Monday, January 26, 2026

ಕಲ್ಲಡ್ಕ ಶ್ರೀರಾಮ ಪದವಿಪೂರ್ವ ವಿದ್ಯಾಲಯದಲ್ಲಿ ವಾರ್ಷಿಕ ಕ್ರೀಡಾಕೂಟ

ಕಲ್ಲಡ್ಕ: ಶಿಕ್ಷಣದ ಜೊತೆಗೆ ಕ್ರೀಡಾ ಮನೋಭಾವನೆಯನ್ನು ಬೆಳೆಸಿಕೊಳ್ಳುವ ಮೂಲಕ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಶ್ರೀರಾಮ ವಿದ್ಯಾಸಂಸ್ಥೆ ನಿರಂತರವಾಗಿ ಶ್ರಮಿಸುತ್ತಿದೆ ಎಂದು ಚಿನ್ನಪ್ಪ ಕೆ. ಜಾಲ್ಸೂರು, ದೈಹಿಕ ಶಿಕ್ಷಣ ಶಿಕ್ಷಕರು, ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆ, ಶಂಭೂರು ಇವರು ಕಲ್ಲಡ್ಕ ಶ್ರೀರಾಮ ಪದವಿಪೂರ್ವ ವಿದ್ಯಾಲಯದ 2020-21ನೇ ಸಾಲಿನ ವಾರ್ಷಿಕ ಕ್ರೀಡಾಕೂಟದ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.


ಕಮಲ್ ಶೆಟ್ಟಿ ಅಧ್ಯಕ್ಷರು, ವ್ಯವಸಾಯ ಸೇವಾ ಸಹಕಾರಿ ಸಂಘ, ವಾಮದಪದವು ಇವರು ಕಾರ್‍ಯಕ್ರಮವನ್ನು ಉದ್ಘಾಟಿಸಿದರು.
ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕರಾದ ವಸಂತ ಮಾಧವ ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಶ್ರೀರಾಮ ವಿದ್ಯಾಕೇಂದ್ರದ ಕೋಶಾಧಿಕಾರಿಗಳಾದ ಸತೀಶ್ ಭಟ್, ಶಿವಗಿರಿ, ಆಡಳಿತ ಮಂಡಳಿ ಸದಸ್ಯರಾದ ನಾಗೇಶ್, ಕಾಲೇಜಿನ ಪ್ರಾಂಶುಪಾಲರಾದ ವಸಂತ ಬಲ್ಲಾಳ್ ಉಪಸ್ಥಿತರಿದ್ದರು. ಕಾಲೇಜಿನ ಕ್ರೀಡಾಪಟುಗಳು ಕ್ರೀಡಾಜ್ಯೋತಿಯನ್ನು ಬೆಳಗಿಸಿದರು. ಚೆಸ್ ಚಾಂಪಿಯನ್‌ಶಿಪ್‌ನಲ್ಲಿ ರಾಷ್ಟ್ರಮಟ್ಟದಲ್ಲಿ ಪದವಿಪೂರ್ವ ವಿದ್ಯಾಲಯವನ್ನು ಪ್ರತಿನಿಧಿಸಿದ ರಕ್ಷಾ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ಕರುಣಾಕರ್ ಸ್ವಾಗತಿಸಿದರು. ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯಾದ ಪ್ರಿಯಾಂಕ ವಂದಿಸಿದರು. ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯಾದ  ಭಕ್ತಿಶ್ರೀ ಕಾರ್ಯಕ್ರಮವನ್ನು ನಿರೂಪಿಸಿದರು.

 

More from the blog

ಸಂಗಬೆಟ್ಟು ಗ್ರಾ.ಪಂ ವಿಶೇಷ ಗ್ರಾಮ ಸಭೆ : ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ತೀರ್ಮಾನ 

ಬಂಟ್ವಾಳ : ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ("ವಿಕಸಿತ್ ಭಾರತ್ "ಗ್ಯಾರಂಟಿ ಯೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಯು ಒಂದು ಅತ್ಯುತ್ತಮ ಯೋಜನೆಯಾಗಿದ್ದು, ಇದರಲ್ಲಿನ ಕೆಲವೊಂದು...

ವೈಭವದಿಂದ ಜರುಗಿದ ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಮಡಂತ್ಯಾರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ಅಂಗವಾಗಿ, ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮವು ಜ. 25 ಭಾನುವಾರದಂದು ಮಡಂತ್ಯಾರಿನಲ್ಲಿ ಅತ್ಯಂತ ವೈಭವ ಮತ್ತು ಶಿಸ್ತಿನೊಂದಿಗೆ ನಡೆಯಿತು. ಸಂಜೆ ನಾಲ್ಕು ಗಂಟೆಗೆ...

ತುಳುನಾಡ ಜಾತ್ರೆ – ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ ಹೊರೆ ಕಾಣಿಕೆ, ಉಗ್ರಾಣ ಮುಹೂರ್ತ

ವಿಟ್ಲ: ಜ.27 ಮತ್ತು 28 ರಂದು ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನದಲ್ಲಿ ನಡೆಯಲಿರುವ ತುಳುನಾಡ ಜಾತ್ರೆ -ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ, ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನದ ಅಂಗವಾಗಿ ಹಸಿರುವಾಣಿ...

ಬಲಿಷ್ಠ ಭಾರತದ ನಿರ್ಮಾಣ ಪ್ರತಿಯೊಬ್ಬರ ಜವಾಬ್ದಾರಿ : ತಹಶೀಲ್ದಾರ್ ಜಿ. ಮಂಜುನಾಥ್

ಬಂಟ್ವಾಳ : ಬಲಿಷ್ಠ ಭಾರತದ ನಿರ್ಮಾಣ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಎಲ್ಲರನ್ನು ಒಳಗೊಂಡ ಸಮೃದ್ಧ ಭಾರತವನ್ನು ಸಂವಿಧಾನದ ಶಕ್ತಿಯಜೊತೆ ನಿರ್ಮಿಸೋಣ ಎಂದು ತಾಲೂಕು ದಂಡಾಧಿಕಾರಿ ಹಾಗೂ ತಹಶೀಲ್ದಾರ್ ಜಿ ಮಂಜುನಾಥ್ ಹೇಳಿದರು. ಬಂಟ್ವಾಳ ತಾಲೂಕು ರಾಷ್ಟ್ರೀಯ...