Thursday, June 26, 2025

ಕಲ್ಲಡ್ಕ ಶ್ರೀ ಶಾರದಾ ಪೂಜಾ ಮಹೋತ್ಸವ ಸಮಿತಿ ಅಧ್ಯಕ್ಷರಾಗಿ ಯೋಗೀಶ್ ಪೂಜಾರಿ ಆಯ್ಕೆ

ಬಂಟ್ವಾಳ: ಶ್ರೀ ಶಾರದಾ ಸೇವಾ ಪ್ರತಿಷ್ಠಾನ (ರಿ) ಕಲ್ಲಡ್ಕ ಆಶ್ರಯದಲ್ಲಿ ನಡೆಯುವ 44ನೇ ವರ್ಷದ ಶಾರದಾ ಪೂಜಾ ಮಹೋತ್ಸವದ ಮಹಾಸಭೆ ಪ್ರತಿಷ್ಠಾನದ ಅಧ್ಯಕ್ಷ ನರಸಿಂಹ ಮಡಿವಾಳ ಅಧ್ಯಕ್ಷತೆಯಲ್ಲಿ ನಡೆದಿದ್ದು, ಉತ್ಸವ ಸಮಿತಿಯ ನೂತನ ಅಧ್ಯಕ್ಷರಾಗಿ ಯೋಗೀಶ್ ಪೂಜಾರಿ ಸರ್ವಾನುಮತದಿಂದ ಆಯ್ಕೆಗೊಂಡಿದ್ದಾರೆ.
ಉಪಾಧ್ಯಕ್ಷರಾಗಿ ರಾಜೇಶ್ ಆಚಾರ್ಯ ಕೊಳಕೀರು, ಸೌಮ್ಯ ಶಶಿಕಿರಣ್ ಆಚಾರ್ಯ ರಾಮನಗರ, ಪ್ರಧಾನ ಕಾರ್ಯದರ್ಶಿಯಾಗಿ ಪ್ರಮಿತ ಶೆಟ್ಟಿ ಕುಕ್ಕಮಜಲು, ಜತೆಕಾರ್ಯದರ್ಶಿಯಾಗಿ ವಿಕ್ರಮ್ ಪ್ರಭು ರಾಮನಗರ, ಚೇತನ್ ಪಳನೀರು, ಕೋಶಾಧಿಕಾರಿಯಾಗಿ ಗಣೇಶ್ ಶೆಟ್ಟಿ ಕುಕ್ಕಮಜಲು, ಜತೆಕಾರ್ಯದರ್ಶಿಯಾಗಿ ಶಿವರಾಮ ಕುಕ್ಕಮಜಲು, ಕ್ರೀಡಾಕಾರ್ಯದರ್ಶಿಯಾಗಿ ಪ್ರಶಾಂತ್ ಆಳ್ವ ಕೊಳಕೀರು, ಯಮುನಾ ಟೀಚರ್, ಗಣೇಶ್ ಮಜಲು, ಹರೀಶ್ ಕುಕ್ಕಮಜಲು, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ವಿದ್ಯಾ ಗುಣಕರ ಕೊಟ್ಟಾರಿ ಕೊಳಕೀರು, ಜಯಶಂಕರ ಶೆಟ್ಟಿ ಕುಕ್ಕಮಜಲು, ಶಂಕರ ಕುಕ್ಕಮಜಲು, ಕೀರ್ತನ್ ಕುಕ್ಕಮಜಲು, ಸಂಘಟನಾ ಕಾರ್ಯದರ್ಶಿಯಾಗಿ ಶಶಿಕಿರಣ್ ಆಚಾರ್ಯ ರಾಮನಗರ, ಸಂಚಾಲಕರಾಗಿ ವಜ್ರನಾಥ ಮಡ್ಲಮಜಲು ಅವರನ್ನು ಸರ್ವಾನುಮತದಿಂದ ಆರಿಸಲಾಯಿತು. ಸಭೆಯಲ್ಲಿ ಪ್ರತಿಷ್ಠಾನದ ಕಾರ್ಯದರ್ಶಿ ಚಿ.ರಮೇಶ್, ಟ್ರಸ್ಟಿಗಳು, ಸರ್ವಸದಸ್ಯರು ಉಪಸ್ಥಿತರಿದ್ದರು.

More from the blog

School Holiday : ಭಾರೀ ಮಳೆ ಮುನ್ಸೂಚನೆ : ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ..

ಬೆಳ್ತಂಗಡಿ: ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಖಾಸಗಿ ವಿದ್ಯಾಸಂಸ್ಥೆಗಳಿಗೆ ಜೂನ್ 26ರಂದು ರಜೆ ಘೋಷಣೆ ಮಾಡಲಾಗಿದೆ. ಮುಂಜಾಗೃತ ಕ್ರಮವಾಗಿ ತಹಶೀಲ್ದಾರ್ ರವರ ತಾಲೂಕು ವಿಪತ್ತು...

Bantwal Police :ಜೂನ್ 26 ರಂದು ” ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ” ಅಭಿಯಾನ 2025 ಕಾರ್ಯಕ್ರಮ

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ ಹಾಗೂ ಬಂಟ್ವಾಳ ವೃತ್ತದ ಪೋಲೀಸ್ ಇಲಾಖೆಯ ವತಿಯಿಂದ ಬಿಸಿರೋಡಿನಲ್ಲಿ ಜೂನ್ 26 ರಂದು " ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ " ಅಭಿಯಾನ 2025 ಕಾರ್ಯಕ್ರಮ ನಡೆಯಲಿದೆ...

Kalladka : ಕಲ್ಲಡ್ಕ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಲ್ಲಡ್ಕದ ಪ್ಲೈ ಓವರ್ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಿಸಿರೋಡು - ಅಡ್ಡಹೊಳೆ ಅತೀ ಉದ್ದದ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತವಾಗಿದೆ. ಕಳೆದ 25 ದಿನಗಳ ಹಿಂದೆ...

ಇಡ್ಕಿದು ಗ್ರಾ. ಪಂ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅನುಮತಿ ವಿಚಾರ : ಪಿಡಿಒ ಅಮಾನತು

ವಿಟ್ಲ: ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅವಕಾಶ ನೀಡಿದ‌ ಆರೋಪದ ಹಿನ್ನೆಲೆ ಯಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೋಕುಲ್ ದಾಸ್ ಭಕ್ತ ರವರನ್ನು ಅಮಾನತು...