Monday, January 26, 2026

ಕಲ್ಲಡ್ಕದಲ್ಲಿ ಸಂಭ್ರಮ ಸಡಗರದ ಮೊಸರು ಕುಡಿಕೆ ಉತ್ಸವ

ಕಲ್ಲಡ್ಕ ಶ್ರೀರಾಮ‌ಮಂದಿರದ ಶ್ರೀರಾಮಾಂಜನೇಯ ವಿಶ್ವಸ್ಥ ಮಂಡಳಿಯ ಆಶ್ರಯದಲ್ಲಿ 90 ನೇ ವರ್ಷದ ಮೊಸರುಕುಡಿಕೆ ಉತ್ಸವ ಹಾಗೂ ಆಕರ್ಷಕ ಶೋಭಾಯಾತ್ರೆ ಕಲ್ಲಡ್ಕದಲ್ಲಿ ಶುಕ್ರವಾರ ನಡೆಯಿತು.

ಶ್ರೀಕೃಷ್ಣನ ಶೋಭಾಯಾತ್ರೆ ಶ್ರೀರಾಮ ಮಂದಿರದಿಂದ ಹೊರಟು ಕಲ್ಲಡ್ಕ ಪೇಟೆಯಲ್ಲಿ ಸಂಚರಿಸಿ ಕೆ.ಸಿ. ರೋಡ್ ಮೂಲಕ ಸಾಗಿ ಬಂದು ಮಂದಿರದಲ್ಲಿ ಸಮಾಪನಗೊಂಡಿತು.ಶಿಲ್ಪಾಗೊಂಬೆ ಬಳಗ, ತ್ರಿಶೂಲ್ ಫ್ರೆಂಡ್ಸ್ ಕಲ್ಲಡ್ಕ, ಓಂ.ಶಕ್ತಿ ಫ್ರೆಂಡ್ಸ್ ಕಲ್ಲಡ್ಕ ಮೊದಲಾದಸ್ತಬ್ಧ ಚಿತ್ರಗಳು, ವ ಗಮನ ಸೆಳೆದವು. ಶ್ರೀರಾಮ ಶಿಶು ಮಂದಿರ ಮತ್ತು ಪ್ರಾಥಮಿಕ ಶಾಲೆಯ ಪುಟಾಣಿಗಳು ಬಾಲಕೃಷ್ಣ ಪಾತ್ರಧಾರಿಗಳಾಗಿ ಪಾಲ್ಗೊಂಡಿದ್ದರು.

ಶ್ರೀ ರಾಮಾಂಜನೇಯ ವಿಶ್ವಸ್ಥ ಮಂಡಳಿ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಅಧ್ಯಕ್ಷ ಡಾ. ಕೆ. ಪ್ರಭಾಕರ ಭಟ್ ಕಲ್ಲಡ್ಕ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ ಉಳಿಪ್ಪಾಡಿ, ಮಾಜಿ ಶಾಸಕರಾದ ಎ.ರುಕ್ಕಯ ಪೂಜಾರಿ, ಕೆ.ಪದ್ಮನಾಭ ಕೊಟ್ಟಾರಿ, ಪ್ರಮುಖರಾದ ಆರ್.ಚೆನ್ನಪ್ಪ ಕೋಟ್ಯಾನ್, ಸುಲೋಚನಾ ಜಿ.ಕೆ. ಭಟ್, ಕ.ಕೃಷ್ಣಪ್ಪ, ಸುಜಿತ್ ಕೊಟ್ಟಾರಿ, ನಾಗೇಶ್ ಕಲ್ಲಡ್ಕ, ಬಿ.ನಾರಾಯಣ ಸೋಮಯಾಜಿ, ವಸಂತ ಮಾಧವ, ಯತಿನ್ ಕುಮಾರ್, ಪುಷ್ಪರಾಜ್ ಶೆಟ್ಟಿಗಾರ್, ಉತ್ತಮ್ ಕುಮಾರ್ ಪಳನೀರು, ಹರೀಶ್ ಆಚಾರ್ಯ, ದಿನೇಶ್ ಅಮ್ಮೂರು, ಬೊಂಡಾಲ ಜನಾರ್ದನ ಕುಲಾಲ್, ಚಿತ್ತರಂಜನ್ ಹೊಸಕಟ್ಟ, ಮೋನಪ್ಪ ದೇವಸ್ಯ, ವಜ್ರನಾಥ ಕಲ್ಲಡ್ಕ ಸಹಿತ ಸಾರ್ವಜನಿಕರು ಮೆರವಣಿಗೆಯಲ್ಲಿ ಪಾಲ್ಗೊಂಡರು.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...