Wednesday, February 4, 2026

ಲಸಿಕೀರಕಣದ ಉದ್ದೇಶವೇ ಆರೋಗ್ಯ ಮತ್ತು ಸಧೃಢ ಸಮಾಜದ ನಿಮಾ೯ಣ: ಕುಸುಮಾ

ಕಲ್ಲಡ್ಕ ಎ.16: ಆರೋಗ್ಯದ ವಿಚಾರವಾಗಿ ಯಾವುದೇ ರೀತಿಯ ಉದಾಸೀನ ಸಲ್ಲದು. ಸರಕಾರದ ವ್ಯವಸ್ಥೆ ಯು ಪ್ರತಿ ಹಂತದಲ್ಲೂ ನಿಧಿ೯ಷ್ಟತೆಯನ್ನು ಹೊಂದಿದ್ದು ಪಾರದವಶ೯ಕತೆಯನ್ನು ತೋರುತ್ತದೆ. 45 ವಷ೯ ಮೇಲ್ಪಟ್ಟ ಎಲ್ಲರಿಗೂ ಉಚಿತವಾಗಿ ನೀಡುವ ಕೊರೋನಾ ಲಸಿಕೀರಕಣದ ಉದ್ದೇಶವೇ ಆರೋಗ್ಯ ಮತ್ತು ಸಧೃಢ ಸಮಾಜದ ನಿಮಾ೯ಣವಾಗಿದೆ. ಇದರ ಸದುಪಯೋಗ ಎಲ್ಲರೂ ಪಡೆದು ಆರೋಗ್ಯವಂತರಾಗಬೇಕು ಎಂದು ಸಮುದಾಯ ಆರೋಗ್ಯ ಕೇಂದ್ರ ವಿಟ್ಲ ಇಲ್ಲಿನ ಹಿರಿಯ ಮಹಿಳಾ ಆರೋಗ್ಯ ಸಹಾಯಕಿ  ಕುಸುಮಾ ರವರು ದ.ಕ.ಜಿ.ಪಂ.ಹಿ.ಪ್ರಾ. ಶಾಲೆ ಮಜಿ ವೀರಕಂಭ ಇಲ್ಲಿ ದ.ಕ.ಜಿ.ಪಂ., ಜಿಲ್ಲಾ ಆರೋಗ್ಯ ಕೇಂದ್ರ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಮುದಾಯ ಆರೋಗ್ಯ ಕೇಂದ್ರ ವಿಟ್ಲ, ಗ್ರಾಮ ಆರೋಗ್ಯ ನೈರ್ಮಲ್ಯ ಸಮಿತಿ ಗ್ರಾ.ಪಂ. ವೀರಕಂಭ ಹಾಗೂ ವೀರಕಂಭ ಗ್ರಾಮದ ವಿವಿಧ ಸಂಘಸಂಸ್ಥೆಗಳ ಸಹಯೋಗದಲ್ಲಿ ನಡೆದ ಕೋವಿಡ್ ಲಸಿಕಾ ಶಿಬಿರ ವನ್ನು ಉದ್ದೇಶಿಸಿ ಮಾತನಾಡಿದರು.
ಕಾರ್ಯಕ್ರಮವನ್ನು ಶಾಲಾ ಮುಖ್ಯ ಶಿಕ್ಷಕ ನಾರಾಯಣ ಪೂಜಾರಿ ಅವರಿಗೆ ಪ್ರಥಮ ಲಸಿಕೆ ನೀಡುವ ಮೂಲಕ ವಿಟ್ಲ ಸಮುದಾಯ ಆರೋಗ್ಯಕೇಂದ್ರದ ಕಿರಿಯ ಆರೋಗ್ಯ ಸಹಾಯಕಿ ಜ್ಯೋತಿ ಕೆ. ಎನ್, ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೀರಕಂಭ ಗ್ರಾಮ ಪಂಚಾಯತ್ ಅಧ್ಯಕ್ಷ ರಾದ ದಿನೇಶ್ ವಹಿಸಿದ್ದರು .
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್, ಸದಸ್ಯ ರಾದ ಮೀನಾಕ್ಷಿ, ಜಯಪ್ರಸಾದ್,ಸಂದೀಪ್ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಸಂಜೀವ ಮೂಲ್ಯ, ಧ.ಗ್ರಾ.ಯೋ. ವೀರಕಂಬ ಒಕ್ಕೂಟದ ಅಧ್ಯಕ್ಷ ಕೊರಗಪ್ಪ ನಾಯ್ಕ್,, ಹಿರಿಯ ಮಹಿಳಾ ಆರೋಗ್ಯ ಸಹಾಯಕಿಯರಾದ ಇಂದಿರಾ ನಾಯ್ಕ್, ಕಿರಿಯ ಆರೋಗ್ಯ ಸಹಾಯಕಿ ಕೀರ್ತಿ ಎ ಆರ್ ,ಆಶಾ ಕಾಯ೯ಕತೆ೯ಯರಾದ ಲೀಲಾವತಿ, ಕೋಮಲಾಕ್ಷಿ,ಸ್ನೇಹಲತಾ,
ಶಶಿಕಲಾ, ಹಾಗೂ ಶಿಕ್ಷಕವೃಂದ ದವರು ಭಾಗವಹಿಸದ್ದರು.
ಶಿಕ್ಷಕಿ ಸಂಗೀತ ಶರ್ಮ ಸ್ವಾಗತಿಸಿ
ಶಿಕ್ಷಕಿ ಮೂಷೀ೯ದಾ ಬಾನು ವಂದಿಸಿದರು.

More from the blog

B.C.Road : ಮಹಿಳಾ ಮತ್ತು ಮಕ್ಕಳ ಸಂಭ್ರಮೋತ್ಸವ..

ಬಂಟ್ವಾಳ : ಜೀವನದ ಪ್ರತೀ ಕ್ಷಣದಲ್ಲಿ ಮಹಿಳೆಯರು ಸಂತೋಷ-ಸಂತಸ‌ ಪಡೆಯುವ ಸನ್ನಿವೇಶಗಳು ಸಮಾಜದಲ್ಲಿ ನಿರ್ಮಾಣಗೊಳ್ಳಲಿ ಎಂದು ಹಿರಿಯ ವಕೀಲ ಅಶ್ವನಿ‌ ಕುಮಾರ್ ರೈ ಹೇಳಿದರು. ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ‌ ಸಂಸ್ಥೆ ಮತ್ತು...

ಮಡಂತ್ಯಾರು : ನಕಲಿ ಚಿನ್ನದ ಸರ ಅಡವಿಟ್ಟು ವಂಚನೆ – ಇಬ್ಬರ ಬಂಧನ

ಬಂಟ್ವಾಳ: ಲಕ್ಷಾಂತರ ರೂ ಸಾಲ ಪಡೆಯುವ ಉದ್ದೇಶದಿಂದ ನಕಲಿ ಚಿನ್ನದ ಸರವನ್ನು ಅಡವಿಡಲು ಸಹಕಾರಿ ಸಂಘವೊಂದಕ್ಕೆ ಬಂದ ಇಬ್ಬರು ಆರೋಪಿಗಳು ಪೋಲೀಸರ ಅತಿಥಿಯಾಗಿದ್ದಾರೆ. ಮಡಂತ್ಯಾರು ಎಂಬಲ್ಲಿರುವ ಒಡಿಯೂರು ಶ್ರೀ ವಿವಿದ್ದೋದೇಶ ಸೌಹಾರ್ದ ಸಹಕಾರಿ ಸಂಘಕ್ಕೆ...

ಮಾಣಿ : ಪೈಪ್ ಲೈನ್ ಕಾಮಗಾರಿಯಿಂದ ಹದಗೆಟ್ಟ ರಸ್ತೆ – ಪ್ರತಿಭಟನೆಗೆ ಮುಂದಾದ ನಾಗರಿಕರು 

ವಿಟ್ಲ: ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಪೈಪ್ ಲೈನ್ ಕಾಮಗಾರಿ ನಡೆಸುವ ವೇಳೆ ಮಾಣಿ ಗ್ರಾಮದ ಅರ್ಬಿ ಪ್ರದೇಶದಲ್ಲಿ ರಸ್ತೆಯನ್ನು ಅಗೆದು ಅದರ ಮಧ್ಯ ಭಾಗದಲ್ಲಿ ಪೈಪ್ ಅಳವಡಿಕೆ ಮಾಡಿ ವ್ಯವಸ್ಥಿತವಾಗಿ ಅದನ್ನು...

B.C. Road : FTM ತರಬೇತಿ ಮತ್ತು ಅಭಿಯಾನ ಕಾರ್ಯಕ್ರಮ..

ಬಂಟ್ವಾಳ: ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ , ಜಿಲ್ಲಾ ಪ್ರಯೋಗಾಲಯ ಮಂಗಳೂರು ಇವರ ವತಿಯಿಂದ, ಗ್ರಾ.ಪಂ.ಅಧ್ಯಕ್ಷರುಗಳು,ಸದಸ್ಯರುಗಳು, ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರಿಗೆ FTM ತರಬೇತಿ ಮತ್ತು...