾಲಯದಲ್ಲಿ ಬಂಧಿಯಾದ ಚಿರತೆ

ಕಡಬ: ಸಾಕು ನಾಯಿಯನ್ನು ಅಟ್ಟಿಸಿಕೊಂಡು ಬಂದ ಚಿರತೆಯೊಂದು ಸಾಕು ನಾಯಿಯ ಜೊತೆ ಮನೆಯ ಶೌಚಾಲಯದಲ್ಲಿ ಬಂಧಿಯಾದ ಘಟನೆ ಬುಧವಾರ ಬೆಳಿಗ್ಗೆ ಕಡಬದ ಕೈಕಂಬದಲ್ಲಿ ನಡೆದಿದೆ.

ಕೈಕಂಬ ಟಾಯ್ಲೆಟ್ ಒಳಗಡೆ ಬಂದಿಯಾದ ಚಿರತೆ ಮತ್ತು ನಾಯಿ ಸುಬ್ರಹ್ಮಣ್ಯ ಸಮೀಪದ ಕೈಕಂಬ ರೇಗಪ್ಪ ಎಂಬವರ ಮನೆಯ ಟಾಯ್ಲೆಟ್ ಒಳಗಡೆ ನಾಯಿಯನ್ನು ಓಡಿಸಿಕೊಂಡು ಹೋದ ಚಿರತೆಯನ್ನು ಮನೆಯವರು ಬಾಗಿಲು ಹಾಕಿ ಒಳಗಡೆ ಕೂಡ ಹಾಕಿರುತ್ತಾರೆ.

ಸುಬ್ರಹ್ಮಣ್ಯ ಸಮೀಪದ ಕೈಕಂಬ ನಿವಾಸಿ ರೇಗಪ್ಪ ಎಂಬವರ ಮನೆಯ ಸಮೀಪ ಸಾಕು ನಾಯಿಯನ್ನು ಚಿರತೆಯೊಂದು ಅಟ್ಟಿಸಿಕೊಂಡು ಬಂದಿದೆ. ಚಿರತೆಯಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಸಾಕುನಾಯಿಯು ಮನೆಯ ಹೊರಗಿದ್ದ ಶೌಚಾಲಯಕ್ಕೆ ಹೊಕ್ಕಿದ್ದು, ಚಿರತೆಯು ನಾಯಿಯನ್ನು ಹಿಂಬಾಲಿಸಿ ಶೌಚಾಲಯದ ಒಳಗೆ ಬಂದಿದೆ.

ಇದನ್ನು ಗಮನಿಸಿದ ಮನೆಯವರು ಹೊರಗಿನಿಂದ ಶೌಚಾಲಯದ ಬಾಗಿಲನ್ನು ಹಾಕಿದ್ದು, ಇದೀಗ ನಾಯಿ ಮತ್ತು ಚಿರತೆ ಎರಡೂ ಶೌಚಾಲಯದ ಒಳಗೆ ಬಂಧಿಯಾಗಿದೆ. ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದ್ದು, ಇನ್ನಷ್ಟೇ ಕಾರ್ಯಾಚರಣೆ ನಡೆಯಬೇಕಿದೆ.

ಅರಿವಳಿಕೆ ತಜ್ಞರ ತಂಡ ಆಗಮಿಸಿ ಚಿರತೆಯನ್ನು ಹಿಡಿಯಲು ಯೋಜನೆ ರೂಪಿಸಲಾಗಿದೆ.

More from the blog

ಕಲ್ಲಡ್ಕ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಲ್ಲಡ್ಕದ ಪ್ಲೈ ಓವರ್ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಿಸಿರೋಡು - ಅಡ್ಡಹೊಳೆ ಅತೀ ಉದ್ದದ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತವಾಗಿದೆ. ಕಳೆದ 25 ದಿನಗಳ ಹಿಂದೆ...

ಇಡ್ಕಿದು ಗ್ರಾ. ಪಂ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅನುಮತಿ ವಿಚಾರ : ಪಿಡಿಒ ಅಮಾನತು

ವಿಟ್ಲ: ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅವಕಾಶ ನೀಡಿದ‌ ಆರೋಪದ ಹಿನ್ನೆಲೆ ಯಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೋಕುಲ್ ದಾಸ್ ಭಕ್ತ ರವರನ್ನು ಅಮಾನತು...

ವೀರಕಂಭ ಗ್ರಾಮದ ರೈತರಿಗೆ ಕೃಷಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ..

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕೃಷಿ ಇಲಾಖೆ ಬಂಟ್ವಾಳ ತಾಲೂಕು 2025-26 ನೇ ಸಾಲಿನ ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನ ಯೋಜನೆಯಡಿ ರೈತರಿಗೆ ಕೃಷಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ...

ಆಕ್ಸಿಯಂ-4 ಉಡಾವಣೆ ಯಶಸ್ವಿ – ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅಂತರಿಕ್ಷಯಾನ ಶುರು..

ಆಕ್ಸಿಯಮ್ 4 ಮಿಷನ್ ಬುಧವಾರ ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆಯಾಗಿದೆ. ಮಧ್ಯಾಹ್ನ ಭಾರತೀಯ ಕಾಲಮಾನ 12.01ಕ್ಕೆ ಆಕ್ಸಿಯಮ್-4 ಬಾಹ್ಯಾಕಾಶ ಯೋಜನೆಯ ಗಗನಯಾತ್ರಿಗಳನ್ನು ಹೊತ್ತ ಸ್ಪೇಸ್ಎಕ್ಸ್ ಫಾಲ್ಕನ್-9 ನೌಕೆ, ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ...