Wednesday, July 9, 2025

ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ಪುನಾರಾರಂಭ 

“ಕಳೆದ ಒಂದಷ್ಟು ಸಮಯದಿಂದ ಶಾಲಾ ವಾತಾವರಣದಿಂದ ಹೊರಗಿದ್ದರೂ, ಶೈಕ್ಷಣಿಕ ಚಟುವಟಿಕೆ ಮಾತ್ರ ಮನೆಯಲ್ಲಿ ನಿರಂತರವಾಗಿತ್ತು. ಶಾಲೆಯಲ್ಲಿ ನಡೆಯುತ್ತಿದ್ದಂತಹ ಸಂಸ್ಕಾರಯುತ ಕಾರ್ಯಗಳು  ಪ್ರತಿ ಮನೆಯಲ್ಲಿಯೂ ಕೂಡ ನಡೆದಿರುವುದು ನಿಜವಾಗಿಯೂ ಶ್ಲಾಘನೀಯ. ಆದರೆ ಅನುಭವದ ಶಿಕ್ಷಣವನ್ನು, ಶಾಲೆಯ ಮೂಲಕವೇ ಪಡೆಯಲು ಮತ್ತೊಮ್ಮೆ ಅವಕಾಶ ಸಿಕ್ಕಿರುವುದು ಎಲ್ಲರಿಗೂ ಸಂತಸದ ವಿಚಾರ. ಕಲ್ಲಡ್ಕ ಶ್ರೀರಾಮ ಪ್ರಾಥಮಿಕ ಶಾಲೆಯು ಕನ್ನಡ ಮಾಧ್ಯಮದಲ್ಲಿ ರಾಜ್ಯದಲ್ಲಿಯೇ ಗರಿಷ್ಠ ಸಂಖ್ಯೆಯನ್ನು (1225 ಹೊಂದಿದ್ದು ಮಾತೃಭಾಷೆಯಲ್ಲಿ ಉಚಿತ ಶಿಕ್ಷಣ ನೀಡುತ್ತಿರುವ ಹೆಗ್ಗಳಿಕೆ ಈ ಸಂಸ್ಥೆಗಿದೆ. ಮುಂದಿನ ದಿನಗಳಲ್ಲಿ ಪರಿಸರದೊಂದಿಗಿನ ಶಿಕ್ಷಣವನ್ನು ನಮ್ಮಲ್ಲಿ ಅತ್ಯಂತ ಸಂತೋಷದಾಯಕವಾಗಿ ಪ್ರಾಣಿ, ಪಕ್ಷಿ, ಗೋವು, ಮರ-ಗಿಡಗಳೊಂದಿಗೆ ಬೆರೆತು ಕಲಿಯುವ ಅವಕಾಶ ಪೋಷಕರ ಸಹಭಾಗಿತ್ವದೊಂದಿಗೆ ನಿಮ್ಮದಾಗಲಿದೆ. “ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ| ಪ್ರಭಾಕರ್ ಭಟ್ ಕಲ್ಲಡ್ಕ ಹೇಳಿದರು.

ವಿದ್ಯಾರ್ಥಿಗಳು ಹಾಗೂ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ| ಪ್ರಭಾಕರ್ ಭಟ್ ಕಲ್ಲಡ್ಕ ಭಾರತಮಾತೆಗೆ ದೀಪ ಬೆಳಗಿಸಿ ಪುಷ್ಪಾರ್ಚನೆ ಮಾಡಿದರು. ನಂತರ ದಿನನಿತ್ಯದ ಪ್ರಾರ್ಥನೆಯಾದ ಸರಸ್ವತಿ ವಂದನೆ ಅಗ್ನಿಹೋತ್ರದೊಂದಿಗೆ ನಡೆಯಿತು.
ಅಧ್ಯಾಪಕ ವೃಂದದವರು ಬಂದಿರುವಂತಹ ಒಂದನೇ ತರಗತಿಯ ಪುಟಾಣಿಗಳಿಗೆ ಆರತಿ, ಅಕ್ಷತೆ, ತಿಲಕ ಧಾರಣೆ ಮಾಡಿ, ಸಿಹಿ ನೀಡಿ ವಿಶಿಷ್ಟವಾಗಿ ಸ್ವಾಗತಿಸಿದರು.
ವೇದಿಕೆಯಲ್ಲಿ ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕರಾದ ವಸಂತಮಾಧವ, ರಾಷ್ಟ್ರಸೇವಿಕಾ ಸಮಿತಿಯ ಕಾರ್ಯಕಾರಿಣಿ ಸದಸ್ಯರಾದ ಕಮಲಾ ಪ್ರಭಾಕರ ಭಟ್ ಹಾಗೂ ಮುಖ್ಯೋಪಾಧ್ಯಾಯರಾದ ರವಿರಾಜ್ ಕಣಂತೂರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಶಿಕ್ಷಕರಾದ ಹೇಮಲತಾ ನಿರ್ವಹಿಸಿದರು.

More from the blog

ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ – ದಿನೇಶ್ ಗುಂಡೂರಾವ್.. 

ಮಂಗಳೂರು : ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ ಕೈ ಗೊಳ್ಳಲಾಗುವುದುಎಂದು ಅರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಅವರು...

ಕಾರ್ಮಿಕರ ಅಖಿಲ ಭಾರತ ಮುಷ್ಕರದ ಅಂಗವಾಗಿ ಕಾರ್ಮಿಕರ ಪ್ರತಿಭಟನೆ..

ಬಂಟ್ವಾಳ : ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಹಾಗೂ ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳಿಂದ ಅಖಿಲ ಭಾರತ ಮುಷ್ಕರದ ದ ಅಂಗವಾಗಿ ಜೆ.ಸಿ.ಟಿ.ಯು ಮತ್ತು ಸಂಯುಕ್ತ ಹೋರಾಟ...

ಭಾರೀ ಮಳೆ ಮುನ್ಸೂಚನೆ : ಒಂದು ವಾರ ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್..

ಮಂಗಳೂರು : ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 14ರವರೆಗೆ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು,...

ಕುಡ್ತಮುಗೇರು: ಬಸ್ಸಿನಿಂದ ರಸ್ತೆಗೆ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು 

ವಿಟ್ಲ: ಖಾಸಗಿ ಬಸ್ಸಿನಿಂದ ಬಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂಧಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕುಡ್ತಮುಗೇರು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಕೊಡಂಗೆ ನಿವಾಸಿ ಚಿದಾನಂದ ರೈ (43 ವ.) ಮೃತಪಟ್ಟವರು. ಜು.7ರಂದು ಬೆಳಗ್ಗೆ...