Monday, January 26, 2026

ಸಂಗಬೆಟ್ಟು: ಮನೆಯ ಬೀಗ ಮುರಿದು ಲಕ್ಷಾಂತರ ರೂ. ನಗನಗದು ಕಳವು

ಬಂಟ್ವಾಳ : ಮನೆಯಲ್ಲಿ ಯಾರೂ ಇಲ್ಲದ ವೇಳೆ ಮುಂಬಾಗಿಲ ಬೀಗ ಮುರಿದು ಒಳನುಗ್ಗಿದ್ದ ಕಳ್ಳರು ನಗದು, ಚಿನ್ನಾಭರಣ ಸೇರಿ ಸುಮಾರು 4.65 ಲಕ್ಷ ರೂ.ಮೌಲ್ಯದ ವಸ್ತುಗಳನ್ನು ಕಳವು ಮಾಡಿದ ಘಟನೆ ಸಂಗಬೆಟ್ಟು ಗ್ರಾಮದ ಕೆರೆಬಳಿಯಲ್ಲಿ ಬುಧವಾರ ಬೆಳಕಿಗೆ ಬಂದಿದೆ.


ಸಂಗಬೆಟ್ಟು ಕೆರೆಬಳಿ ನಿವಾಸಿ ನಝೀರ್ ಅಹ್ಮದ್ ಅವರ ಮನೆಗೆ ಕಳ್ಳರು ನುಗ್ಗಿದ್ದು, ಕಪಾಟಿನಲ್ಲಿದ್ದ 12.50 ಪವನ್ ಚಿನ್ನ, 2 ಲಕ್ಷ ರೂ.ನಗದು ಹಾಗೂ 15 ಸಾವಿರ ರೂ.ಮೌಲ್ಯದ ವಾಚ್ ಸೇರಿದಂತೆ ಒಟ್ಟು 4.65 ಲಕ್ಷ ರೂ.ಗಳ ವಸ್ತುಗಳನ್ನು ಕಳವು ಮಾಡಿದ್ದಾರೆ. ನಝೀರ್ ಅವರು ಕಳಸದಲ್ಲಿ ಅಂಗಡಿ ಹೊಂದಿದ್ದು, ಅಲ್ಲಿನ ಜಾತ್ರೆಯ ಹಿನ್ನೆಲೆಯಲ್ಲಿ ಅವರ ಮನೆಯವರು ಜ. 14 ರಂದು ಸಂಜೆ ಮನೆಗೆ ಬೀಗ ಹಾಕಿ ಜಾತ್ರೆಗೆ ತೆರಳಿದ್ದರು.
ಆದರೆ ಬುಧವಾರ ಬೆಳಗ್ಗೆ ಅವರ ತಮ್ಮ ಬಶೀರ್ ಕರೆ ಮಾಡಿ ಕಳವಿನ ವಿಚಾರ ತಿಳಿಸಿದ್ದು, ತಕ್ಷಣ ಹೊರಟು ಬಂದಿದ್ದಾರೆ. ಬಂಟ್ವಾಳ ಪೊಲೀಸ್ ವೃತ್ತ ನಿರೀಕ್ಷ ಟಿ.ಡಿ.ನಾಗರಾಜ್, ಗ್ರಾಮಾಂತರ ಠಾಣಾ ಸಬ್‌ಇನ್ಸ್ಪೆಕ್ಟರ್ ಪ್ರಸನ್ನ ಎಂ.ಎಸ್, ಎಎಸ್‌ಐ ಕಲೈಮಾರ್, ಹೆಡ್‌ಕಾನ್ಸ್ಟೇಬಲ್ ಸುರೇಶ್, ಸಿಬಂದಿ ಆದರ್ಶ್, ನಾಗನಾಥ್ ಹಾಗೂ ಮನೋಜ್ ಅವರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ಕಳ್ಳರಿಗಾಗಿ ತನಿಖೆ ನಡೆಸುತ್ತಿದ್ದಾರೆ.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...