Wednesday, July 9, 2025

ಕಲ್ಲಡ್ಕ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘ ಮತ್ತು ವಿವಿಧ ಸಂಘಗಳ ಉದ್ಘಾಟನೆ

ಕಲ್ಲಡ್ಕ: ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣಗಳನ್ನು ರೂಪಿಸಲು ಹಾಗೂ ಮತದಾನದ ಕುರಿತು ಜಾಗೃತಿಯನ್ನು ಮೂಡಿಸಲು ವಿದ್ಯಾಸಂಸ್ಥೆಯಲ್ಲಿ ನಡೆಯುವ ಚುನಾವಣಾ ಪ್ರಕ್ರಿಯೆಯು ಸಹಕಾರಿಯಾಗಿದೆ ಎಂದು ವಿದ್ಯಾಭಾರತಿಯ ಪ್ರಾಂತ ಸಾರೀರಿಕ ಪ್ರಮುಖ್ ಹಾಗೂ ಬಾಳ್ತಿಲ ಗ್ರಾಮ ಪಂಚಾಯತ್‌ನ ಸದಸ್ಯರಾದ ಆನಂದ ಶೆಟ್ಟಿ ಹೇಳಿದರು.


ಅವರು ಕಲ್ಲಡ್ಕ ಶ್ರಿರಾಮ ಪದವಿ ಪೂರ್ವ ಕಾಲೇಜಿನ 2019-20ನೇ ಸಾಲಿನ ವಿದ್ಯಾರ್ಥಿ ಸಂಘ ಮತ್ತು ವಿವಿಧ ಸಂಘಗಳನ್ನು ಉದ್ಘಾಟಿಸಿ ಮಾತನಾಡಿದರು. ಈ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕರಾದ ವಸಂತ ಮಾಧವ ಅವರು ವಿದ್ಯಾರ್ಥಿಗಳಿಗೆ ಕರ್ತವ್ಯವೂ ಒಂದು ಹಕ್ಕು ಎಂದು ತಿಳಿಸಿದರು.
ವೇದಿಕೆಯಲ್ಲಿ ಕಾಲೇಜಿನ ಪ್ರಾಚಾರ್ಯರಾದ ವಸಂತ ಬಲ್ಲಾಳ್ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕರಾದ ಕರುಣಾಕರ್ ಉಪಸ್ಥಿತರಿದ್ದರು. ಉಪನ್ಯಾಸಕಿಯರಾದ ಜಯಲಕ್ಷ್ಮೀ ಕೆ ಸ್ವಾಗತಿಸಿ, ವಸುಂಧರಾಲಕ್ಷ್ಮೀ.ಬಿ ವಂದಿಸಿದರು.  ಚೈತನ್ಯಾ ಕಾರ್‍ಯಕ್ರಮವನ್ನು ನಿರೂಪಿಸಿದರು.

More from the blog

ಭಾರೀ ಮಳೆ ಮುನ್ಸೂಚನೆ : ಒಂದು ವಾರ ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್..

ಮಂಗಳೂರು : ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 14ರವರೆಗೆ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು,...

ಕುಡ್ತಮುಗೇರು: ಬಸ್ಸಿನಿಂದ ರಸ್ತೆಗೆ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು 

ವಿಟ್ಲ: ಖಾಸಗಿ ಬಸ್ಸಿನಿಂದ ಬಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂಧಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕುಡ್ತಮುಗೇರು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಕೊಡಂಗೆ ನಿವಾಸಿ ಚಿದಾನಂದ ರೈ (43 ವ.) ಮೃತಪಟ್ಟವರು. ಜು.7ರಂದು ಬೆಳಗ್ಗೆ...

ನಾಯಕತ್ವ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ, ತಾಳ್ಮೆ ರೂಡಿಸಿಕೊಂಡಾಗ ಯಶಸ್ಸು ಸಾಧ್ಯ : ರೋ. ರಾಘವೇಂದ್ರ ಭಟ್

ಬಂಟ್ವಾಳ : ನಾಯಕತ್ವದ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ ಮತ್ತು ತಾಳ್ಮೆ ರೂಡಿಸಿಕೊಳ್ಳಬೇಕು ಈ ನಿಟ್ಟಿನಲ್ಲಿ ಅವಕಾಶ ಗಳನ್ನು ಹುಡುಕಿಕೊಂಡು, ದೇಶದ ಇತಿಹಾಸದಲ್ಲಿ ಕಾಣುವ ವಿವಿಧ ಕ್ಷೆತ್ರದಲ್ಲಿ ಗಣನೀಯ ಸೇವೆ ಗೈದರವರ ಆದರ್ಶ ಗಳನ್ನು...

ಜು.10ರಂದು ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ ಆಯೋಜನೆ

ಬಿ.ಸಿ. ರೋಡ್ : ಸಮಸ್ತ ಜಗತ್ತು ಯುದ್ಧದತ್ತ ಸಾಗುತ್ತಿದೆ. ಭಾರತದಲ್ಲಿಯೂ ಜಿಹಾದಿ ಭಯೋತ್ಪಾದಕರು ಹಿಂದೂಗಳನ್ನು ಹತ್ಯೆ ಮಾಡಿ, ಭಾರತವನ್ನು ಯುದ್ಧಕ್ಕೆ ಪ್ರೇರೇಪಿಸುತ್ತಿದ್ದಾರೆ. ಶ್ರೀರಾಮ, ಶ್ರೀಕೃಷ್ಣನಂತಹ ಅವತಾರಗಳಿಂದ ಹಿಡಿದು ಛತ್ರಪತಿ ಶಿವಾಜಿ ಮಹಾರಾಜ, ಮಹಾರಾಣಾ...