ಬಂಟ್ವಾಳ: ಶ್ರೀ ಕ್ಷೇತ್ರ ಧ. ಗ್ರಾ. ಯೋಜನೆಯ ಮಾರ್ಗದರ್ಶನದಲ್ಲಿ ಮತ್ತು ಶ್ರೀ ಧರ್ಮಸ್ಥಳ ಮೆಡಿಕಲ್ ಟ್ರಸ್ಟ್ ಇದರ ಸಹಯೋಗದಲ್ಲಿ ಶ್ರೀ ಕ್ಷೇ.ಧ.ಗ್ರಾ.ಯೋಜನೆ ಸಿದ್ಧಕಟ್ಟೆ ವಲಯ ಮತ್ತು ಸ್ಥಳೀಯ ಸಂಘ ಸಂಸ್ಥೆಗಳ ಸಹಕಾರದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸಂಚಾರಿ ಆಸ್ಪತ್ರೆಯ ಉಚಿತ ಚಿಕಿತ್ಸಾ ಶಿಬಿರಕ್ಕೆ ಸಿದ್ದಕಟ್ಟೆ ಸಮೀಪದ ಕಲ್ಕುರಿಪದವುನಲ್ಲಿ ಮಾ.9ರಂದು ಚಾಲನೆ ನೀಡಲಾಯಿತು.
ತಾಲೂಕು ಪಂಚಾಯತ್ ಸದಸ್ಯ ಪ್ರಭಾಕರ ಪ್ರಭು ಅವರು ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಽಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರ ದೂರದರ್ಶಿತ್ವದಿಂದ ನಡೆಸುತ್ತಿರುವ ಸಂಚಾರಿ ಆಸ್ಪತ್ರೆಯಿಂದ ಗ್ರಾಮೀಣ ಪ್ರದೇಶದ ಜನತೆಯ ಆರೋಗ್ಯ ಕಾಳಜಿಗೆ ಸಹಕಾರಿಯಾಗಿದ್ದು, ವರದಾನವಾಗಿದೆ ಎಂದು ಹೇಳಿದರು.
ಸಂಚಾರಿ ಆಸ್ಪತ್ರೆಯ ವೈದ್ಯಾಽಕಾರಿ ಡಾ. ನಾರಾಯಣ್ ಪ್ರಭು ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಬದಲಾಗುತ್ತಿರುವ ಜೀವನ ಕ್ರಮದಲ್ಲಿ ರೋಗಕ್ಕೆ ಚಿಕಿತ್ಸೆ ಪಡೆಯುವ ಬದಲು ರೋಗ ಬಾರದಂತೆ ಎಚ್ಚರವಹಿಸುವುದು ಹೆಚ್ಚು ಪರಿಣಾಮಕಾರಿ ಎಂದು ಹೇಳಿದರು. ಸಂಚಾರಿ ಆಸ್ಪತ್ರೆಯಲ್ಲಿ ದೊರಕುವ ಚಿಕಿತ್ಸಾ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು. ಸಿದ್ಧಕಟ್ಟೆ ಮೇಲ್ವಿಚಾರಕಿ ಹರಿಣಾಕ್ಷಿ ರೈ ಅವರು ಶಿಬಿರದ ವಿವರ ನೀಡಿದರು.
ಗ್ರಾಮಾಭಿವೃದ್ಧಿ ಯೋಜನೆಯ ಸಕಲೇಶಪುರ ಜ್ಞಾನವಿಕಾಸ ಸಮನ್ವಯಾಽಕಾರಿ ಮಲ್ಲಿಕಾ, ಕೇಶವ, ಕುಕ್ಕಿಪಾಡಿ ಗ್ರಾ.ಪಂ ಅಧ್ಯಕ್ಷ ದಿನೇಶ್ ಸುಂದರ್ ಶಾಂತಿ, ಸಂಗಬೆಟ್ಟು ಅಧ್ಯಕ್ಷೆ ಗುಲಾಬಿ, ಪಂಚಾಯತ್ ಸದಸ್ಯ ಮಾಧವ ಶೆಟ್ಟಿಗಾರ್,ಹಾಲು ಒಕ್ಕೂಟದ ಕಾರ್ಯದರ್ಶಿ ರತ್ನಕುಮಾರ್ ಚೌಟ, ಪ್ರಗತಿ ಬಂಧು ಒಕ್ಕೂಟ ಅಧ್ಯಕ್ಷ ನವೀನ್,ಕಲ್ಕುರಿಪದವು ಓಂ ಫ್ರೆಂಡ್ಸ್ ಸಂಘದ ಪದಾಽಕಾರಿಗಳು, ಸೇವಾಪ್ರತಿನಿಽಗಳು ಉಪಸ್ಥಿತರಿದ್ದರು ಸೇವಾ ಪ್ರತಿನಿಧಿಗಳಾದ ಯಶೋಧರ ಶೆಟ್ಟಿ ಸ್ವಾಗತಿಸಿದರು. ರಾಘವೇಂದ್ರ ಭಟ್ ವಂದಿಸಿದರು.

