ಬಂಟ್ವಾಳ: ಸುಮಾರು 3 ಕೋಟಿ ರೂ. ವೆಚ್ಚದಲ್ಲಿ ತೌಳವ ದ್ರಾವಿಡ ಶೈಲಿಯಲ್ಲಿ, ಸಂಪೂರ್ಣ ಶಿಲಾಮಯವಾಗಿ ಪುನರ್ನಿರ್ಮಾಣಗೊಂಡ ಬಂಟ್ವಾಳ ತಾಲೂಕಿನ ಉಳಿ ಗ್ರಾಮದ ಕಕ್ಯಪದವು ಶ್ರೀ ಕಡಂಬಿಲ್ತಾಯಿ, ಕೊಡಮಣಿತ್ತಾಯಿ, ಬ್ರಹ್ಮ ಬದರ್ಕಳ ಗರಡಿ ಕ್ಷೇತ್ರದಲ್ಲಿ ಜು.13 ರಂದು ದೃಢ ಕಲಶ ಮತ್ತು ಅಭಿನಂದನಾ ಕಾರ್ಯಕ್ರಮ ಜರಗಲಿದೆ.

ದೃಢ ಕಲಶ ಪ್ರಯುಕ್ತ ನವಕ ಕಲಶ ಪ್ರಧಾನ ಹೋಮ, ಕಲಶಾಭಿಷೇಕ, ಪರ್ವಗಳು ನಡೆಯಲಿದೆ ಎಂದು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೆ. ಮಾಯಿಲಪ್ಪ ಸಾಲ್ಯಾನ್ ತಿಳಿಸಿದ್ದಾರೆ. ಕಳೆದ ಮೇ ತಿಂಗಳಿನಲ್ಲಿ ಗರಡಿಯಲ್ಲಿ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವಾದಿ ಕಾರ್ಯಕ್ರಮಗಳು ನಡೆದಿತ್ತು.