Sunday, January 25, 2026

ಕಡಬ ಕಾಲೇಜು ವಿದ್ಯಾರ್ಥಿಯರ ಮೇಲೆ ನಡೆದ ಆಸಿಡ್ ದಾಳಿ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಿ: ದ.ಕ. ಜಿಲ್ಲಾ ದಲಿತ್ ಸೇವಾ ಸಮಿತಿ ಆಗ್ರಹ 

ವಿಟ್ಲ: ಕಡಬ ಸರ್ಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಯರ ಮೇಲೆ ನಡೆದ ಆಸಿಡ್ ದಾಳಿಯ ಆರೋಪಿಗೆ ಕಠಿಣ ಶಿಕ್ಷೆಯನ್ನು ವಿಧಿಸಬೇಕು. ಎಲ್ಲಾ ಶಾಲೆ ಕಾಲೇಜು ವಿದ್ಯಾರ್ಥಿಯರ ರಕ್ಷಣೆಗೆ ಸರ್ಕಾರ ಅಗತ್ಯ ಕ್ರಮವನ್ನು ಕೈಗೊಳ್ಳಬೇಕು. ಹೆತ್ತವರು ಠಾಣೆಗೆ ದೂರು ನೀಡಿದ ಸಂದರ್ಭದಲ್ಲಿ ತನಿಖೆಗೆ ಪೊಲೀಸರು ಹಿಂಜರಿಯಬಾರದು ಎಂದು ದ.ಕ. ಜಿಲ್ಲಾ ದಲಿತ್ ಸೇವಾ ಸಮಿತಿ ಸ್ಥಾಪಕಾಧ್ಯಕ್ಷ ಬಿ. ಕೆ. ಸೇಸಪ್ಪ ಬೆದ್ರಕಾಡು ಹೇಳಿದರು.

ಯುವಕ ಯುವತಿಯರ ನಡುವೆ ಪ್ರೇಮ ಪ್ರಕರಣಗಳು ಹೆಚ್ಚಾಗುತ್ತಿದ್ದು, ಪ್ರೀತಿಗೆ ಒಪ್ಪದ ಸಂದರ್ಭದಲ್ಲಿ ಕೆಟ್ಟ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಪ್ರಕರಣಗಳನ್ನು ಹೆತ್ತವರಿಗೆ, ಸಂಘಟನೆಗಳ, ಪೊಲೀಸ್ ಇಲಾಖೆಯ ಗಮನಕ್ಕೆ ತರಲು ಹಿಂದೇಟು ಹಾಕಬಾರದು. ಕಾಲೇಜಿಗೆ ಬೇಟಿ ನೀಡುವ ಅಪರಿಚಿತರನ್ನು ತನಿಖೆ ನಡೆಸದೆ ಒಳಗೆ ಬಿಡದಂತೆ ಸರ್ಕಾರ ಅಗತ್ಯ ಕ್ರಮ ತೆಗೆದುಕೊಳ್ಳಬೇಕೆಂದು ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.

ಕಾರ್ಯಾಧ್ಯಕ್ಷ ಚಂದ್ರಶೇಖರ್ ಯು. ವಿಟ್ಲ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಪ್ರೇಮ ಬೆದ್ರಕಾಡು, ಪ್ರಧಾನ ಕಾರ್ಯದರ್ಶಿ ವಿದ್ಯಾ, ಗೌರವ ಸಲಹೆಗಾರ ಗೋವಿಂದ ನಾಯ್ಕ ಉಪಸ್ಥಿತರಿದ್ದರು.

More from the blog

ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಲ್ಲಡ್ಕ : ಮಾಸಿಕ ಸಭೆ, ಹಾಗೂ ಸದಸ್ಯರಿಗೆ ಬ್ಯಾಗ್ ಹಸ್ತಾಂತರ

ಕಲ್ಲಡ್ಕ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್( ರಿ.) ವಿಟ್ಲ ಇದರ ಕಲ್ಲಡ್ಕ ವಲಯದ ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಲ್ಲಡ್ಕ ಇದರ ಮಾಸಿಕ ಸಭೆ, ಘಟಕ ಅಧ್ಯಕ್ಷ ಮಾಧವ...

ಲಕ್ಷ್ಮೀ ಪ್ರಸಾದ್ ಬೊಟ್ಯಾಡಿ ವಿರುದ್ಧ FIR

  ಇತ್ತೀಚೆಗೆ ಪುತ್ತೂರು ವಿಧಾನಸಭಾ ಕ್ಷೇತ್ರದ ಭವಿಷ್ಯತ ಅಭ್ಯರ್ಥಿಯಾಗಿ ಹೆಸರು ಮುನ್ನೆಲೆಗೆ ಬಂದಿದ್ದ ಲಕ್ಷ್ಮಿ ಪ್ರಸಾದ್ ಬೊಟ್ಯಾಡಿ ವಿರುದ್ಧ FIR ದಾಖಲಾಗಿರುವುದು ಪುತ್ತೂರಿನ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಜ.21 ರಂದು ಹಿಂದೂ ಮುಖಂಡ...

ಪುತ್ತೂರಿನ ರಾಜಕೀಯಕ್ಕೆ ಹೊಸ ದಿಕ್ಕು ? – ಲಕ್ಷ್ಮಿ ಪ್ರಸಾದ್ ಬೊಟ್ಯಾಡಿ ಪುತ್ತೂರು ವಿಧಾನ ಸಭಾ ಟಿಕೆಟ್

ಪುತ್ತೂರು : ವಿಧಾನಸಭಾ ಕ್ಷೇತ್ರದ ರಾಜಕೀಯವು ಕಳೆದ ಕೆಲವು ವರ್ಷಗಳಿಂದ ನಿರಂತರ ಅಂತರಿಕ ಸಂಘರ್ಷಗಳು, ವ್ಯಕ್ತಿಕೇಂದ್ರಿತ ಮೇಲಾಟಗಳು ಮತ್ತು ಗೊಂದಲಗಳ ನಡುವೆ ಸಿಲುಕಿರುವುದು ಸ್ಪಷ್ಟ. ಇದರ ಪರಿಣಾಮವಾಗಿ ಕಳೆದ ಚುನಾವಣೆಯಲ್ಲಿ ಬಿಜೆಪಿ ಎದುರಿಸಿದ...

ಪುತ್ತೂರು ಗ್ರಾಮಾಂತರ ಪೊಲೀಸರ ಭರ್ಜರಿ ಕಾರ್ಯಾಚರಣೆ : 106 ಕಿಲೋ ಗ್ರಾಂ ಗಾಂಜಾ ವಶ, ಇಬ್ಬರ ಬಂಧನ

ಪುತ್ತೂರು : ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಭರ್ಜರಿ ಕಾರ್ಯಾಚರಣೆಯಲ್ಲಿ ಪೊಲೀಸರು 106 ಕಿಲೋಗ್ರಾಂ ಗಾಂಜಾವನ್ನು ವಶಪಡಿಸಿಕೊಂಡು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಜ.19ರಂದು, ಒಂದು ಕಾರು ಮತ್ತು ಒಂದು ಅಶೋಕ್ ಲೈಲ್ಯಾಂಡ್ ಗೂಡ್ಸ್...