Tuesday, January 27, 2026

ಮದ್ಯಪಾನವಿಲ್ಲದೆ ಚಡಪಡಿಸುತ್ತಿದ್ದ ಇಬ್ಬರು ಮದ್ಯಪ್ರಿಯರು ಆತ್ಮಹತ್ಯೆ

ಕಡಬ: ಮದ್ಯಪಾನ ಚಟ ಹೊಂದಿದ್ದ ವ್ಯಕ್ತಿಗಳಿಬ್ಬರು ಮದ್ಯ ಸಿಗದ ಕಾರಣ ಜುಗುಪ್ಸೆಗೊಂಡು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಪ್ರತ್ಯೇಕ ಘಟನೆ ಶನಿವಾರದಂದು ಕಡಬದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ಕೋಡಿಂಬಾಳ ಗ್ರಾಮದ ಗಾಣದಕೆರೆ ನಿವಾಸಿ ತೋಮಸ್(70) ಹಾಗೂ ಕೇರಳದ ಕೊಟ್ಟಾಯಂ ಜಿಲ್ಲೆಯ ಪತ್ತನಂತಿಟ್ಟ ನಿವಾಸಿ ಟೋನಿ ಥೋಮಸ್(50) ಎಂದು ಗುರುತಿಸಲಾಗಿದೆ.

ಇವರಿಬ್ಬರೂ ವಿಪರೀತ ಮದ್ಯ ಸೇವಿಸುತ್ತಿದ್ದುದರಿಂದ ಕಳೆದ ಕೆಲವು ದಿನಗಳಿಂದ ಮದ್ಯ ಸಿಗದೆ ಚಡಪಡಿಸುತ್ತಿದ್ದರು ಎನ್ನಲಾಗಿದೆ. ಶನಿವಾರದಂದು ಓರ್ವ ಮನೆಯ ಮೇಲ್ಛಾವಣಿಗೆ ಹಾಗೂ ಮತ್ತೋರ್ವ ಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯ ಈ ಬಗ್ಗೆ ಕಡಬ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ.

More from the blog

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...

ಕೊಡಾಜೆ : ತರ್ಬಿಯತುಲ್ ಇಸ್ಲಾಂ ಮದ್ರಸದಲ್ಲಿ ಗಣರಾಜ್ಯೋತ್ಸವ ಆಚರಣೆ

ಬಂಟ್ವಾಳ : ಕೊಡಾಜೆ ಬದ್ರಿಯಾ ಜುಮಾ ಮಸೀದಿ ಇದರ ಅಧೀನದ ತರ್ಬಿಯತುಲ್ ಇಸ್ಲಾಂ ಮದ್ರಸದ ವತಿಯಿಂದ ಗಣರಾಜ್ಯೋತ್ಸವ ಆಚರಿಸಲಾಯಿತು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಮಸೀದಿ ಅಧ್ಯಕ್ಷ ಅಬ್ಬಾಸ್ ನೇರಳಕಟ್ಟೆ ಧ್ವಜಾರೋಹಣ ನೆರವೇರಿಸಿದರು. ಮಸೀದಿ ಕಾರ್ಯದರ್ಶಿ ಎಸ್.ಎಂ.ರಫೀಕ್...

ಕಟೀಲು 7 ಮೇಳಗಳ ಜ.27ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.27ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.27ರ ಸೇವೆಯಾಟಗಳ ವಿವರ : ಆಡಳಿತ ಮಂಡಳಿ, ಶ್ರೀ ಮಹಾಗಣಪತಿ ದೇವಸ್ಥಾನ,...

ತುಂಬೆಯಲ್ಲಿ ಪ್ರಸಕ್ತ ವರ್ಷ ನಿವೃತ್ತರಾಗುವವರಿಗೆ ಅಭಿನಂದನಾ ಸಮಾರಂಭ 

ಬಂಟ್ವಾಳ : ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದವರನ್ನು ಗೌರವಿಸಬೇಕಾದ್ದು ಅಗತ್ಯ. ಅವರ ಅರ್ಪಣಾ ಮನೋಭಾವ, ಶಿಸ್ತುಬದ್ಧ ಸೇವೆ, ವಿದ್ಯಾರ್ಥಿಗಳು ಮತ್ತು ಸಂಸ್ಥೆಯ ಏಳಿಗೆಗಾಗಿ ವಹಿಸಿದ ಪಾತ್ರ ಮತ್ತು ಕೊಡುಗೆಗಳನ್ನು ಸದಾ ಸ್ಮರಿಸಬೇಕು. ಈ ನಿಟ್ಟಿನಲ್ಲಿ...