Sunday, July 13, 2025

ಧಾರ್ಮಿಕ ಕೇಂದ್ರದ ಪರಿಸರದಲ್ಲಿ ಅಶ್ಲೀಲ ವರ್ತನೆ: ಎಚ್ಚರಿಕೆಯ ಬ್ಯಾನರ್ ಅಳವಡಿಸಿದ ಹಿಂದೂ ಸಂಘಟನೆ

ಬಂಟ್ವಾಳ: ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ನರಹರಿ ದೇವಾಲಯದ ಪರಿಸರದಲ್ಲಿ ಅಶ್ಲೀಲ ವರ್ತನೆಗಳು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದ್ದು ಇದನ್ನು ವಿಶ್ವ ಹಿಂದೂ ಪರಿಷದ್ ಬಜರಂಗದಳ ಕಲ್ಲಡ್ಕ ವಲಯ ಖಂಡಿಸಿ ಎಚ್ಚರಿಕೆಯನ್ನು ನೀಡಿದೆ.
ದೇವಾಲಯದ ಪರಿಸರದಲ್ಲಿ ಅಶ್ಲೀಲ ವಾದ ವರ್ತನೆಗಳು ನಡೆಯವುದು ಹೆಚ್ಚಾಗುತ್ತಿದ್ದು ಇದನ್ನು ತಡೆಯಲು ದೇವಾಲಯದ ಪ್ರವೇಶದ ಬಳಿಯಲ್ಲಿ ಬ್ಯಾನರ್ ಹಾಕಲಾಗಿದೆ.

ಈ ಬ್ಯಾನರ್ ನಲ್ಲಿ ಏನು ಇದೆ?

ಕರಾವಳಿಯ ಪ್ರಸಿದ್ಧ ಕ್ಷೇತ್ರದಲ್ಲೊಂದಾದ ನರಹರಿ ಪರ್ವತದ ಪರಿಸರದಲ್ಲಿ ಇತ್ತೀಚಿಗೆ ಮದ್ಯಪಾನ , ದೂಮಪಾನ, ಪ್ರೇಮಿಗಳ ಅಶ್ಲೀಲ ವರ್ತನೆ, ಅನ್ಯದರ್ಮಿಯರ ಹಾವಳಿಯು ಜಾಸ್ತಿಯಾಗುತ್ತಿದ್ದು, ಇದನ್ನು ವಿಶ್ವಹಿಂದೂ ಪರಿಷತ್ ಬಜರಂಗದಳ ತೀವ್ರ ವಾಗಿ ಖಂಡಿಸುತ್ತದೆ.ಇನ್ನು ಮುಂದೆಯೂ ಇಂತಹ ವರ್ತನೆಗಳು ಜಾಸ್ತಿಯಾಗುತ್ತಾ ಹೋದರೆ ಅದಕ್ಕೆ ತಕ್ಕ ಉತ್ತರವನ್ನು ನೀಡಲು ಭಜರಂಗದಳವು ಸಜ್ಜಾಗಿದೆ.
ಭಕ್ತಾಧಿಗಳು ಬರುವ ಇಂತಹ ಪುಣ್ಯ ಕ್ಷೇತ್ರ ವನ್ನು ಅಪವಿತ್ರಗೊಳಿಸಲು ನಾವೆಂದಿಗೂ ಬಿಡಲಾರೆವು, ಇದು ನಿಮಗೆ ಕೊನೆಯ ಎಚ್ಚರಿಕೆ.
ಬದಲಾವಣೆ ನಿಮ್ಮಿಂದ ಆಗದಿದ್ದರೆ ಬದಲಾವಣೆಗೆ ಬಜರಂಗದಳ ಇಳಿಯುತ್ತದೆ.
ಎಂಬ ಬರಹದ ಬ್ಯಾನರ್ ಒಂದನ್ನು ನರಹರಿ ದೇವಸ್ಥಾನಕ್ಕೆ ಹೋಗುವ ದಾರಿಯಲ್ಲಿ ಹಾಕಲಾಗಿದೆ.

More from the blog

ತುಂಬೆಯ ಕಾವ್ಯ ಕೆ. ನಾಯಕ್ ಗೆ ಪಿ.ಎಚ್.ಡಿ ಪದವಿ..

ಬಂಟ್ವಾಳ: ತುಂಬೆಯ ಕಾವ್ಯ. ಕೆ. ನಾಯಕ್ ಇವರು ಐಐಎಸ್‌ಸಿ‌ನ ಅಂತರ್‌ಶಿಸ್ತಿನ ವಿಜ್ಞಾನ ವಿಭಾಗದ ಡೀನ್ ಹಾಗೂ ನ್ಯಾನೋ ಸೈನ್ಸ್ ಮತ್ತು ಇಂಜಿನಿಯರಿಂಗ್ ಕೇಂದ್ರದ ಪ್ರಾಧ್ಯಾಪಕ ಪ್ರೊ. ನವಕಾಂತ್ ಭಟ್ ಅವರ ಮಾರ್ಗದರ್ಶನದಲ್ಲಿ “ಎಲೆಕ್ಟ್ರೋಕೆಮಿಕಲ್...

ಫರಂಗಿಪೇಟೆ: ಸಂಕಲ್ಪ ಸಿದ್ಧಿಗಾಗಿ ಶ್ರೀ ಆಂಜನೇಯ ದೇವಸ್ಥಾನಕ್ಕೆ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ ಭೇಟಿ..

ಬಂಟ್ವಾಳ : ಸಂಕಲ್ಪ ಸಿದ್ಧಿಗಾಗಿ ಶ್ರೀ ಕ್ಷೇತ್ರ ಶಂಕರಪುರದ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ ಯವರು ಜು.12ರಂದು ಫರಂಗಿಪೇಟೆಯ ಶ್ರೀ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಆಡಳಿತ ಮಂಡಳಿಯಿಂದ...

ಶ್ರೀ ಕ್ಷೇ.ಧ.ಗ್ರಾ.ಯೋ.ಬಿ.ಸಿ ಟ್ರಸ್ಟ್ ಮಾಣಿ ವಲಯದ ವತಿಯಿಂದ ಪರಿಸರ ದಿನಾಚರಣೆ ಕಾರ್ಯಕ್ರಮ..

ಬಂಟ್ವಾಳ : ಬಂಟ್ವಾಳ ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಏಮಾಜೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ.) ವಿಟ್ಲ ಇದರ ಮಾಣಿ...

ಕುಂಜರ್ಕಳದ ತಡೆಗೋಡೆ, ಬಸ್ಸು ತಂಗುದಾಣ, ಹೈಮಾಸ್ಟ್ ದೀಪ ಉದ್ಘಾಟಿಸಿದ ಯು.ಟಿ.ಖಾದರ್..

ಬಂಟ್ವಾಳ: ಶಾಸಕರ ಅನುದಾನದಿಂದ ನಿರ್ಮಾಣಗೊಂಡ ಪುದು ಗ್ರಾಮದ ಕುಂಜರ್ಕಳದ ತಡೆಗೋಡೆ, ೧೦ನೇ ಮೈಲುಕಲ್ಲು ಬಳಿ ಬಸ್ಸು ತಂಗುದಾಣ ಹಾಗೂ ತ್ವಾಹಾ ಜುಮಾ ಮಸೀದಿ ಬಳಿ ಅನುಷ್ಠಾನಗೊಂಡ ಹೈಮಾಸ್ಟ್ ದೀಪವನ್ನು ಸ್ಪೀಕರ್ ಯು.ಟಿ.ಖಾದರ್ ಅವರು...