Tuesday, January 27, 2026

ಬಿಸಿರೋಡು ಕೈಕುಂಜೆ ಕಾಂಕ್ರೀಟ್ ರಸ್ತೆ ಪಾರ್ಕಿಂಗ್ ತಾಣವಾಗಿ ಮಾರ್ಪಾಡು?

ಬಂಟ್ವಾಳ: ಹದಗೆಟ್ಟಿದ್ದ ಬಿ.ಸಿ.ರೋಡಿನ ಕೈಕುಂಜೆ ರಸ್ತೆಯ ಅಭಿವೃದ್ಧಿ ಕಾರ್ಯ ಬಹುತೇಕ ಪೂರ್ಣಗೊಂಡು ಕಾಂಕ್ರೀಟ್ ರಸ್ತೆ ಸಿದ್ಧಗೊಳ್ಳುತ್ತಿದ್ದಂತೆ ರಸ್ತೆಯ ಎರಡೂ ಬದಿಗಳು ಪಾರ್ಕಿಂಗ್ ತಾಣವಾಗಿ ಪರಿಣಮಿಸಿದ್ದು, ಲಾಕ್‌ಡೌನ್ ಸಡಿಲಗೊಂಡ ಬೆಳಗ್ಗಿನ ಹೊತ್ತು ಹತ್ತಾರು ವಾಹನಗಳು ರಸ್ತೆಯಲ್ಲೇ ನಿಂತಿರುತ್ತವೆ.

ಪ್ರಸ್ತುತ ಕಾಂಕ್ರೀಟ್ ಕಾಮಗಾರಿ ನಡೆದು ರಸ್ತೆಯು ಸಾಕಷ್ಟು ಅಗಲಗೊಂಡಿರುವುದರಿಂದ ಕಾರು ಸೇರಿದಂತೆ ಇತರ ವಾಹನದವರು ತಮಗೆ ವಾಹನ ನಿಲ್ಲಿಸುವುದಕ್ಕಾಗಿಯೇ ರಸ್ತೆಯನ್ನು ಅಭಿವೃದ್ಧಿ ಪಡಿಸಿದ್ದಾರೆ ಎಂಬ ರೀತಿಯಲ್ಲಿ ವಾಹನವನ್ನು ನಿಲ್ಲಿಸಿ ತೆರಳುತ್ತಿದ್ದಾರೆ. ಇನ್ನು ರಸ್ತೆಯಲ್ಲಿ ಸಾಗುವ ವಾಹನಗಳು ಎಲ್ಲಿ ಸಾಗುವುದಕ್ಕೆ ಅನುಕೂಲವಿದೆ ಎಂದು ಹುಡುಕಿಕೊಂಡು ಹೋಗಬೇಕಾದ ಸ್ಥಿತಿ ಇದೆ.
ಪ್ರಸ್ತುತ ಮಧ್ಯಾಹ್ನದವರೆಗೆ ಮಾತ್ರ ಲಾಕ್‌ಡೌನ್ ಸಡಿಲಿಕೆ ಇರುವುದರಿಂದ ಬೆಳಗ್ಗಿನ ಹೊತ್ತು ಹೆಚ್ಚಿನ ವಾಹನಗಳು ಬಿ.ಸಿ.ರೋಡಿನತ್ತ ಆಗಮಿಸುತ್ತಿದ್ದು, ಹೀಗಾಗಿ ಈ ರಸ್ತೆಯಲ್ಲಿ ವಾಹನದೊತ್ತಡವೂ ಅಽಕವಿರುತ್ತದೆ. ಇನ್ನು ತಾಲೂಕು ಕಚೇರಿ ಸೇರಿದಂತೆ ಬಹುತೇಕ ಸರಕಾರಿ ಇಲಾಖೆಗಳಿಗೆ ಇದೇ ರಸ್ತೆಯಲ್ಲಿ ಸಾಗಬೇಕಿರುವುದರಿಂದ ಸಂಚಾರಕ್ಕೆ ಅಡ್ಡಿಯಾಗುತ್ತಿದೆ.
ಮಂಗಳವಾರ ಇದೇ ರೀತಿ ವಾಹನ ನಿಲ್ಲಿಸಿದ ಪರಿಣಾಮ ಸಂಚಾರಕ್ಕೆ ತೊಂದರೆ ಉಂಟಾಗಿದ್ದು, ಬಳಿಕ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯ ಪೊಲೀಸರೊಬ್ಬರು ಸ್ಥಳದಲ್ಲಿ ನಿಂತು ವಾಹನಗಳು ಸಾಗುವುದಕ್ಕೆ ಅನುಕೂಲ ಮಾಡಿಕೊಟ್ಟರು. ಮುಂದಿನ ದಿನಗಳಲ್ಲಿ ಲಾಕ್‌ಡೌನ್ ಪೂರ್ಣ ತೆರೆದು ವಾಹನಗಳ ಓಡಾಟ ಹೆಚ್ಚಿದರೆ ಈ ರೀತಿ ವಾಹನಗಳ ಪಾರ್ಕಿಂಗ್‌ನಿಂದ ತೊಂದರೆ ಉಂಟಾಗುವ ಸಾಧ್ಯತೆ ಇದೆ.

ಕೈಕುಂಜೆ ರಸ್ತೆಯ ಪ್ರಾರಂಭದ ಭಾಗದಲ್ಲಿ ಕಾಂಕ್ರೀಟ್ ಕಾಮಗಾರಿ ನಡೆದಿದ್ದು, ವಾಹನಗಳ ಅಡ್ಡಾದಿಡ್ಡಿ ನಿಲುಗಡೆಯಿಂದ ಕಾಂಕ್ರೀಟ್ ಮಿಕ್ಸರ್ ಲಾರಿಗಳು ತೆರಳುವುದಕ್ಕೂ ತೊಂದರೆಯುಂಟಾಗಿತ್ತು. ರಸ್ತೆಯಲ್ಲೇ ಎರಡೂ ಬದಿ ವಾಹನ ನಿಂತಿರುವುದರಿಂದ ಲಾರಿ ಬಂದಾಗ ಸುಗಮ ಸಂಚಾರಕ್ಕೂ ತೊಂದರೆ ಉಂಟಾಗಿತ್ತು.

More from the blog

ಉಸ್ತುವಾರಿ ಸಚಿವರು ಗಣರಾಜ್ಯೋತ್ಸವ ವೇದಿಕೆಯನ್ನು ಸುಳ್ಳು ಹರಡಲು ಬಳಸಿಕೊಂಡಿರುವುದು ಖೇದಕರ : ಸಂಸದ ಕ್ಯಾ.ಚೌಟ

ಮಂಗಳೂರು: ಸಂವಿಧಾನಿಕ ಹುದ್ದೆಯನ್ನು ದುರುಪಯೋಗಪಡಿಸಿ ಸುಳ್ಳಿನ ಕಾರ್ಖಾನೆಯನ್ನೇ ಸೃಷ್ಟಿಸುವ ಕಾಂಗ್ರೆಸ್‌ ಸರ್ಕಾರದ ಪ್ರಯತ್ನ ಸಂಪೂರ್ಣ ವಿಫಲಗೊಂಡಿರುವ ಕಾರಣ ಇದೀಗ ಸಚಿವ ದಿನೇಶ್‌ ಗುಂಡೂರಾವ್‌ ಅವರು ಘನವೆತ್ತ ರಾಜ್ಯಪಾಲರ ನಡೆಯನ್ನು ಟೀಕಿಸುತ್ತಿದ್ದಾರೆ ಎಂದು ದಕ್ಷಿಣ...

ಸಂಗಬೆಟ್ಟು ಗ್ರಾ.ಪಂ ವಿಶೇಷ ಗ್ರಾಮ ಸಭೆ : ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ತೀರ್ಮಾನ 

ಬಂಟ್ವಾಳ : ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ("ವಿಕಸಿತ್ ಭಾರತ್ "ಗ್ಯಾರಂಟಿ ಯೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಯು ಒಂದು ಅತ್ಯುತ್ತಮ ಯೋಜನೆಯಾಗಿದ್ದು, ಇದರಲ್ಲಿನ ಕೆಲವೊಂದು...

ವೈಭವದಿಂದ ಜರುಗಿದ ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಮಡಂತ್ಯಾರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ಅಂಗವಾಗಿ, ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮವು ಜ. 25 ಭಾನುವಾರದಂದು ಮಡಂತ್ಯಾರಿನಲ್ಲಿ ಅತ್ಯಂತ ವೈಭವ ಮತ್ತು ಶಿಸ್ತಿನೊಂದಿಗೆ ನಡೆಯಿತು. ಸಂಜೆ ನಾಲ್ಕು ಗಂಟೆಗೆ...

ತುಳುನಾಡ ಜಾತ್ರೆ – ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ ಹೊರೆ ಕಾಣಿಕೆ, ಉಗ್ರಾಣ ಮುಹೂರ್ತ

ವಿಟ್ಲ: ಜ.27 ಮತ್ತು 28 ರಂದು ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನದಲ್ಲಿ ನಡೆಯಲಿರುವ ತುಳುನಾಡ ಜಾತ್ರೆ -ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ, ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನದ ಅಂಗವಾಗಿ ಹಸಿರುವಾಣಿ...