Wednesday, January 28, 2026

ಬಂಟ್ವಾಳ: ಕೈತ್ರೋಡಿ ರಸ್ತೆಗೆ ರೂ 30ಲಕ್ಷ ವೆಚ್ಚದ ಕಾಂಕ್ರಿಟೀಕರಣ ಕಾಮಗಾರಿ ಆರಂಭ

ಬಂಟ್ವಾಳ: ಇಲ್ಲಿನ ರಾಯಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು 75 ಲಕ್ಷ ಗಳ  ಹಿಂದೆ ನಿರ್ಮಾಣ ಗೊಂಡ  ರಾಯಿ-ಕೈತ್ರೋಡಿ ಗ್ರಾಮೀಣ ರಸ್ತೆಗೆ ರೂ ೩೦ಲಕ್ಷ ವೆಚ್ಚದಲ್ಲಿ ಕಾಂಕ್ರಿಟೀಕರಣ ಕಾಮಗಾರಿ ಸೋಮವಾರ ಆರಂಭಗೊಂಡಿದೆ. ಈ ಹಿಂದೆ ಸ್ಥಳೀಯ ನಿವಾಸಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ದಿವಂಗತ ಕೆ.ಸಂತೋಷ್ ಕುಮಾರ್ ಭಂಡಾರಿ ಸಹಿತ ಮಾಜಿ ಸಚಿವ ಬಿ.ರಮಾನಾಥ ರೈ, ಸಂಸದ ನಳಿನ್ ಕುಮಾರ್ ಕಟೀಲು ಇವರ ಪ್ರತ್ಯೇಕ ಅನುದಾನದಲ್ಲಿ ಮೂರು ಬಾರಿ ಡಾಂಬರೀಕರಣ ಮತ್ತು ತೇಪೆ ಡಾಂಬರೀಕರಣ ಕಾಮಗಾರಿ ನಡೆದಿದೆ. ಉಳಿದಂತೆ ಭಾರೀ ತಿರುವು ಮತ್ತು ಕಿರಿದಾದ ಈ ರಸ್ತೆಯ ಬಹುತೇಕ ಕಡೆಗಳಲ್ಲಿ ಹೊಂಡಗಳೇ ತುಂಬಿಕೊಂಡು ಜೆಲ್ಲಿ ರಸ್ತೆಯುದ್ದಕ್ಕೂ ಹರಡಿಕೊಂಡಿತ್ತು. ಸುಮಾರು ೨.೫ ಕಿ.ಮೀ. ಉದ್ದದ ಈ ರಸ್ತೆಯನ್ನು ಪಂಜಿಕಲ್ಲು ಗ್ರಾಮ ಸಂಪಕರ್ಿಸುವ ಪುಂಚೋಡಿ ತನಕ ವಿಸ್ತರಿಸಲು ‘ಗ್ರಾಮ ಸಡಕ್’ ಅಥವಾ ‘ನಮ್ಮ ಗ್ರಾಮ ನಮ್ಮ ರಸ್ತೆ’ ಯೋಜನೆಯಡಿ ಕಾಂಕ್ರಿಟೀಕರಣಗೊಳಿಸಬೇಕು ಎಂಬ ಬೇಡಿಕೆ ಕಳೆದ 10 ವರ್ಷಗಳಿಂದಲೂ ಕೇಳಿ ಬರುತ್ತಿದೆ.

ಕಳೆದ ಮೂರು ವರ್ಷಗಳ ಹಿಂದೆಯಷ್ಟೇ ಇದೇ ರಸ್ತೆಯಲ್ಲಿ ಪಾದಯಾತ್ರೆ ನಡೆಸಿದ್ದ ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಮತ್ತು ಬೂಡ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ ಇವರಿಗೆ ಈ ರಸ್ತೆ ದುಸ್ಥಿತಿ ಬಗ್ಗೆ ಸ್ಥಳೀಯ ನಾಗರಿಕರು ಗಮನ ಸೆಳೆದಿದ್ದರು. ಇದೀಗ ಸಂಪರ‍್ಣ ಹದಗೆಟ್ಟ ರಸ್ತೆಗೆ ಶಾಸಕರು ಮಂಜೂರುಗೊಳಿಸಿದ ರೂ ೩೦ಲಕ್ಷ ವೆಚ್ಚದಲ್ಲಿ ರಾಯಿ-ಕೈತ್ರೋಡಿ ತನಕ ಕಾಂಕ್ರಿಟೀಕರಣ ಕಾಮಗಾರಿ ಆರಂಭಗೊಂಡಿರುವುದು ಸ್ಥಳೀಯರ ಸಂತಸಕ್ಕೆ ಕಾರಣವಾಗಿದೆ. ಮುಂದಿನ ದಿನಗಳಲ್ಲಿ ಹೆಚ್ಚುವರಿ ಅನುದಾನ ಒದಗಿಸಿ,ಪಂಜಿಕಲ್ಲು ಗ್ರಾಮ ಸಂಪಕರ್ಿಸುವ ಪುಂಚೋಡಿ ತನಕ ಕಾಂಕ್ರಿಟೀಕರಣ ಕಾಮಗಾರಿ ಮುಂದುವರಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ಪ್ರಸಕ್ತ ರಸ್ತೆ ವಿಸ್ತರಣೆಗೆ ಹೆಚ್ಚಿನ ಆದ್ಯತೆ ನೀಡಿದ್ದು, ಮತ್ತೆ ಮುಂದುವರಿಕಾ ರಸ್ತೆಗೆ ಕಾಂಕ್ರಿಟೀಕರಣಗೊಳಿಸಲು ಶಾಸಕರ ಗಮನ ಸೆಳೆಯುವುದಾಗಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ರಶ್ಮಿತ್ ಶೆಟ್ಟಿ ಕೈತ್ರೋಡಿ ಮತ್ತು ಸದಸ್ಯ ಸಂತೋಷ್ ಕುಮಾರ್ ಬೆಟ್ಟು ಪ್ರತಿಕ್ರಿಯಿಸಿದ್ದಾರೆ.

More from the blog

ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಗ್ರಾ.ಪಂ.ಸದಸ್ಯ ಹಾಶೀರ್ ಪೆರಿಮಾರ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

ಬಂಟ್ವಾಳ: ವಿದ್ಯುತ್ ಸಮಸ್ಯೆಯಿಂದ ಬೇಸೆತ್ತ ಗ್ರಾಮಸ್ಥರ ಸಮಸ್ಯೆಗೆ ಸಕಾಲದಲ್ಲಿ ಸ್ಪಂದಿಸಿದ ಪುದು ಗ್ರಾಮಪಂಚಾಯತ್ ಸದಸ್ಯನಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. ಪುದು ಗ್ರಾಮದ ಪೇರಿಮಾರ್ ವಾರ್ಡಿನ ರಾಷ್ಟ್ರೀಯ ಹೆದ್ದಾರಿ ಬದಿಯಿಂದ ದೇವಸ್ಯ, ಜಲಾಲಿಯ ನಗರ, ಮಾರಿಪಳ್ಳ...

Bantwal : ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ – ಪದಾಧಿಕಾರಿಗಳ ಪದಾಪ್ರಧಾನ, ರಜತ ಸಂಭ್ರಮ ಸಮಾರೋಪ

ಬಂಟ್ವಾಳ :ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ರಿ, ಬಂಟ್ವಾಳ ವಲಯದ ನೂತನ ಪದಾಧಿಕಾರಿಗಳ ಪದಾಪ್ರಧಾನ ಸಮಾರಂಭ ಹಾಗು ರಜತ ಸಂಭ್ರಮದ ಸಮಾರೋಪ ಸಮಾರಂಭ ವು ಬಿಸಿ ರೋಡ್ ನ ಲಯನ್ಸ್ ಸೇವಾ...

B.C. Road : ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ ಬಿಸಿರೋಡಿನ ರಕ್ತೇಶ್ವರಿ...

ಕಟೀಲು 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.28ರ ಸೇವೆಯಾಟಗಳ ವಿವರ : ಆನಂದ ಎಂ. ಶೆಟ್ಟಿ, ಏಳಿಂಜೆ ಅಂಗಡಿಗುತ್ತು,...