Wednesday, February 12, 2025

ದಯಾಮರಣ ಕೋರಿ ರಾಷ್ಟ್ರಪತಿಗೆ ಮನವಿ ಸಲ್ಲಿಸಿದ ವೃದ್ಧ ದಂಪತಿ…. ಕಾರಣವಾದರೂ ಏನು…?

ಕಡಬ: ವ್ಯಕ್ತಿಯೋರ್ವರು ತಾವು ವಾಸಿಸುತ್ತಿರುವ ಮನೆಯನ್ನು ತೆರವುಗೊಳಿಸುವಂತೇ ನ್ಯಾಯಾಲಯದಿಂದ ಆದೇಶ ತಂದ ಹಿನ್ನೆಲೆಯಲ್ಲಿ ವೃದ್ಧ ದಂಪತಿಗಳಿಬ್ಬರು ತಮಗೆ ದಯಾಮರಣ ಕರುಣಿಸುವಂತೆ ತಹಶಿಲ್ದಾರ್ ಮೂಲಕ ದೇಶದ ಮಾನ್ಯ ರಾಷ್ಟ್ರಪತಿಗಳಿಗೆ ಅರ್ಜಿ ಸಲ್ಲಿಸಿದ ವಿಲಕ್ಷಣ ಘಟನೆ ಕಡಬದಲ್ಲಿ ನಡೆದಿದೆ.

ರಾಧಮ್ಮ ಮತ್ತು ಮುತ್ತುಸ್ವಾಮಿ ಎಂಬವರು ಕಡಬ ತಾಲೂಕಿನ ಉಪ್ಪಿನಂಗಡಿ ಹೋಬಳಿಯ ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ಎಂಬಲ್ಲಿ ಸರ್ಕಾರಿ ಜಾಗದ ಸರ್ವೇ ನಂಬರ್ 123/1 ರಲ್ಲಿ ಕಳೆದ 6 ವರ್ಷಗಳಿಂದ ವಾಸವಾಗಿದ್ದಾರೆ. ಚಿತ್ರದುರ್ಗ ಜಿಲ್ಲೆಯಲ್ಲಿ ಹುಟ್ಟಿ ಬೆಳೆದಿರುವ ಇವರು ಕಳೆದ ಸುಮಾರು 6 ವರ್ಷಗಳ ಹಿಂದೆ ಕೂಲಿ ಕೆಲಸಕ್ಕಾಗಿ ಇಲ್ಲಿಗೆ ಆಗಮಿಸಿ, ಇಲ್ಲೇ ಕೂಲಿ ಕೆಲಸ ಮಾಡುತ್ತಾ ನೆಲೆಸಿ ಸುಮಾರು ಐವತ್ತು ಸಾವಿರ ರೂಪಾಯಿ ಸಂಪಾದನೆ ಮಾಡಿ ಅದನ್ನು ಒಬ್ಬರಿಗೆ ನೀಡಿ ಅವರ ಕೈಯಿಂದ ಸರಕಾರಿ ಜಾಗವನ್ನು ತೆಗೆದುಕೊಂಡು ಅಲ್ಲಿ ದನಕರುಗಳನ್ನು ಸಾಕುತ್ತಾ ತಮ್ಮ ಜೀವನವನ್ನು ಸಾಗಿಸುತ್ತಿದ್ದರು.ವೃದ್ದರಾದ ಇವರಿಗೆ ಯಾವುದೇ ಪಿತ್ರಾರ್ಜಿತವಾಗಿ ಬಂದ ಆಸ್ತಿಯೂ ಇರುವುದಿಲ್ಲ ಎನ್ನಲಾಗಿದೆ. ಆದ್ದರಿಂದ ಸರ್ಕಾರಿ ಜಾಗ 123/1 ರಲ್ಲಿನ ಕಾಪಿನಬಾಗಿಲು ಎಂಬಲ್ಲಿ ಈ ವೃದ್ಧ ದಂಪತಿಗಳು ಕೂಲಿ ಕೆಲಸ ಮಾಡುತ್ತಾ,ದನಗಳನ್ನು ಸಾಕುತ್ತಾ ಆರು ವರ್ಷಗಳಿಂದ ಜೀವನ ನಡೆಸುತ್ತಿದ್ದಾರೆ. ಈ ಸರಕಾರಿ ಜಾಗಕ್ಕೆ ಇವರು ಹಕ್ಕುಪತ್ರಕ್ಕೂ ಅರ್ಜಿ ಸಲ್ಲಿಸಿದ್ದರು.ಆದರೆ ಅದನ್ನು ಕಂದಾಯ ಅಧಿಕಾರಿಗಳು ತಿರಸ್ಕರಿಸಿದರು ಎನ್ನಲಾಗಿದೆ. ಈ ಸರ್ಕಾರಿ ಜಾಗದಲ್ಲಿ ಇವರು ಇದ್ದಾರೆ ಎಂಬ ಕಾರಣದಿಂದಾಗಿ ಬೆಳ್ತಂಗಡಿ ತಾಲೂಕಿನ ಅಶೋಕ್ ಆಚಾರ್ಯ ಎಂಬವರು ಇವರನ್ನು ಇಲ್ಲಿಂದ ಒಕ್ಕಲೆಬ್ಬಿಸುವ ಸಲುವಾಗಿ ಹೈಕೋರ್ಟ್ ನಲ್ಲಿ ದಾವೆ ಹೂಡಿ,ತಮ್ಮನ್ನು ಬದುಕಲು ಬಿಡುತ್ತಿಲ್ಲ ಎಂಬುದು ಈ ವೃದ್ಧ ದಂಪತಿಗಳ ಅಳಲು. ಈ ಕಾರಣದಿಂದಾಗಿ ಸ್ಥಳೀಯ ಗ್ರಾಮ ಕರಣಿಕರು ತಮ್ಮ ಮನೆಗೆ ಬಂದು ಮೌಖಿಕವಾಗಿ ತಿಳಿಸಿ,ತಮ್ಮ ಮನೆಯನ್ನು ತೆರವು ಮಾಡುವಂತೆ ನೋಟೀಸ್ ಹಚ್ಚಿ ಹೋಗಿದ್ದಾರೆ ಎನ್ನಲಾಗಿದೆ. ಆದರೆ ತಮಗೆ ನೀಡಲಾದ ನೋಟೀಸ್ ಈಗಾಗಲೇ ಬೆಳ್ತಂಗಡಿಗೆ ಮದುವೆ ಮಾಡಿಕೊಟ್ಟ ಮಗಳ ಹೆಸರಲ್ಲಿ ನೀಡಲಾಗಿದೆ. ಅವರಿಗೂ ಇವರು ಪ್ರಸ್ತುತ ವಾಸವಿರುವ ಮನೆಗೂ ದಾಖಲೆಗಳ ಪ್ರಕಾರ ಯಾವುದೇ ಸಂಬಂಧ ಇಲ್ಲ ಎನ್ನಲಾಗಿದೆ. ಈ ವೃದ್ಧ ದಂಪತಿಗಳ ಬಳಿ ಆಧಾರ್ ಕಾರ್ಡ್, ರೇಷನ್ ಕಾರ್ಡ್,ಮತದಾನದ ಗುರುತಿನ ಚೀಟಿ ಸೇರಿದಂತೆ ಎಲ್ಲಾ ದಾಖಲೆಗಳೂ ಇದೆ. ನೀಡಿರುವ ನೋಟೀಸ್ ಪ್ರಕಾರ ಇನ್ನು ಎರಡು ದಿವಸದಲ್ಲಿ ಈ ಜಾಗವನ್ನು ಬಿಟ್ಟು ಇವರು ತೆರಳಬೇಕು ಎಂಬುದಾಗಿಯೂ ತಾಕೀತು ಮಾಡಲಾಗಿದೆ. ಕುಡಿಯುವ ನೀರಿನ ಸಂಪರ್ಕ ಸೇರಿದಂತೆ ಯಾವುದೇ ಪಂಚಾಯತ್ ಸೌಲಭ್ಯಗಳು ಈ ಹಿರಿಜೀವಗಳ ಕುಟುಂಬಕ್ಕೆ ಲಭ್ಯವಾಗಿಲ್ಲ.ಇವರಿಗೆ ಬೇರೆ ಯಾವುದೇ ಆಸ್ತಿಗಳಾಗಲೀ,ಆಶ್ರಯವಾಗಲೀ ಇಲ್ಲ ಎನ್ನಲಾಗಿದೆ. ಬಡವರಾದ ಇವರು ಕಡಬ ತಹಶಿಲ್ದಾರ್ ಮೂಲಕ ದೇಶದ ಮಾನ್ಯ ರಾಷ್ಟ್ರಪತಿಗಳಿಗೆ ದಯಾಮರಣಕ್ಕಾಗಿ ಮನವಿ ಮಾಡಿದ್ದೂ, ನಮ್ಮನ್ನು ಒಂದಾ ಈ ಸರ್ಕಾರಿ ಜಾಗದಲ್ಲಿ ತಾವು ನಿರ್ಮಿಸಿರುವ ಸಣ್ಣ ಮನೆಯಲ್ಲಿ ಜೀವನ ನಡೆಸಲು ಅವಕಾಶ ಕಲ್ಪಿಸಿಕೊಡಿ.ಅಥವಾ ಅದಕ್ಕೆ ಸಾಧ್ಯವಿಲ್ಲಾ ಎಂಬುದಾದರೆ ದಯಮಾಡಿ ವೃದ್ದರಾದ ನಮಗೆ ದಯಾಮರಣ ಅಥವಾ ಇನ್ಯಾವುದೇ ರೀತಿಯಲ್ಲಿ ಒಳ್ಳೆಯ ಮರಣಕ್ಕೆ ಅವಕಾಶವನ್ನು ನೀಡಬೇಕು ಎಂದು ಅರ್ಜಿ ನೀಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಕಡಬ ತಹಶಿಲ್ದಾರ್ ಪ್ರಭಾಕರ್ ಖಜೂರೆ ಅವರು ಕೂಡಲೇ ಪರಿಶೀಲನೆ ನಡೆಸಿ ಸೂಕ್ತ ಕ್ರಮಗಳನ್ನು ಕೈಗೊಳ್ಳುವ ಭರವಸೆಯನ್ನು ನೀಡಿದ್ದಾರೆ.

More from the blog

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...