Wednesday, July 9, 2025

ಕಕ್ಯಪದವು ಗರಡಿ ಬ್ರಹ್ಮ ಕಲಶ: ಡಾ. ಹೆಗ್ಗಡೆ ಅವರಿಗೆ ಆಹ್ವಾನ

ಬಂಟ್ವಾಳ: ಇತಿಹಾಸ ಪ್ರಸಿದ್ಧ ಕಾರಣಿಕ ಕ್ಷೇತ್ರವಾದ ಬಂಟ್ವಾಳ ತಾಲೂಕಿನ ಉಳಿ ಗ್ರಾಮದ ಕಕ್ಯಪದವು ಶ್ರೀ ಕಡಂಬಿಲ್ತಾಯಿ, ಶ್ರೀ ಕೊಡಮಣಿತ್ತಾಯಿ ಬ್ರಹ್ಮಬದರ್ಕಳ ಗರಡಿ ಕ್ಷೇತ್ರ ಸುಮಾರು ೩ ಕೋ.ರೂ. ವೆಚ್ಚದಲ್ಲಿ ಸಂಪೂರ್ಣ ಶಿಲಾಮಯವಾಗಿ ಪುನರ್ನಿರ್ಮಾಣಗೊಳ್ಳುತ್ತಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಬ್ರಹ್ಮಕಲಶೋತ್ಸವಕ್ಕೆ ಆಹ್ವಾನಿಸಲು ಸಮಿತಿ ಪದಾಧಿಕಾರಿಗಳು ಎ.23ರಂದು ಧರ್ಮಸ್ಥಳಕ್ಕೆ ಭೇಟಿ ನೀಡಿದರು.


ಗರಡಿ ಪುನರ್ನಿರ್ಮಾಣ ಸಮಿತಿ ಗೌರವಾಧ್ಯಕ್ಷ, ಮಾಜಿ ಸಚಿವ ಬಿ.ರಮಾನಾಥ ರೈ ಅವರ ನೇತೃತ್ವದ ಸಮಿತಿ ಡಾ. ಡಿ. ವೀರೇಂದ್ರ ಹೆಗಡೆ ಮತ್ತು ಡಿ. ಹರ್ಷೇಂದ್ರ ಕುಮಾರ್ ಅವರನ್ನು ಭೇಟಿಯಾಗಿ ವಿಜ್ಞಾಪನಾ ಪತ್ರ ನೀಡಿ ಮೇ 19ರಂದು ನಡೆಯಲಿರುವ ಬ್ರಹ್ಮ ಕಲಶೋತ್ಸವಕ್ಕೆ ಆಮಂತ್ರಿಸಿದರು.
ಪುನರ್ನಿರ್ಮಾಣ ಸಮಿತಿ ಅಧ್ಯಕ್ಷ ಬಿ. ಪದ್ಮಶೇಖರ ಜೈನ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೆ.ಮಾಯಿಲಪ್ಪ ಸಾಲ್ಯಾನ್, ಉತ್ಸವ ಸಮಿತಿ ಅಧ್ಯಕ್ಷ ವಿಶ್ವನಾಥ ಸಾಲ್ಯಾನ್‌ಬಿತ್ತ, ಪದಾಧಿಕಾರಿಗಳಾದ ಡಾ. ದಿನೇಶ್ ಬಂಗೇರ, ಪರಮೇಶ್ವರ ನಾಯ್ಕ, ಡೀಕಯ್ಯ ಕುಲಾಲ್, ರಾಜೀವ ಕೆ., ಗಣೇಶ ಕೋಂಗುಜೆ, ತಿಲಕ್ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.ಬಳಿಕ ಸಮಿತಿ ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಮೋಹನ ಆಳ್ವ ಅವರಿಗೂ ವಿಜ್ಞಾಪನಾ ಪತ್ರ ನೀಡಿ ಬ್ರಹ್ಮ ಕಲಶೋತ್ಸವಕ್ಕೆ ಆಮಂತ್ರಿಸಿದರು.

More from the blog

ಭಾರೀ ಮಳೆ ಮುನ್ಸೂಚನೆ : ಒಂದು ವಾರ ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್..

ಮಂಗಳೂರು : ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 14ರವರೆಗೆ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು,...

ಕುಡ್ತಮುಗೇರು: ಬಸ್ಸಿನಿಂದ ರಸ್ತೆಗೆ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು 

ವಿಟ್ಲ: ಖಾಸಗಿ ಬಸ್ಸಿನಿಂದ ಬಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂಧಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕುಡ್ತಮುಗೇರು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಕೊಡಂಗೆ ನಿವಾಸಿ ಚಿದಾನಂದ ರೈ (43 ವ.) ಮೃತಪಟ್ಟವರು. ಜು.7ರಂದು ಬೆಳಗ್ಗೆ...

ನಾಯಕತ್ವ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ, ತಾಳ್ಮೆ ರೂಡಿಸಿಕೊಂಡಾಗ ಯಶಸ್ಸು ಸಾಧ್ಯ : ರೋ. ರಾಘವೇಂದ್ರ ಭಟ್

ಬಂಟ್ವಾಳ : ನಾಯಕತ್ವದ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ ಮತ್ತು ತಾಳ್ಮೆ ರೂಡಿಸಿಕೊಳ್ಳಬೇಕು ಈ ನಿಟ್ಟಿನಲ್ಲಿ ಅವಕಾಶ ಗಳನ್ನು ಹುಡುಕಿಕೊಂಡು, ದೇಶದ ಇತಿಹಾಸದಲ್ಲಿ ಕಾಣುವ ವಿವಿಧ ಕ್ಷೆತ್ರದಲ್ಲಿ ಗಣನೀಯ ಸೇವೆ ಗೈದರವರ ಆದರ್ಶ ಗಳನ್ನು...

ಜು.10ರಂದು ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ ಆಯೋಜನೆ

ಬಿ.ಸಿ. ರೋಡ್ : ಸಮಸ್ತ ಜಗತ್ತು ಯುದ್ಧದತ್ತ ಸಾಗುತ್ತಿದೆ. ಭಾರತದಲ್ಲಿಯೂ ಜಿಹಾದಿ ಭಯೋತ್ಪಾದಕರು ಹಿಂದೂಗಳನ್ನು ಹತ್ಯೆ ಮಾಡಿ, ಭಾರತವನ್ನು ಯುದ್ಧಕ್ಕೆ ಪ್ರೇರೇಪಿಸುತ್ತಿದ್ದಾರೆ. ಶ್ರೀರಾಮ, ಶ್ರೀಕೃಷ್ಣನಂತಹ ಅವತಾರಗಳಿಂದ ಹಿಡಿದು ಛತ್ರಪತಿ ಶಿವಾಜಿ ಮಹಾರಾಜ, ಮಹಾರಾಣಾ...