Wednesday, January 28, 2026

ಕಡಬ ತಾಲೂಕು ಪಂಚಾಯತ್ ಕಚೇರಿಗೆ ಲೋಕಾಯುಕ್ತ ದಾಳಿ

ಕಡಬ: ಇಲ್ಲಿನ ತಾಲೂಕು ಪಂಚಾಯತ್ ಗೆ ಮಾ.27ರಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.

ಕಡಬ ತಾಲೂಕು ಪಂಚಾಯತ್ ನ ನೂತನ ಕಾರ್ಯ ನಿರ್ವಾಹಕ ಅಧಿಕಾರಿ ಬಿ.ವಿ.ಜಯಣ್ಣ ಅವರು ಈ ಹಿಂದೆ ಸೋಮವಾರಪೇಟೆ ತಾಲೂಕು ಪಂಚಾಯತ್ ನಲ್ಲಿ ಕಾರ್ಯ ನಿರ್ವಾಹಕ ಅಧಿಕಾರಿಯಾಗಿದ್ದು, ಅಲ್ಲಿಗೆ ಸಂಬಂಧಿಸಿದ ಅಕ್ರಮ ಅಸ್ತಿ ಪ್ರಕರಣದ ಹಿನ್ನೆಲೆ ಲೋಕಾಯುಕ್ತ ಪೊಲೀಸರು ತನಿಖೆಗಾಗಿ ಆಗಮಿಸಿದ್ದಾರೆ ಎಂದು ತಿಳಿದು ಬಂದಿದೆ.

ಸೋಮವಾರಪೇಟೆಯಲ್ಲಿ ಜಯಣ್ಣ ಅವರಿಗೆ ಸೇರಿದ ಮನೆಯ ಮೇಲೆಯೂ ದಾಳಿ ನಡೆದಿದೆ. ಜಯಣ್ಣ ಅವರು ವಾಸ್ತವ್ಯವಿದ್ದ ಕಡಬದ ಪಂಜ ರಸ್ತೆಯಲ್ಲಿರುವ ವಿದ್ಯಾನಗರದ ಬಾಡಿಗೆ ಮನೆಗೆ ಮುಂಜಾನೆ ಆಗಮಿಸಿದ ಲೋಕಾಯುಕ್ತ ಪೊಲೀಸರು ಜಯಣ್ಣ ಅವರನ್ನು ಕಡಬ ತಾಲೂಕು ಪಂಚಾಯತ್ ಕಚೇರಿಗೆ ಕರೆತಂದು ವಿಚಾರಣೆ ನಡೆಸುತ್ತಿದ್ದಾರೆ.

ಮಿತಿಗಿಂತ ಹೆಚ್ಚು ಆದಾಯ ಹೊಂದಿದ ದೂರಿನ ಹಿನ್ನೆಲೆ ಕೊಡಗು ಲೋಕಾಯುಕ್ತ ಡಿವೈಎಸ್ಪಿ‌ ಪವನ್ ಕುಮಾರ್, ಇನ್ಸ್ ಪೆಕ್ಟರ್ ಲೋಕೇಶ್ ನೇತೃತ್ವದಲ್ಲಿ ದಾಳಿ ನಡೆದಿದ್ದು, ಇನ್ಸ್ ಪೆಕ್ಟರ್ ಶಶಿಕುಮಾರ್ ಹಾಗೂ ಸಿಬಂದಿಗಳು ಕಡಬದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.

More from the blog

ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಗ್ರಾ.ಪಂ.ಸದಸ್ಯ ಹಾಶೀರ್ ಪೆರಿಮಾರ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

ಬಂಟ್ವಾಳ: ವಿದ್ಯುತ್ ಸಮಸ್ಯೆಯಿಂದ ಬೇಸೆತ್ತ ಗ್ರಾಮಸ್ಥರ ಸಮಸ್ಯೆಗೆ ಸಕಾಲದಲ್ಲಿ ಸ್ಪಂದಿಸಿದ ಪುದು ಗ್ರಾಮಪಂಚಾಯತ್ ಸದಸ್ಯನಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. ಪುದು ಗ್ರಾಮದ ಪೇರಿಮಾರ್ ವಾರ್ಡಿನ ರಾಷ್ಟ್ರೀಯ ಹೆದ್ದಾರಿ ಬದಿಯಿಂದ ದೇವಸ್ಯ, ಜಲಾಲಿಯ ನಗರ, ಮಾರಿಪಳ್ಳ...

Bantwal : ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ – ಪದಾಧಿಕಾರಿಗಳ ಪದಾಪ್ರಧಾನ, ರಜತ ಸಂಭ್ರಮ ಸಮಾರೋಪ

ಬಂಟ್ವಾಳ :ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ರಿ, ಬಂಟ್ವಾಳ ವಲಯದ ನೂತನ ಪದಾಧಿಕಾರಿಗಳ ಪದಾಪ್ರಧಾನ ಸಮಾರಂಭ ಹಾಗು ರಜತ ಸಂಭ್ರಮದ ಸಮಾರೋಪ ಸಮಾರಂಭ ವು ಬಿಸಿ ರೋಡ್ ನ ಲಯನ್ಸ್ ಸೇವಾ...

B.C. Road : ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ ಬಿಸಿರೋಡಿನ ರಕ್ತೇಶ್ವರಿ...

ಕಟೀಲು 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.28ರ ಸೇವೆಯಾಟಗಳ ವಿವರ : ಆನಂದ ಎಂ. ಶೆಟ್ಟಿ, ಏಳಿಂಜೆ ಅಂಗಡಿಗುತ್ತು,...