Sunday, January 25, 2026

ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು

ಬಂಟ್ವಾಳ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯೊಳಗೆ ನುಗ್ಗಿ ನಗನಗದು ಕಳವು ಮಾಡಿದ ಘಟನೆ ಮಾಣಿ ಸಮೀಪದ ಗಡಿಯಾರ ಎಂಬಲ್ಲಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 75 ರ ಗಡಿಯಾರ ಸಮೀಪದ ಜೋಗಿಬೆಟ್ಟು ಎಂಬಲ್ಲಿ ಮಹಮ್ಮದ್ ರಫೀಕ್ ಎಂಬವರ ಮನೆಗೆ ನುಗ್ಗಿ ಕಳ್ಳತನ ನಡೆದಿದೆ.
ಹಂಝ ಎಂಬವರ ಬಾಡಿಗೆ ಮನೆಯಲ್ಲಿ ರುವ ಮಹಮ್ಮದ್ ರಫೀಕ್ ಅವರ ಮನೆಯಿಂದ ನಗ ನಗದು ಕಳವು ಮಾಡಲಾಗಿದೆ.

ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಮನೆಯ ಹಂಚು ತೆಗೆದು ಮನೆಯೊಳಗೇ ನುಗ್ಗಿ ಗೊಡ್ರೇಜಿನಲ್ಲಿದ್ದ 35 ಪವನ್ ಚಿನ್ನ
1ಲಕ್ಷ ನಗದು ಕಳವು ಮಾಡಲಾಗಿದೆ.
ರಫೀಕ್ ಅವರು ಉಪ್ಪಿನಂಗಡಿಯ ಶಾಂತಿನಗರ ಎಂಬಲ್ಲಿ ರುವ ಸಂಬಂಧಿಕರ ಮನೆಗೆ ತೆರಳಿದ ವೇಳೆಯಲ್ಲಿ ಈ ಘಟನೆ ನಡೆದಿದೆ.

ರಾತ್ರಿ 9 ವರೆಗೆ ಮನೆಯಲ್ಲಿದ್ದರು ಬಳಿಕ ಅವರು ಸಂಬಂಧಿಕರ ಮನೆಗೆ ತೆರಳಿದ್ದರು, ಇಂದು ಬೆಳಿಗ್ಗೆ ವಾಪಾಸು ಮನೆಯ ಬರುವ ವೇಳೆ ಈ ಘಟನೆ ಬೆಳಕಿಗೆ ಬಂದಿದೆ.
ವಿಟ್ಲ ಠಾಣಾ ಎಸ್. ಐ.ಯಲ್ಲಪ್ಪ ಹಾಗೂ ಸಿಬ್ಬಂದಿ ಗಳು ಸ್ಥಳಕ್ಕೆ ಬೇಟಿ ನೀಡಿದ್ದಾರೆ. ಸ್ಥಳಕ್ಕೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಅಗಮಿಸಿದ್ದಾರೆ.

More from the blog

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...

ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ – ಅಶೋಕ ಕುಮಾರ್ ರಾಜ್ಯ ಮಟ್ಟಕ್ಕೆ ಆಯ್ಕೆ..

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಆಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ಸರಕಾರಿ ನೌಕರ ಸಂಘ, ದಕ್ಷಿಣ...