Wednesday, February 12, 2025

ಗುಂಡಿಗೆ ಬಿದ್ದ ಕಾಡು ಕೋಣದ ಸಂರಕ್ಷಣೆಯ ಪ್ರಯತ್ನ ನಡೆಸುತ್ತಿರುವ ಬಂಟ್ವಾಳ ಅರಣ್ಯ ಇಲಾಖೆ

ಬಂಟ್ವಾಳ: ಕಾಡುಕೋಣವೊಂದು ಗೊಬ್ಬರ ಗ್ಯಾಸ್ ನ ಗುಂಡಿಯೊಳಗೆ ಬಿದ್ದ ಘಟನೆ ಕಾಡಬೆಟ್ಟು ಗ್ರಾಮದ ಕಾಡಬೆಟ್ಟು ಪೂರ್ಲೊಟ್ಟು ಎಂಬಲ್ಲಿ ನಡೆದಿದೆ. ಪೂರ್ಲೊಟ್ಟು ನಿವಾಸಿ ಎಲ್ಪ್ರೆಡ್ ಡಿಸೋಜ ಎಂಬವರ ಮನೆಯ ಗೊಬ್ಬರ ಗ್ಯಾಸ್ ನ ಗುಂಡಿಗೆ ಬಿದ್ದಿದೆ.

ಗೊಬ್ಬರ ಗ್ಯಾಸ್ ನ ಗುಂಡಿಯೊಳಗೆ ಬಿದ್ದಿರುವ ಕಾಡು ಕೋಣಕ್ಕೆ ಮತ್ತೆ ಮೇಲೆ ಬರಲು ಸಾಧ್ಯವಾಗದೆ ಸಿಕ್ಕಿಹಾಕಿಗೊಂಡಿದೆ.
ಬೆಳಿಗ್ಗೆ ವೇಳೆ ಮನೆಯವರು ಗೊಬ್ಬರ ಗ್ಯಾಸ್ ಗೆ ಗೊಬ್ಬರ ಹಾಕಲು ಬಂದ ವೇಳೆ ಈ ಘಟನೆ ಬೆಳಕಿಗೆ ಬಂದ ಬಳಿಕ ಅವರು ಬಂಟ್ವಾಳ ಅರಣ್ಯ ಇಲಾಖೆ ಗೆ ಮಾಹಿತಿ ನೀಡಿದ್ದಾರೆ.
ಮಾಹಿತಿ ತಿಳಿದ ಬಳಿಕ ಬಂಟ್ವಾಳ ಉಪವಲಯ ಸಂರಕ್ಷಣಾ ಧಿಕಾರಿ ಸುರೇಶ್ ಸ್ಥಳ ಕ್ಕೆ ಬೇಟಿ ನೀಡಿ ಕಾಡು ಕೋಣವನ್ನು ಮೇಲಕ್ಕೆ ಎತ್ತುವ ಪ್ರಯತ್ನ ಮಾಡಲಾಗುತ್ತಿದೆ.

 

ಸಾಕಷ್ಟು ಹೆದರಿಕೆಯಿಂದ ಜನರನ್ನು ನೋಡಿದಾಗ ದುರುಗಟ್ಟಿ ನಿಲ್ಲುವ ಕಾಡುಕೋಣವನ್ನು ಮೇಲಕ್ಕೆ ಎತ್ತಲು ಜೆಸಿಬಿ ತರಲಾಗಿದೆ. ಗುಂಡಿಯ ಸುತ್ತಲೂ ಮಣ್ಣು ತೆಗೆದ ಬಳಿಕ ಜಾಗರೂಕತೆಯಿಂದ ಕಾಡು ಕೋಣವನ್ನು ಮೇಲೆ ತರಬೇಕಾಗಿದೆ ಎಂದು ಸುರೇಶ್ ತಿಳಿಸಿದ್ದಾರೆ.
ಕಾಡು ಕೋಣವನ್ನು ನೋಡಲು ಊರಿನ ಜನ ತಂಡತಂಡೋಪವಾಗಿ ಬರುತ್ತಾ ಇದ್ದಾರೆ.

ರಾತ್ರಿ ಹೊತ್ತಿನಲ್ಲಿ ಕಾಡಿನಿಂದ ಬಂದಿರುವ ಈ ಕಾಡುಕೋಣ ಯಾವುದೋ ಪ್ರಾಣಿಯನ್ನು ಅಟ್ಟಿಸಿಕೊಂಡು ಹೋಗುವ ವೇಳೆ ಗೊಬ್ಬರ ಗ್ಯಾಸ್ ಗುಂಡಿ ಕಾಣದೆ ಬಿದ್ದಿರಬೇಕು ಎಂದು ಹೇಳಲಾಗುತ್ತದೆ.
ಅರಣ್ಯ ಇಲಾಖೆಯ ಸಿಬ್ಬಂದಿ ಗಳಾದ ವಿನಯ್, ಬಾಸ್ಕರ್, ಸ್ಮಿತಾ, ಅನಿತಾ ಅನಿಲ್ ಹಾಗೂ ಪರಿಸರ ಸ್ನೇಹಿ ಕಿರಣ್ ಪಿಂಟೋ ಮತ್ತು ಗ್ರಾಮಸ್ಥರ ಸ್ಥಳ ದಲ್ಲಿದ್ದು ಕಾಡು ಕೋಣದ ರಕ್ಷಣೆಯಲ್ಲಿ ತೊಡಗಿದ್ದಾರೆ

More from the blog

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...

ನೇಣು ಬಿಗಿದು ಯುವಕ ಆತ್ಮಹತ್ಯೆ

ಬಂಟ್ವಾಳ: ಖಿನ್ನತೆಯಿಂದ ಅವಿವಾಹಿತ ವ್ಯಕ್ತಿಯೊರ್ವನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಮ್ಟಾಡಿ ನಿವಾಸಿ ಮೆಕ್ಸಿನ್ ತಾವ್ರೋ ಅವರ ಮಗ ಜೀವನ್  ತಾವ್ರೋ ( 37) ಆತ್ಮಹತ್ಯೆ ಮಾಡಿಕೊಂಡ ಯುವಕ. ‌‌‌ಜೀವನ್ ಅವರು ಅಗಾಗ...