Thursday, June 26, 2025

ಶ್ರೀರಾಮ ಮಂದಿರ ಕಲ್ಲಡ್ಕದಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜೆ

ಕಲ್ಲಡ್ಕ: ಶ್ರೀರಾಮ ಮಂದಿರಕಲ್ಲಡ್ಕದಲ್ಲಿ 45ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ ಪೂಜೆ ಮಕರ ಸಂಕ್ರಾಂತಿಯಂದು ನಡೆಯಿತು. ಸಂಜೆ ಪ್ರಾರಂಭಗೊಂಡಸತ್ಯನಾರಾಯಣ ಪೂಜೆಯಲ್ಲಿ ವಿಶೇಷವಾಗಿ 32 ನವದಂಪತಿಗಳು ವ್ರತಧಾರಿಗಳಾಗಿ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಡಾ. ಪ್ರಭಾಕರಭಟ್ ‌ಕಲ್ಲಡ್ಕಇವರು ಪ್ರಸ್ತಾವಿಕ ಮಾತನಾಡಿ ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲರಿಗೂ ಶುಭ ಹಾರೈಸಿದರು. ಒಡಿಯೂರು ಶ್ರೀ ಸಾಧ್ವಿ ಮಾತಾನಂದಮಯಿಯವರು ನವದಂಪತಿಗಳಿಗೆ ಶಾಲು ಹೊದಿಸಿ ಫಲಪುಷ್ಟ ನೀಡಿ ಆಶೀರ್ವದಿಸಿದರು.

ಭಗವದ್ಗೀತೆಯ 18 ಅಧ್ಯಾಯಗಳನ್ನು ಕಂಠಪಾಠ ಮಾಡಿರುವ ಶ್ರೀರಾಮ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಕು. ವಾಸವಿ ಇವರನ್ನು ಶಾಲು ಹೊದಿಸಿ ಭಗವದ್ಗೀತೆ ಸಂದೇಶ ನೀಡುವ ಫಲಕ ನೀಡಿ ಸನ್ಮಾನಿಸಿದರು.

ಸತ್ಯನಾರಾಯಣ ಪೂಜೆಯ ಕಥೆಯನ್ನು ಗೀತಾ ಪ್ರವಚನಕಾರರು ಅಂಧರಾಗಿರುವ ಕಿರಣ್‌ಕುಮಾರ್ ಪಡುಪಣಂಬೂರು ಮತ್ತು ಸಸಿಹಿತ್ತಿಲು ಯಕ್ಷಗಾನ ಮೇಳದ ಪ್ರಧಾನ ಭಾಗವತರಾದ ಪೆರ್ಲದ ಸತ್ಯನಾರಾಯಣ ಪುಣಚಿತ್ತಾಯ ಇವರು ವಿವರಿಸಿದರು. ಪೂಜೆಯನ್ನು ಕಶೆಕೋಡಿ ಸೂರ್‍ಯನಾರಾಯಣ ಭಟ್‌ಇವರತಂಡ ನೆರವೇರಿಸಿದರು.

ಪೂಜೆಗೆ ಆಗಮಿಸಿರುವ ಸುಮಾರುಎರಡೂವರೆ ಸಾವಿರಕ್ಕೂ ಮಿಕ್ಕಿ ಸೇರಿದಭಕ್ತಾದಿಗಳಿಗೆ ಕುಳಿತು ಊಟ ಮಾಡುವ ಭೊಜನ ವ್ಯವಸ್ಥೆಯನ್ನು ಮಾಡಲಾಗಿತ್ತು. ಅಯ್ಯಪ್ಪ ಸ್ವಾಮಿ ವ್ರತಧಾರಿಗಳ ಪ್ರಾಯೋಜಕತ್ವದಲ್ಲಿ ಕಟೀಲು ಮೇಳದವರಿಂದ ದಶಾವತಾರ ಎಂಬ ಯಕ್ಷಗಾನ ಬಯಲಾಟ ನಡೆಯಿತು. ಚೆನ್ನಪ್ಪಆರ್‌ಕೋಟ್ಯಾನ್ ಸ್ವಾಗತಿಸಿ, ಕ. ಕೃಷ್ಣಪ್ಪ ವಂದಿಸಿದರು.

More from the blog

School Holiday : ಭಾರೀ ಮಳೆ ಮುನ್ಸೂಚನೆ : ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ..

ಬೆಳ್ತಂಗಡಿ: ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಖಾಸಗಿ ವಿದ್ಯಾಸಂಸ್ಥೆಗಳಿಗೆ ಜೂನ್ 26ರಂದು ರಜೆ ಘೋಷಣೆ ಮಾಡಲಾಗಿದೆ. ಮುಂಜಾಗೃತ ಕ್ರಮವಾಗಿ ತಹಶೀಲ್ದಾರ್ ರವರ ತಾಲೂಕು ವಿಪತ್ತು...

Bantwal Police :ಜೂನ್ 26 ರಂದು ” ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ” ಅಭಿಯಾನ 2025 ಕಾರ್ಯಕ್ರಮ

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ ಹಾಗೂ ಬಂಟ್ವಾಳ ವೃತ್ತದ ಪೋಲೀಸ್ ಇಲಾಖೆಯ ವತಿಯಿಂದ ಬಿಸಿರೋಡಿನಲ್ಲಿ ಜೂನ್ 26 ರಂದು " ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ " ಅಭಿಯಾನ 2025 ಕಾರ್ಯಕ್ರಮ ನಡೆಯಲಿದೆ...

Kalladka : ಕಲ್ಲಡ್ಕ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಲ್ಲಡ್ಕದ ಪ್ಲೈ ಓವರ್ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಿಸಿರೋಡು - ಅಡ್ಡಹೊಳೆ ಅತೀ ಉದ್ದದ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತವಾಗಿದೆ. ಕಳೆದ 25 ದಿನಗಳ ಹಿಂದೆ...

ಇಡ್ಕಿದು ಗ್ರಾ. ಪಂ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅನುಮತಿ ವಿಚಾರ : ಪಿಡಿಒ ಅಮಾನತು

ವಿಟ್ಲ: ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅವಕಾಶ ನೀಡಿದ‌ ಆರೋಪದ ಹಿನ್ನೆಲೆ ಯಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೋಕುಲ್ ದಾಸ್ ಭಕ್ತ ರವರನ್ನು ಅಮಾನತು...