Wednesday, July 9, 2025

ದೇಶ ಕಟ್ಟುವ ಕಾಯಕದ ಕೆಲಸ ನಮ್ಮ‌ಮನೆಗಳಿಂದಲೇ ಆರಂಭವಾಗಲಿ: ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ : ಕಿಶೋರಾವಸ್ಥೆಯಲ್ಲಿ ಉತ್ತಮ ಸಂಸ್ಕಾರ ಮೈಗೂಡಿಸಿಕೊಳ್ಳುವ ನಿಟ್ಟಿನಲ್ಲಿ ಬಿಜೆಪಿ ಮಹಿಳಾ ಮೋರ್ಛಾ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಹೇಳಿದರು.


ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಬಂಟ್ವಾಳ ಮಂಡಲದ ಬಿಜೆಪಿ ಮಹಿಳಾ ಮೋರ್ಛಾದ ವತಿಯಿಂದ ಹಮ್ಮಿಕೊಂಡ ಸೇವಾ ಸಮರ್ಪಣ್ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಅವರು ಭಾಗವಹಿಸಿ ಮಾತನಾಡಿದರು.
ಸ್ಪರ್ಧಾತ್ಮಕ ಯುಗವಾಗಿದ್ದರೂ, ಅವಕಾಶಗಳೂ ಹೆಚ್ಚಿದೆ, ಇದನ್ನು ಸದುಪಯೋಗಪಡಿಸಿಕೊಂಡು ದೇಶ ಕಟ್ಟುವ ಕಾಯಕದ ಕೆಲಸ ನಮ್ಮ‌ಮನೆಗಳಿಂದಲೇ ಆರಂಭವಾಗಲಿ ಎಂದು ಅವರು ಆಶಿಸಿದರು.
ಮುಖ್ಯ ಭಾಷಣ ಮಾಡಿದ
ವಿಧಾನಪರಿಷತ್ ಸದಸ್ಯೆ ತೇಜಸ್ವಿನಿ ರಮೇಶ್ ಅವರು
ಮಾತನಾಡಿ, ಹದಿಹರೆಯದ ಬಾಲಕಿಯರು ಒಳಿತು ಕೆಡುಕುಗಳ ಬಗ್ಗೆ ಅರಿಯುವ ಸಾಮರ್ಥ್ಯ ಜೊತೆಗೆ ಎಲ್ಲವನ್ನು ಚಿಕಿತ್ಸಾಕ ದೃಷ್ಟಿಯಿಂದ ನೋಡಬೇಕು ಎಂದರು.
ಮಹಿಳೆಯರಿಗೆ ಸ್ವಾತಂತ್ರ್ಯ ಬೇಕು ಆದರೆ ಸ್ವಚ್ಛಂದತೆಯ ಕಡೆಗೆ ಗಮನ ಸೆಳೆಯುವ ರೀತಿಯಲ್ಲಿ ಜೀವನಕ್ಕೆ ಮಾರುಹೋದರೆ ಆಪಾಯವನ್ನು ಎಳೆದುಕೊಂಡತೆ ಎಂದು ಅತ್ಯಂತ ನೋವಿನಿಂದ ಪ್ರಸ್ತುತ ದಿನಗಳಲ್ಲಿ ನಡೆಯುವ ಕೆಲವೊಂದು ವಿಚಾರಗಳನ್ನು ಪಾಶ್ಚಾತ್ಯ ಸಂಸ್ಕೃತಿಗಳ ಪ್ರಭಾವಕ್ಕೆ ಒಳಗಾದ ಬಗ್ಗೆ ಹೇಳಿದರು.
ಮಕ್ಕಳು ಶಿಕ್ಷಣ ದ ಜೊತೆ ಸಂಸ್ಕಾರ ಗಳನ್ನು ಮೈಗೂಡಿಸಿಕೊಂಡರೆ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ ಎಂದ ಅವರು ಕಲ್ಲಡ್ಕ ಶ್ರೀರಾಮ ವಿದ್ಯಾಲಯ ಸಮಗ್ರ ಶಿಕ್ಷಣದ ಮೂಲಕ ದೇಶಕ್ಕೆ ಮಾದರಿಯಾಗಿದೆ ಎಂದರು.

ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ ಮಾತನಾಡಿ, ಯುವಜನತೆ ಸ್ವಾತಂತ್ರ್ಯ ಮತ್ತು ಸ್ವೇಚ್ಛೆಯ ಭಿನ್ನತೆಗಳನ್ನು ಅರಿತುಕೊಂಡು ಪ್ರತಿಯೊಬ್ಬರೂ ಹಿರಿಯರಿಗೆ ಗೌರವಕೊಡುವ ಸಂಸ್ಕಾರ ಬೆಳೆಸಿಕೊಳ್ಳಬೇಕೆಂದರು.
, ಜಿಲ್ಲಾ ಮಹಿಳಾ ಬಿಜೆಪಿ ಕಾರ್ಯದರ್ಶಿ ಪೂಜಾ ಪೈ, ಹಿರಿಯರಾದ ಡಾ.ಕಮಲಾ ಪ್ರಭಾಕರ ಭಟ್, ಬಂಟ್ವಾಳ‌ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಬಂಟ್ವಾಳ ಬಿಜೆಪಿ ಮಹಿಳಾ ಮೋರ್ಛಾದ ಅಧ್ಯಕ್ಷೆ ಭಾರತಿ ಚೌಟ, ಮಹಿಳಾ ಯುವಮೋರ್ಛಾ ಅಧ್ಯಕ್ಷೆ ಧನಲಕ್ಷ್ಮೀ ಗಟ್ಟಿ, ಒಳಚರಂಡಿ ಹಾಗೂ ನಗರ ನೀರು ಸರಬರಾಜು ಮಂಡಳಿ ನಿರ್ದೇಶಕಿ ಸುಲೋಚನಾ ಜಿಕೆ ಭಟ್ ವೇದಿಕೆಯಲ್ಲಿ ದ್ದರು. ಲಖಿತಾ ಆರ್.ಶೆಟ್ಟಿ ಕಾರ್ಯಕ್ರಮ‌ ನಿರೂಪಿಸಿದರು.

More from the blog

ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ – ದಿನೇಶ್ ಗುಂಡೂರಾವ್.. 

ಮಂಗಳೂರು : ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ ಕೈ ಗೊಳ್ಳಲಾಗುವುದುಎಂದು ಅರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಅವರು...

ಕಾರ್ಮಿಕರ ಅಖಿಲ ಭಾರತ ಮುಷ್ಕರದ ಅಂಗವಾಗಿ ಕಾರ್ಮಿಕರ ಪ್ರತಿಭಟನೆ..

ಬಂಟ್ವಾಳ : ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಹಾಗೂ ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳಿಂದ ಅಖಿಲ ಭಾರತ ಮುಷ್ಕರದ ದ ಅಂಗವಾಗಿ ಜೆ.ಸಿ.ಟಿ.ಯು ಮತ್ತು ಸಂಯುಕ್ತ ಹೋರಾಟ...

ಭಾರೀ ಮಳೆ ಮುನ್ಸೂಚನೆ : ಒಂದು ವಾರ ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್..

ಮಂಗಳೂರು : ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 14ರವರೆಗೆ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು,...

ಕುಡ್ತಮುಗೇರು: ಬಸ್ಸಿನಿಂದ ರಸ್ತೆಗೆ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು 

ವಿಟ್ಲ: ಖಾಸಗಿ ಬಸ್ಸಿನಿಂದ ಬಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂಧಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕುಡ್ತಮುಗೇರು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಕೊಡಂಗೆ ನಿವಾಸಿ ಚಿದಾನಂದ ರೈ (43 ವ.) ಮೃತಪಟ್ಟವರು. ಜು.7ರಂದು ಬೆಳಗ್ಗೆ...