ಬಂಟ್ವಾಳ: ಮೊಗರ್ನಾಡು ಸಾವಿರ ಸೀಮೆಯ ನಿಟಿಲಾಪುರ ಶ್ರೀ ನಿಟಿಲಾಕ್ಷ ದೇವಸ್ಥಾನ ಸಂಪರ್ಕಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರ ೧.೬೭ ಕೋ.ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಸಂಪರ್ಕ ರಸ್ತೆ ಹಾಗೂ ಗೋಳ್ತಮಜಲು ಗ್ರಾಮದ ಶಿವಶಕ್ತಿ ಬ್ರದರ್ಸ್ ನಿಟಿಲಾಪುರ ಟ್ರಸ್ಟ್ ವತಿಯಿಂದ ದಾನಿಗಳ ಸಹಕಾರದಿಂದ ನಿರ್ಮಾಣಗೊಂಡ ನಿಟಿಲಾಪುರ ಕ್ಷೇತ್ರದ ಮಹಾದ್ವಾರ ಲೋಕಾರ್ಪಣೆಗೊಂಡಿತು.

ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ಅವರು ಕಾಂಕ್ರೀಟ್ ರಸ್ತೆ ಹಾಗೂ ದ್ವಾರವನ್ನು ಉದ್ಘಾಟಿಸಿದರು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಶುಭಹಾರೈಸಿದರು.

ಮಾಜಿ ಶಾಸಕ ಕೆ.ಪದ್ಮನಾಭ ಕೊಟ್ಟಾರಿ ಪ್ರಸ್ತಾವನೆಗೈದರು. ಬಳಿಕ ದೇವಸ್ಥಾನದ ಆವರಣದಲ್ಲಿ ನಿರ್ಮಾಣಗೊಂಡ ಕಾಣಿಕೆ ಹುಂಡಿಯನ್ನು ಉದ್ಘಾಟಿಸಲಾಯಿತು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಎ.ರುಕ್ಮಯ ಪೂಜಾರಿ, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಕಶೆಕೋಡಿ ಸೂರ್ಯನಾರಾಯಣ ಭಟ್, ನಿಟಿಲಾಪುರ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಭಟ್, ಗೋಳ್ತಮಜಲು ಗ್ರಾ.ಪಂ.ಅಧ್ಯಕ್ಷ ಅಭಿಷೇಕ್ ಶೆಟ್ಟಿ, ಉಪಾಧ್ಯಕ್ಷೆ ಲಕ್ಷ್ಮೀ ಪ್ರಭು, ಜಿ.ಪಂ.ಮಾಜಿ ಸದಸ್ಯೆ ಕಮಲಾಕ್ಷಿ ಪೂಜಾರಿ, ಪ್ರಮುಖರಾದ ಮೋನಪ್ಪ ದೇವಸ್ಯ, ಜಗನ್ನಾಥ ಕುಲಾಲ್, ದ್ವಾರ ನಿರ್ಮಾಣದ ಗುತ್ತಿಗೆದಾರ ಗೋಪಾಲ ನೆಲ್ಲಿ, ವ್ಯವಸ್ಥಪನಾ ಸಮಿತಿಯ ಸದಸ್ಯರು, ಗ್ರಾ.ಪಂ.ಸದಸ್ಯರು ಮೊದಲಾದವರು ಉಪಸ್ಥಿತರಿದ್ದರು.

