Friday, June 27, 2025

ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕದಲ್ಲಿ ಕನ್ನಡ ರಾಜ್ಯೋತ್ಸವ

ಕಲ್ಲಡ್ಕ: ಶ್ರೀರಾಮ ವಿದ್ಯಾಕೇಂದ್ರದ ಕನ್ನಡ ರಾಜ್ಯೋತ್ಸವದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧ್ಯಕ್ಷರಾದ ಡಾ. ಪ್ರಭಾಕರ ಭಟ್ ಕಲ್ಲಡ್ಕ ಇವರು ಧ್ವಜಾರೋಹಣ ಮಾಡಿದರು. ಅಸ್ತಿತ್ವ ಪ್ರತಿಷ್ಠಾನ ಇದರ ಪ್ರಧಾನ ಸಂಚಾಲಕರಾದ ಎಸ್.ಎಂ. ಉಡುಪ ಕನ್ನಡ ರಾಜ್ಯೋತ್ಸವದ ನಿಮಿತ್ತ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ನಿಮಿತ್ತ ಅಸ್ತಿತ್ವ ಪ್ರತಿಷ್ಠಾನವು ವಿದ್ಯಾರ್ಥಿಗಳಿಗೆ ನಡೆಸಿದ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಹಾಗೂ ಗೀತ ಭಾರತಿ ನಡೆಸಿದ ದೇಶಭಕ್ತಿಗೀತೆ ಗಾಯನ ಸ್ಪರ್ಧೆಗಳ ವಿಜೇತರಿಗೆ ಪ್ರಶಸ್ತಿ ವಿತರಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ವಿದ್ಯಾಕೇಂದ್ರದ ಸಂಚಾಲಕರಾದ ವಸಂತ ಮಾಧವ,  ಸಹ ಸಂಚಾಲಕರಾದ ರಮೇಶ್ ಎನ್. ಎಲ್ಲಾ ವಿಭಾಗದ ಮುಖ್ಯಸ್ಥರು, ಶಿಕ್ಷಕರು, ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ರಾಷ್ಟ್ರಗೀತೆ ಹಾಗೂ ನಾಡಗೀತೆಯನ್ನು ಎಲ್ಲರೂ ಜೊತೆಯಾಗಿ ಹಾಡಿದರು. ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಲಕ್ಷ್ಮೀಶ ಕಾರ್ಯಕ್ರಮವನ್ನು ನಿರ್ವಹಿಸಿದರು.

More from the blog

ಪಂತಡ್ಕ : ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ..

ಬಂಟ್ವಾಳ : ನೆಟ್ಲಮುಡ್ನೂರು ಗ್ರಾಮದ ತರ್ಬಿಯತುಲ್ ಇಸ್ಲಾಂ ಮದ್ರಸ ಪಂತಡ್ಕ ಇದರ ವಿದ್ಯಾರ್ಥಿ ಸಂಘಟನೆ ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ ಕಾರ್ಯಕ್ರಮ ಮದ್ರಸ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ಥಳೀಯ...

K. Annamalai – ಬಿಜೆಪಿಯ ನೂತನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಣ್ಣಾಮಲೈ ಆಯ್ಕೆ..

ಅಣ್ಣಾ ಮಲೈಯವರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಬಿಜೆಪಿ ಹೈಕಮಾಂಡ್ ಘೋಷಣೆ ಮಾಡಿದೆ. ಬಿಜೆಪಿಯಲ್ಲಿ ಅಣ್ಣಾ ಮಲೈ ಅವರು ಪಾಪ್ಯುಲರ್ ಆಗಿದ್ದು, ಯುವ ಕಾರ್ಯಕರ್ತರ ಮನಸ್ಸು ಗೆದ್ದಿರುವ ನಾಯಕನಾಗಿ ಮಿಂಚುತ್ತಿದ್ದಾರೆ. ತಮಿಳುನಾಡು ರಾಜ್ಯದ ಬಿಜೆಪಿ ಅಧ್ಯಕ್ಷರಾಗಿದ್ದ ಇವರು...

ಬಡ ಮಗುವಿನ ಚಿಕಿತ್ಸೆ ನೆರವಿಗೆ ಮುಂದಾದ ಸಿದ್ದಕಟ್ಟೆ ಪ್ರಾ. ಕೃ. ಪತ್ತಿನ ಸಹಕಾರ ಸಂಘ…

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಇನ್ನೂ ಹೆಚ್ಚಿನ...

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...