ಬಂಟ್ವಾಳ: ಕಕ್ಯಪದವು ಶ್ರೀ ಕಡಂಬಿಲ್ತಾಯಿ ಕೊಡಮಣಿತ್ತಾಯಿ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ ಇದೇ ಮೇ.17ರಿಂದ 22ರ ತನಕ ಮಹೋತ್ಸವ ಜರಗಲಿದ್ದು ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಇಂದು ಬಿಡುಗಡೆಗೊಂಡಿದೆ.


ಇನ್ನು ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೋಲಿಸಿದ್ದು ಈ ಸಂಧರ್ಭದಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ಭಾಗಿಯಾಗಿದ್ದು ಆಮಂತ್ರಣ ಪತ್ರ ಬಿಡುಗಡೆ ಸಂಧರ್ಭದಲ್ಲಿ ಉಪಸ್ಥಿತರಿದ್ದು ಜೊತೆಗೆ ಆಮಂತ್ರಣ ಪತ್ರವನ್ನು ಸ್ವೀಕರಿಸಿದ್ದಾರೆ.