Friday, July 4, 2025

ಬೀದರ್ ಶಾಹೀನ್ ಶಿಕ್ಷಣ ಸಂಸ್ಥೆಗೆ ಯು.ಟಿ.ಖಾದರ್ ಭೇಟಿ 

ಬೀದರ್, ಜು.22: ಬೀದರ್ ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹ ಸಂಸ್ಥೆಗೆ ಬುಧವಾರ ಭೇಟಿ ನೀಡಿದ ಶಾಸಕ ಯು.ಟಿ.ಖಾದರ್ ಅವರು ಸಂಸ್ಥೆಯ ವಿದ್ಯಾರ್ಥಿಗಳೊಂದಿಗೆ ಬಕ್ರೀದ್ ಹಬ್ಬವನ್ನು ಆಚರಿಸಿದರು.

ವಿದ್ಯಾರ್ಥಿಗಳು ಮತ್ತು ಆಡಳಿತ ಮಂಡಳಿಯವರ ಜೊತೆ ಈದ್ ಶುಭಾಶಯ ವಿನಿಮಯ ಮಾಡಿದ ಬಳಿಕ ಮಾತನಾಡಿದ ಯು.ಟಿ.ಖಾದರ್ ಅವರು, ಶಾಹೀನ್ ಶಿಕ್ಷಣ ಸಂಸ್ಥೆಯು ವಿದ್ಯಾರ್ಥಿಗಳಿಗೆ ಮೌಲ್ಯಯುತ ಶಿಕ್ಷಣವನ್ನು ನೀಡುವ ಮೂಲಕ ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿದೆ. ಇದು ಶಿಕ್ಷಣ ಸಂಸ್ಥೆಯು ದೇಶಕ್ಕೆ ನೀಡುತ್ತಿರುವ ಅತೀ ದೊಡ್ಡ ಕೊಡುಗೆಯಾಗಿದೆ ಎಂದು ಹೇಳಿದರು.

ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಹಾಸ್ಟೆಲ್ ಸೌಲಭ್ಯಗಳನ್ನು ಒದಗಿಸುವ ಮೂಲಕ ಬಡವರ ಮಕ್ಕಳೂ ಉನ್ನತ ಶಿಕ್ಷಣ ವ್ಯಾಸಂಗ ಮಾಡುವಂತೆ ಸಹಕಾರ ನೀಡುತ್ತಿರುವ ಈ ಶಿಕ್ಷಣ ಸಂಸ್ಥೆಯ ಮಾದರಿ ಕಾರ್ಯ ಮೆಚ್ಚುಗೆಗೆ ಪಾತ್ರವಾಗಿದೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಬೀದರ್ ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಡಾ. ಅಬ್ದುಲ್ ಖದೀರ್, ಅಬ್ದುಲ್ ಮುಕೀತ್, ಅಬ್ದುಲ್ ರವೂಫ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

More from the blog

School holiday:ಬಂಟ್ವಾಳ ತಾಲೂಕಿನ ಶಾಲಾ,ಕಾಲೇಜುಗಳಿಗೆ ರಜೆ

ತಾಲೂಕಿನಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು ,ಪ್ರಾಥಮಿಕ ಮತ್ತು ಪ್ರೌಢಶಾಲೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ದಿನಾಂಕ 04.07.2025 ರಂದು ರಜೆ ಘೋಷಿಸಲಾಗಿದೆ...

ಬೆಂಜನಪದವು ಶಾಲೆ : ಉಚಿತ ಯಕ್ಷಗಾನ ನಾಟ್ಯ ತರಗತಿ ಶುಭಾರಂಭ..

ಬಂಟ್ವಾಳ: ಬೆಂಜನಪದವು ಸರಕಾರಿ ಪದವಿಪೂರ್ವ ಕಾಲೇಜು ಬೆಂಜನಪದವು ಪ್ರೌಢಶಾಲಾ ವಿಭಾಗದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ವತಿಯಿಂದ ಉಚಿತ ಯಕ್ಷಗಾನ ನಾಟ್ಯ ತರಗತಿ ಉದ್ಘಾಟನೆ ಗೊಂಡಿತು. ಫೌಂಡೇಶನ್ ನ ಸಂಚಾಲಕರಾದ ಶ್ರೀ ವಾಸುದೇವ ಐತಾಳ್ ದೀಪ...

ಜು.12ರಂದು ಬಂಟ್ವಾಳ ನ್ಯಾಯಾಲಯದಲ್ಲಿ ರಾಷ್ಟ್ರೀಯ ಲೋಕ ಅದಾಲತ್..

ಬಂಟ್ವಾಳ : ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜು.12ರಂದು ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮ ತಾಲೂಕು ಕಾನೂನು ಸೇವೆಗಳ ಸಮಿತಿ ಬಂಟ್ವಾಳ ಇವರ...

ಅಕ್ರಮ ಗಣಿಗಾರಿಕೆ: ಲಾರಿಗಳನ್ನು ತಡೆದ ಗ್ರಾಮಸ್ಥರು..

ಬಂಟ್ವಾಳ: ಪಲ್ಲಮಜಲು ಕೋರೆಯಿಂದ ಲಾರಿಗಳು ಜಲ್ಲಿಕಲ್ಲು ಲೋಡ್ ಮಾಡಿಕೊಂಡು ಹೋಗುತ್ತಿದ್ದ ವೇಳೆ ಸಾರ್ವಜನಿಕರಿಂದ ಲಾರಿಗಳನ್ನು ತಡೆದು ಪ್ರತಿಭಟಿಸಿದ ಘಟನೆ ಇಂದು ನಡೆದಿದೆ. ಪಲ್ಲಮಜಲು ಗಣಿಗಾರಿಕೆಯಿಂದ ಸ್ಥಳೀಯ ಮನೆಗಳಿಗೆ ಹಾನಿಯಾಗಿದೆ ಎಂದು ಗ್ರಾಮಸ್ಥರು ಗಣಿಇಲಾಖೆ ಹಾಗೂ...