Friday, July 11, 2025

ಕಕ್ಯಪದವು ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರ ದೈವಗಳ ಪುನರ್‌ಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ

ಬಂಟ್ವಾಳ : ಸುಮಾರು 3 ಕೋಟಿ ರೂ. ವೆಚ್ಚದಲ್ಲಿ, ತೌಳವ ದ್ರಾವಿಡ ಶೈಲಿಯಲ್ಲಿ, ಸಂಪೂರ್ಣ ಶಿಲಾಮಯವಾಗಿ ಪುನರ್ನಿರ್ಮಾಣಗೊಂಡಿರುವ ಬಂಟ್ವಾಳ ತಾಲೂಕಿನ ಉಳಿ ಗ್ರಾಮದ ಕಕ್ಯಪದವು ಶ್ರೀ ಕಡಂಬಿಲ್ತಾಯಿ, ಕೊಡಮಣಿತ್ತಾಯಿ, ಬ್ರಹ್ಮ ಬದರ್ಕಳ ಗರಡಿ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವದ ಮೂರನೇ ದಿವಾದ ರವಿವಾರ ದೈವಗಳ ಪುನರ್ ಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮಗಳು ಜರಗಿತು.
ಬ್ರಹ್ಮಶ್ರೀ ನಡ್ವಂತಾಡಿ ಬಾಲಕೃಷ್ಣ ಪಾಂಗಣ್ಣಾಯ ಮತ್ತು ಕಕ್ಯ ಶ್ರೀನಿವಾಸ ಅರ್ಮುಡ್ತಾಯರ ಮಾರ್ಗದರ್ಶನದಲ್ಲಿ, ಕ್ಷೇತ್ರದ ಆಸ್ರಣ್ಣ ರಾಜೇಂದ್ರ ಅರ್ಮುಡ್ತಾಯ, ಪೆಜಕಕ್ಲ ಗಂಗಾದರ ಕಕೃಣ್ಣಾಯ ಅವರ ಮುಂದಾಳತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು. ಬೆಳಗ್ಗೆ ಬ್ರಹ್ಮಕಲಶ ಆರಾಧನೆ, ಪ್ರಧಾನ ಹೋಮಗಳು ನಡೆಯಿತು. ಬಳಿಕ ಕರ್ಕಾಟಕ ಲಗ್ನ ಸುಮೂಹೂರ್ತದಲ್ಲಿ ಶಿಖರ ಪ್ರತಿಷ್ಠೆ, ಶ್ರೀ ಕಡಂಬಿಲ್ತಾಯಿ, ಕೊಡಮಣಿತ್ತಾಯಿ, ಬ್ರಹ್ಮ ಬದರ್ಕಳ, ದೈವೊಂಕುಳು, ಮಾಯಂದಾಲ್ ದೈವಗಳ ಪ್ರತಿಷ್ಠೆ, ಧ್ವಜಸ್ತಂಭ ಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ, ಪರ್ವಗಳು, ಮಹಾಪೂಜೆ, ಧ್ವಜಾರೋಹಣ, ಪಲ್ಲಪೂಜೆ, ಕೋಟಿ-ಚೆನ್ನಯ್ಯರ ದರ್ಶನ ಮೊದಲಾದ ವೈದಿಕ, ಧಾರ್ಮಿಕ ವಿಧಿ ವಿಧಾನಗಳು ನಡೆದವು. ಸಂಜೆ ಕಕ್ಯಗುತ್ತು ಬೋಂಟ್ರರ ಮನೆಯಿಂದ ದೈವೋಂಕುಳು ಭಂಡಾರ ಬಂದು ರಾತ್ರಿ ನೇಮೋತ್ಸವ, ಸಂಕ್ರಾತಿ ಸೇವೆಗಳು ನಡೆಯಿತು.

   
ರಾತ್ರಿ ಧಾರ್ಮಿಕ ಸಭೆ ನಡೆಯಿತು. ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ಮಧ್ಯಾಹ್ನ ಜಿಲ್ಲೆಯ ಖ್ಯಾತ ಕಲಾವಿದರಿಂದ ಯಕಷಗಾನ ತಾಳಮದ್ದಲೆ, ರಾತ್ರಿ ರಾಷ್ಟ್ರ ಪ್ರಶಸಸ್ತಿ ವಿಜೇತೆ ಜ್ಞಾನ ಐತಾಳ್ ಮತ್ತು ಬಳಗದವರಿಂದ ಹೆಜ್ಜೆನಾದ ನೃತ್ಯ ಸಂಗೀತ ವೈಭವ ಕಾರ್ಯಕ್ರಮ ನಡೆಯಿತು.
ಮಾಜಿ ಸಚಿವ, ಬ್ರಹ್ಮ ಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಬಿ.ರಮಾನಾಥ ರೈ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಅಧ್ಯಕ್ಷ ಸೇಸಪ್ಪ ಕೋಟ್ಯಾನ್, ಮೋಕ್ತೇಸರ ಕುಟುಂಬಸ್ಥರಾದ ರಾಜವೀರ್ ಜೈನ್, ಸಂಚಾಲಕರಾದ ಚಿತ್ತರಂಜನ್ ಕಂಕನಾಡಿ, ರೋಹಿನಾಥ ಪಾದೆ, ಕಾರ್ಯಾಧ್ಯಕ್ಷ ಬಿ. ಪದ್ಮಶೇಖರ ಜೈನ್, ಶ್ರೀ ಕ್ಷೇತ್ರ ಪಡ್ಯಾರಬೆಟ್ಟುವಿನ ಅನುವಂಶಿಕ ಆಡಳಿತ ಮೋಕ್ತೇಸರ ಜೀವಂದರ್ ಕುಮಾರ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೆ. ಮಾಯಿಲಪ್ಪ ಸಾಲ್ಯಾನ್, ವಾಸ್ತು ಶಿಲ್ಪಿ ಪ್ರಮಲ್ ಕುಮಾರ್,ಪುನರ್ ನಿರ್ಮಾಣ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಎ. ಚೆನ್ನಪ್ಪ ಸಾಲ್ಯಾನ್ ಆಜೋಡಿ, ಉತ್ಸವ ಸಮಿತಿ ಅಧ್ಯಕ್ಷ ವಿಶ್ವನಾಥ ಸಾಲ್ಯಾನ್ ಬಿತ್ತ ಮತ್ತಿತರ ಸಮಿತಿಗಳ ಪದಾಧಿಕಾರಿಗಳು, ಸದಸ್ಯರು ಭಾಗವಹಿಸಿದ್ದರು. ಮಧ್ಯಾಹ್ನ, ರಾತ್ರಿ ಮಹಾ ಅನ್ನ ಸಂತರ್ಪಣೆ ನಡೆಯಿತು. ಸಾವಿರಾರು ಭಕ್ತಾಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಸುಂದರ, ವಿಶಿಷ್ಠ ಗರಡಿಯನ್ನು ವೀಕ್ಷಿಸಿ ಕಣ್ತುಂಬಿಕೊಂಡರು.

ಇಂದಿನ ಕಾರ್ಯಕ್ರಮ:
ಮೇ 20ರಂದು ಸಂಜೆ ಗಂಟೆ 6 ರಿಂದ ಶ್ರೀ ಕಡಂಬಿಲ್ತಾಯ ಮತ್ತು ಕೊಡಮಣಿತ್ತಾಯಿ ದೈವಗಳ ನೇಮೋತ್ಸವ ನಡೆಯಲಿದೆ. ಸಂಜೆ 7ಕ್ಕೆ ಧಾರ್ಮಿಕ ಸಭೆ ನಡೆಯಲಿದ್ದು ಶ್ರೀ ಕ್ಷೇತ್ರ ಬಲ್ಯೊಟ್ಟುವಿನ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಅವರು ಆಶೀರ್ವಚನ ನೀಡಲಿರುವರು, ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಬಿ. ರಮಾನಾಥ ರೈ ಅಧ್ಯಕ್ಷತೆ ವಹಿಸುವರು, ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಮಾಜಿ ಶಾಸಕ ಕೆ. ವಸಂತ ಬಂಗೇರ, ಉದ್ಯಮಿ ಜಗದೀಪ್ ಸುವರ್ಣ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ, ಬಾರ್‍ದಡ್ಡು ಕುಟುಂಬಸ್ಥರಾದ ರಾಜವೀರ ಜೈನ್, ಜಿ. ಪಂ. ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಉದ್ಯಮಿ ರಘು ಸೋiಯಾಜಿ ಮೊದಲಾದವರು ಭಾಗವಹಿಸಲಿದ್ದಾರೆ. ರಾತ್ರಿ ಬಲೇ ತೆಲಿಪಾಲೆ ಖ್ಯಾತಿಯ ತಂಡದವರಿಂದ ತೆಲಿಕೆದ ಗೊಂಚಿಲ್, ತೆಲಿಕೆದ ಬರ್ಸ, ಕುಸಲ್ದ ಕುರ್ಲರಿ ಕಾರ್ಯಕ್ರಮ ನಡೆಯಲಿದೆ.

More from the blog

ಕುಂಜರ್ಕಳದ ತಡೆಗೋಡೆ, ಬಸ್ಸು ತಂಗುದಾಣ, ಹೈಮಾಸ್ಟ್ ದೀಪ ಉದ್ಘಾಟಿಸಿದ ಯು.ಟಿ.ಖಾದರ್..

ಬಂಟ್ವಾಳ: ಶಾಸಕರ ಅನುದಾನದಿಂದ ನಿರ್ಮಾಣಗೊಂಡ ಪುದು ಗ್ರಾಮದ ಕುಂಜರ್ಕಳದ ತಡೆಗೋಡೆ, ೧೦ನೇ ಮೈಲುಕಲ್ಲು ಬಳಿ ಬಸ್ಸು ತಂಗುದಾಣ ಹಾಗೂ ತ್ವಾಹಾ ಜುಮಾ ಮಸೀದಿ ಬಳಿ ಅನುಷ್ಠಾನಗೊಂಡ ಹೈಮಾಸ್ಟ್ ದೀಪವನ್ನು ಸ್ಪೀಕರ್ ಯು.ಟಿ.ಖಾದರ್ ಅವರು...

ಗುರು ಪೂರ್ಣಿಮೆಯ ಪ್ರಯುಕ್ತ ನಿವೃತ ಶಿಕ್ಷಕಿ ಲಕ್ಷ್ಮೀ ಅವರಿಗೆ ಗೌರವರ್ಪಣೆ 

ಬಂಟ್ವಾಳ : ಗುರು ಪೂರ್ಣಿಮೆಯ ಪ್ರಯುಕ್ತ ಸಜೀಪ ಮುನ್ನೂರು ಬಿಜೆಪಿ ಗ್ರಾಮ ಸಮಿತಿಯ 4ನೇ ವಾರ್ಡಿನ ಬೊಕ್ಕಸ ನಿವಾಸಿಯಾದ ನಿವೃತ ಶಿಕ್ಷಕಿಯಾದ ಮಾತೃ ವಾತ್ಸಲ್ಯದ ಲಕ್ಷ್ಮೀ ಟೀಚರ್ ಇವರಿಗೆ ಬಿಜೆಪಿ ಮುಖಂಡರು ಮಾಜಿ...

ಕೆಂಪುಕಲ್ಲು, ಮರಳು ಸಮಸ್ಯೆ : ಜು.14ಕ್ಕೆ ಬಂಟ್ವಾಳ ತಾಲೂಕು ಕೇಂದ್ರದಲ್ಲಿ ಪ್ರತಿಭಟನೆ..

ಬಂಟ್ವಾಳ :ಕಾಂಗ್ರೆಸ್ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರದ ದುರಡಳಿತ ನೀತಿಯಿಂದಾಗಿ ದಕ್ಷಿಣ ಕನ್ನಡ ಜೆಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಕ್ರತಕ ಅಭಾವ ಸ್ರಷ್ಟಿಸಿರುವುದರಿಂದ ತೀವ್ರ ಸಮಸ್ಯೆಯಿಂದ ಬಡವರು ನಿರ್ಮಿಸುತ್ತಿರುವ ಸಾವಿರಾರು ಮನೆಗಳು...

ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆ : ನೂತನ ಕಟ್ಟಡಕ್ಕೆ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ಶಾಸಕ ರಾಜೇಶ್ ನಾಯ್ಕ್ ನಿರ್ದೇಶನ..

ಬಂಟ್ವಾಳ: ದ.ಕ.ಜಿಲ್ಲೆಗೆ ಮಂಜೂರಾಗಿರುವ ಏಕೈಕ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ನೂತನ ಸುಸಜ್ಜಿತ ‌ಕಟ್ಟಡ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು,ವಿದ್ಯಾರ್ಥಿಗಳ ಅನುಕೂಲತೆಯ ದೃಷ್ಟಿಯಿಂದ ಶೀಘ್ರ ಹೊಸ ಕಟ್ಟಡಕ್ಕೆ ಸ್ಥಳಾಂತರಿಸುವಂತೆ ಬಂಟ್ವಾಳ...